ಬೂತ್, ಗ್ರಾಪಂ ಮಟ್ಟದಲ್ಲಿ ಸಭೆ ಆಯೋಜನೆ

nrp cong
ಎನ್.ಆರ್.ಪುರದಲ್ಲಿ ನಡೆದ ಕಾಂಗ್ರೆಸ್ ಆತ್ಮಾವಲೋಕನ ಸಭೆಯಲ್ಲಿ ಜಿಲ್ಲಾಧ್ಯಕ್ಷ ಡಾ. ಕೆ.ಪಿ.ಅಂಶುಮಂತ್ ಅವರನ್ನು ಅಭಿನಂದಿಸಲಾಯಿತು. ಗೇರ್‌ಬೈಲ್ ನಟರಾಜ್, ಈಚಿಕೆರೆ ಸುಂದರೇಶ್, ಸುನೀಲ್‌ಕುಮಾರ್, ಪಿ.ಆರ್.ಸದಾಶಿವ, ಬಿಳಾಲುಮನೆ ಉಪೇಂದ್ರ, ಎಸ್.ಡಿ.ರಾಜೇಂದ್ರ, ಎಚ್.ಎಂ.ಮನು, ಬಿ.ಎಸ್.ಸುಬ್ರಹ್ಮಣ್ಯ, ದೇವಂತ್ ಇದ್ದರು.
Published on

ಎನ್.ಆರ್.ಪುರ: ಲೋಕಸಭಾ ಚುನಾವಣೆಯಲ್ಲಿ ಕ್ಷೇತ್ರದಲ್ಲಿ, ಬ್ಲಾಕ್‌ನಲ್ಲಿ ಕಾಂಗ್ರೆಸ್‌ಗೆ ಹಿನ್ನಡೆಯಾಗಿದೆ. ಮುಂದಿನ ದಿನಗಳಲ್ಲಿ ಬೂತ್ ಮಟ್ಟದಲ್ಲಿ ಪ್ರತಿ ತಿಂಗಳೂ ಸಭೆ ಹಾಗೂ ಗ್ರಾಪಂ ಮಟ್ಟದಲ್ಲಿ ಮೂರು ತಿಂಗಳಿಗೊಮ್ಮೆ ಸಭೆ ನಡೆಸಿ ಕಾರ್ಯಕರ್ತರ ಹಾಗೂ ಜನರ ಅಹವಾಲುಗಳನ್ನು ಸ್ವೀಕರಿಸಲಾಗುವುದು ಎಂದು ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಡಾ. ಕೆ.ಪಿ.ಅಂಶುಮಂತ್ ಹೇಳಿದರು.

ಶನಿವಾರ ಹಳೇಪೇಟೆ ಕಾಂಗ್ರೆಸ್ ಕಚೇರಿಯಲ್ಲಿ ಪಕ್ಷದ ಆತ್ಮಾವಲೋಕನಾ ಸಭೆಯಲ್ಲಿ ಅಭಿನಂದನೆ ಸ್ವೀಕರಿಸಿ ಮಾತನಾಡಿ, ಮುಂದಿನ ಜಿಪಂ ಹಾಗೂ ತಾಪಂ ಚುನಾವಣೆಗಳನ್ನು ಎದುರಿಸಲು ಕಾಂಗ್ರೆಸ್ ಹಾಗೂ ಕಾರ್ಯಕರ್ತರು ಸಜ್ಜಾಗಿದ್ದಾರೆ. ಎಲ್ಲ ಚುನಾವಣೆಯಲ್ಲೂ ಗೆಲ್ಲುವ ಆಶಾಭಾವನೆ ಇದೆ ಎಂದರು.
ಜನರು ಶಾಸಕರ ಬೆನ್ನೆಲುಬಾಗಿದ್ದಾರೆ. ಪಕ್ಷದ ಕಾರ್ಯಕರ್ತರು, ಮುಖಂಡರು ಶಾಸಕರ ಕೈಬಲಪಡಿಸಬೇಕು. ಸಿಎಂ ಹಾಗೂ ಡಿಸಿಎಂ ಇಬ್ಬರೂ ಸಭೆ ಮೂಲಕ ಕಾರ್ಯಕರ್ತರ ಅಹವಾಲುಗಳನ್ನು ಸ್ವೀಕರಿಸಿ, ಕಾರ್ಯಕರ್ತರ ಸಭೆ ನಡೆಸಿದ್ದಾರೆ. ನಿರಂತರವಾಗಿ ಕಾರ್ಯಕರ್ತರೊಂದಿಗೆ ಹಾಗೂ ಜನರೊಂದಿಗೆ ಸಂಪರ್ಕ ಸಾಧಿಸಲು ಅಭಿಯಾನ ರೀತಿಯಲ್ಲಿ ಕೆಲಸ ಮಾಡುತ್ತಿದ್ದಾರೆ ಎಂದರು.
ಕೆಪಿಸಿಸಿ ಸದಸ್ಯ ಪಿ.ಆರ್.ಸದಾಶಿವ ಮಾತನಾಡಿ, ರಾಹುಲ್ ಗಾಂಧಿ ವಿಪಕ್ಷ ನಾಯಕರಾದ ನಂತರ ಕಾರ್ಯಕರ್ತರಲ್ಲಿ ಉತ್ಸಾಹ ಹೆಚ್ಚಾಗಿದೆ. ಕಾಂಗ್ರೆಸ್ ಎಂದಿಗೂ ಸದೃಢವಾಗಿರುತ್ತದೆ. ಮುಂದೆ ಬರುವ ಜಿಪಂ, ತಾಪಂ ಚುನಾವಣೆಗಳಲ್ಲಿ ಕಾಂಗ್ರೆಸ್ ಆಡಳಿತ ಚುಕ್ಕಾಣಿ ಹಿಡಿಯಲಿದೆ ಎಂದು ಹೇಳಿದರು.
ನಗರ ಘಟದ ಅಧ್ಯಕ್ಷ ಬಿಳಾಲುಮನೆ ಉಪೇಂದ್ರ, ಕಾಂಗ್ರೆಸ್ ಮುಖಂಡರಾದ ಈಚಿಕೆರೆ ಸುಂದರೇಶ್, ಸುನೀಲ್‌ಕುಮಾರ್, ಎಸ್.ಡಿ.ರಾಜೇಂದ್ರ, ದೇವಂತ್, ಎಚ್.ಎಂ.ಮನು, ಸಾಜು, ಬಿ.ಎಸ್.ಸುಬ್ರಹ್ಮಣ್ಯ, ಬಿನು ಇತರರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net