ಮಿದುಳು ನಿಷ್ಕ್ರಿಯಗೊಂಡ ವ್ಯಕ್ತಿಯ ಅಂಗಾಂಗ ದಾನ

Mr, Kumara Nayaka
Published on

ಮೈಸೂರು: ಮಿದುಳು ನಿಷ್ಕ್ರಿಯಗೊಂಡ ವ್ಯಕ್ತಿಯ ಅಂಗಾಂಗ ದಾನ ಮಾಡುವ ಮೂಲಕ 4 ಜನರ ಪ್ರಾಣ ಉಳಿಸಿ ಮಾನವೀಯತೆ ಮೆರೆಯಲಾಗಿದೆ.


ನಗರದ ಅಗ್ರಹಾರ ನಿವಾಸಿ 52 ವರ್ಷದ ಎಂ.ಕುಮಾರ ನಾಯ್ಕ ಎಂಬುವರು ನಾಲ್ಕು ಜನರ ಬಾಳಿಗೆ ಬೆಳಕಾದವರು.

ಗಂಭೀರ ಸ್ಥಿತಿಯಲ್ಲಿದ್ದ ಎಂ.ಕುಮಾರ ನಾಯ್ಕ ಅವರನ್ನು ಡಿ.3 ರಂದು ಅಪೊಲೋ ಬಿಜಿಎಸ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆರಂಭಿಕ ಸಿಟಿ ಸ್ಕ್ಯಾನ್‌ನಿಂದ ಅವರ ಮಿದುಳು ಕಾಂಡವು ಊದಿಕೊಂಡಿರುವುದು ಪತ್ತೆಯಾಯಿತು. ತಕ್ಷಣ ಅವರನ್ನು ಜೀವ ರಕ್ಷಕ ವ್ಯವಸ್ಥೆ ಮತ್ತು ತುರ್ತು ಆರೈಕೆಗಾಗಿ ತೀವ್ರ ನಿಗಾ ಘಟಕಕ್ಕೆ (ಐಸಿಯು) ದಾಖಲಿಸಲಾಯಿತು. ಅವರನ್ನು ಜೀವರಕ್ಷಕ ವ್ಯವಸ್ಥೆಯಲ್ಲಿ ಇರಿಸಲಾಯಿತು ಮತ್ತು ಅವರ ಸ್ಥಿತಿ ಅತ್ಯಂತ ಗಂಭೀರವಾಗಿತ್ತು. ಡಿ.5 ರಂದು ರಾತ್ರಿ 9.30ಕ್ಕೆ ಅವರ ಮಿದುಳು ನಿಷ್ಕ್ರಿಯವಾಗಿದೆ ಎಂದು ವೈದ್ಯರು ಖಚಿತಪಡಿಸಿದರು. ಅಂಗಾಂಗ ದಾನ ಮಾಡಲು ಅವರ ಕುಟುಂಬದವರು ಒಪ್ಪಿಗೆ ಸೂಚಿಸಿದರು. ವಿವಿಧ ಪರೀಕ್ಷೆಗಳಿಂದ ಅವರು ಅಂಗಾಂಗ ದಾನಕ್ಕೆ ಅರ್ಹರು ಎಂಬುದನ್ನು ಖಚಿತಪಡಿಸಿಕೊಳ್ಳಲಾಯಿತು. ಬಳಿಕ ಸರ್ಕಾರಿ ಮಾರ್ಗಸೂಚಿ ಪ್ರಕಾರ ಅಂಗಾಂಗ ದಾನ ಪ್ರಕ್ರಿಯೆ ನಡೆಸಲಾಯಿತು.
ಹೃದಯ ಕವಾಟಗಳನ್ನು ಬೆಂಗಳೂರಿನ ಮಣಿಪಾಲ್ ಆಸ್ಪತ್ರೆಗೆ, ಲಿವರ್ ಅನ್ನು ಅಪೋಲೊ ಬಿಜಿಎಸ್ ಆಸ್ಪತ್ರೆಗೆ ಹಾಗೂ ಕಾರ್ನಿಯಾಸ್ ಅನ್ನು ಮೈಸೂರಿನ ಜೆಎಸ್‌ಎಸ್ ಆಸ್ಪತ್ರೆಗೆ ದಾನ ಮಾಡಲಾಯಿತು ಎಂದು ಅಪೊಲೋ ಬಿಜಿಎಸ್ ಆಸ್ಪತ್ರೆಯ ಉಪಾಧ್ಯಕ್ಷ ಎನ್.ಜಿ.ಭರತೀಶ್ ರೆಡ್ಡಿ ತಿಳಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net