ಅಂಗಾಂಗ ಕಸಿ ಜೋಡಣೆಗಾಗಿ ರಾಜ್ಯಮಟ್ಟದ ಸಮಿತಿ ರಚನೆ

organ donation
Published on

ಬೆಂಗಳೂರು: ರಾಜ್ಯದಲ್ಲಿ ಮಾನವ ಅಂಗಾಂಗ ಮತ್ತು ಅಂಗಾಂಶಗಳ ಕಸಿಗಾಗಿ ರಾಜ್ಯಮಟ್ಟದ ಅಧಿಕಾರಯುಕ್ತ ಸಮಿತಿಯನ್ನು ಪುನಾರಚಿಸಿ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಆದೇಶ ಹೊರಡಿಸಿದೆ. ಹಿಂದಿನ ಸಮಿತಿಯ ಅಧಿಕಾರವಧಿ ಮುಕ್ತಾಯಗೊಂಡಿರುವ ಹಿನ್ನೆಲೆ ಹೊಸದಾಗಿ ಸಮಿತಿ ರಚಿಸಿದ್ದು, ಇದರಲ್ಲಿ ನೆ್ರೆೆ ಯುರಾಲಜಿ ಸಂಸ್ಥೆಯ ನಿರ್ದೇಶಕರ ಅಧ್ಯಕ್ಷತೆಯಲ್ಲಿ 7 ಮಂದಿಯ ಸಮಿತಿ ರಚನೆಗೊಂಡಿದೆ. ಅಧ್ಯಕ್ಷರ ಹೊರತಾಗಿ ನಿವೃತ್ತ ಹಿರಿಯ ಶಸಚಿಕಿತ್ಸಕ ಡಾ.ಎಲ್. ಮೂರ್ತಿ, ಬೆಂಗಳೂರು ವೈದ್ಯಕೀಯ ಮಹಾವಿದ್ಯಾಲಯದ ಕಮ್ಯುನಿಟಿ ಮೆಡಿಸಿನ್‌ನ ವಿಭಾಗೀಯ ಮುಖ್ಯಸ್ಥ ಡಾ.ಟಿ.ಎಸ್. ರಂಗನಾಥ್, ರಾಜ್ಯ ಉಚ್ಚ ನ್ಯಾಯಾಲಯದ ನಿವೃತ್ತ ನ್ಯಾಯಮೂರ್ತಿ ಸಿ.ಆರ್. ಕುಮಾರಸ್ವಾಮಿ, ಬೆಂಗಳೂರು ವೈದ್ಯಕೀಯ ಕಾಲೇಜಿನ ನಿವೃತ್ತ ಪ್ರಾಧ್ಯಾಪಕಿ ಮತ್ತು ಸೀರೋಗ ತಜ್ಞೆ ಡಾ. ಚಿತ್ರಾ ರಾಮಮೂರ್ತಿ, ಆರೋಗ್ಯ ಇಲಾಖೆಯ ಮುಖ್ಯ ಕಾರ್ಯದರ್ಶಿ ಅಥವಾ ಪ್ರಧಾನ ಕಾರ್ಯದರ್ಶಿ, ಕಾರ್ಯದರ್ಶಿ ಅಥವಾ ಇಲಾಖೆಯ ನಿರ್ದೇಶಕರಲ್ಲೊಬ್ಬರನ್ನು ಸಮಿತಿಯ ಸದಸ್ಯರನ್ನಾಗಿ ನೇಮಿಸಲಾಗಿದೆ. ಸಮಿತಿಯ ಅಧ್ಯಕ್ಷ ಹಾಗೂ ಆರೋಗ್ಯ ಇಲಾಖೆಯ ಮುಖ್ಯ ಕಾರ್ಯದರ್ಶಿ ಅಥವಾ ಪ್ರಧಾನ ಕಾರ್ಯದರ್ಶಿ ಅಥವಾ ಕಾರ್ಯದರ್ಶಿ ಮತ್ತು ಇಲಾಖೆ ನಿರ್ದೇಶಕರನ್ನು ಹೊರತುಪಡಿಸಿದ ಉಳಿದ ಎಲ್ಲ ಸದಸ್ಯರ ಅವಧಿ ಎರಡು ವರ್ಷದ್ದಾಗಿರುತ್ತದೆ ಎಂದು ಆದೇಶದಲ್ಲಿ ತಿಳಿಸಲಾಗಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net