ಮೆದುಳು ನಿಷ್ಕ್ರೀಯಗೊಂಡ ವ್ಯಕ್ತಿಯ ಅಂಗಾಂಗದಾನ

udp-kmc
Published on

ಉಡುಪಿ : ರಸ್ತೆ ಅಪಘಾತದಲ್ಲಿ ಮೆದುಳು ನಿಷ್ಕ್ರಿಯೆಗೊಂಡಿದ್ದ ವ್ಯಕ್ತಿಯ ಅಂಗಾಂಗಗಳನ್ನು ದಾನ ಮಾಡಲಾಗಿದೆ.

ಜಿಲ್ಲೆಯ ಕೆಮ್ಮಣ್ಣು ನಿವಾಸಿ  ಜೋ ವಿಕ್ಟರ್ ಲೂಯಿಸ್ (46)  ಅವರಿಗೆ ರಸ್ತೆ ಅಪಘಾತ ಸಂಭವಿಸಿತ್ತು. ಗಂಭೀರ ಗಾಯಗೊಂಡವರನ್ನು ಹೆಚ್ಚಿನ ಚಿಕಿತ್ಸೆಗಾಗಿ ಮಣಿಪಾಲದ ಕಸ್ತೂರ್ಬಾ ಆಸ್ಪತ್ರೆಗೆ ದಾಖಲಿಸಲಾಯಿತು. ಸಂಪೂರ್ಣ ವೈದ್ಯಕೀಯ ಚಿಕೆತ್ಸೆಯ ಹೊರತಾಗಿಯೂ ಲೂಯಿಸ್   ಚೇತರಿಸಿಕೊಳ್ಳುವ ಯಾವುದೇ ಲಕ್ಷಣಗಳು ಕಂಡುಬರಲಿಲ್ಲ . ನಂತರ ಮಾನವ ಅಂಗಾಂಗ ಕಸಿ ಕಾಯಿದೆ  ಪ್ರಕಾರ ಪರಿಣಿತ ವೈದ್ಯರ ಸಮಿತಿಯು ಎರಡು ಬಾರಿ ಅಧಿಕೃತವಾಗಿ ಬ್ರೈನ್ ಡೆಡ್ ಎಂದು ಘೋಷಿಸಿತು. ಅವರ ಕುಟುಂಬವು  ಕಾರ್ಯಸಾಧ್ಯವಾದ ಅಂಗಗಳನ್ನು ದಾನ ಮಾಡುವ  ನಿರ್ಧಾರವನ್ನು ತೆಗೆದುಕೊಂಡಿತು. ಲೂಯಿಸ್ ಅವರ ಯಕೃತ್ತನ್ನು ಕೆಎಂಸಿ ಆಸ್ಪತ್ರೆ ಮಂಗಳೂರು, ಒಂದು ಕಿಡ್ನಿಯನ್ನು ಮಂಗಳೂರಿನ ಯೆನೆಪೊಯ ಆಸ್ಪತ್ರೆಗೆ ಮತ್ತು ಒಂದು ಕಿಡ್ನಿಯನ್ನು ಮಂಗಳೂರಿನ ಇಂಡಿಯಾನಾ ಆಸ್ಪತ್ರೆಗೆ ಕಳುಹಿಸಲಾಯಿತು. ಎರಡು ಕಾರ್ನಿಯಾಗಳನ್ನು ಮತ್ತು ಚರ್ಮವನ್ನು  ಮಣಿಪಾಲದಲ್ಲಿನ ನೋಂದಾಯಿತ  ರೋಗಿಗಳಿಗೆ ಬಳಸಲು  ಉಳಿಸಿಕೊಳ್ಳಲಾಯಿತು ಎಂದು ವೈದ್ಯಕೀಯ ಅಧೀಕ್ಷಕ ಡಾ.ಅವಿನಾಶ್ ಶೆಟ್ಟಿ ತಿಳಿಸಿದ್ದಾರೆ. 

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net