ಸಂಘಟಿತರಾದಾಗ ಸರ್ಕಾರಿ ಸೌಲಭ್ಯ ಸಿಗಲು ಸಾಧ್ಯ

26 Sirwar 1
Published on

ಸಿರವಾರ: ಪಟ್ಟಣದ ಈಶ್ವರ ದೇವಸ್ಥಾನದಲ್ಲಿ ಗಾಣಿಗ ಸಮಾಜದ ತಾಲೂಕು ಘಟಕದ ಪದಾಧಿಕಾರಿಗಳ ಪದಗ್ರಹಣ ಹಾಗೂ ಸನ್ಮಾನ ಸಮಾರಂಭ ಶನಿವಾರ ನಡೆಯಿತು.
ಗಾಣಿಗ ಸಮಾಜದ ಜಿಲ್ಲಾ ಅಧ್ಯಕ್ಷ ಚನ್ನಪ್ಪ ಸಜ್ಜನ್ ಮಾತನಾಡಿ, ಸಮುದಾಯವನ್ನು ಸಂಘಟನೆ ಮಾಡಿ ಮುಂದೆ ತರಬೇಕಿದೆ. ಸಂಘಟಿತರಾದಾಗ ಸರ್ಕಾರದ ಸೌಲಭ್ಯ ದೊರೆಯುತ್ತವೆ. ಮಕ್ಕಳಿಗೆ ಶಿಕ್ಷಣ ನೀಡಿ ವಿದ್ಯಾವಂತನ್ನಾಗಿ ಮಾಡಬೇಕು. ಎಲ್ಲ ಕ್ಷೇತ್ರಗಳಲ್ಲೂ ಅಭಿವೃದ್ಧಿ ಹೊಂದುವ ಮೂಲಕ ಸಮಾಜದ ಮುಖ್ಯ ವಾಹಿನಿಗೆ ಬರಬೇಕಿದೆ ಎಂದರು.

ನೀಲೊಗಲ್ ಬೃಹನ್ಮಠದ ಡಾ.ಪಂಚಾಕ್ಷರಿ ಶಿವಾಚಾರ್ಯ ಸ್ವಾಮೀಜಿ ಕಾರ್ಯಕ್ರಮ ಉದ್ಘಾಟಿಸಿದರು. ರಾಯಚೂರಿನ ಸೋಮವಾರಪೇಟೆ ಹಿರೇಮಠದ ಅಭಿನವ ರಾಚೋಟಿವೀರ ಶಿವಾಚಾರ್ಯ ಸ್ವಾಮೀಜಿ , ನವಲಕಲ್ ಬೃಹನ್ಮಠದ ಅಭಿನವ ಸೋಮನಾಥ ಶಿವಾಚಾರ್ಯ ಸ್ವಾಮೀಜಿ, ಚನ್ನವೀರ ದೇವರು ಗದ್ದುಗೆಮಠ, ಜಾಗಟಗಲ್ ಬೆಟ್ಟದಯ್ಯಪ್ಪ ತಾತ, ಯರಮರಸ್ ಚರಬಸವ ಸ್ವಾಮಿ ಸಾನ್ನಿಧ್ಯ ವಹಿಸಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net