ಸಹಕಾರದಿಂದ ಸಂಘಟನೆ ಮುನ್ನಡೆ: ಶಂಕರ್ ಎಂ.ಕೋಟ್ಯಾನ್ ಅಭಿಮತ

Mbd_Yuvavahini
Published on

ಮೂಡುಬಿದಿರೆ: ಹಲವಾರು ಉತ್ತಮ ಜನಪರ ಕೆಲಸ ಮಾಡಿದ್ದೇವೆ. ತಂಡದ ಪರಿಶ್ರಮ, ಕುಟುಂಬದವ ಸಹಕಾರದಿಂದ ಸಂಘಟನೆ ಮುನ್ನಡೆಸಲು ಸಾಧ್ಯವಾಗಿದೆ ಎಂದು ಘಟಕದ ನಿರ್ಗಮಿತ ಅಧ್ಯಕ್ಷ ಶಂಕರ್ ಎಂ.ಕೋಟ್ಯಾನ್ ಹೇಳಿದರು.

ಕನ್ನಡ ಭವನದಲ್ಲಿ ಯುವವಾಹಿನಿ ಮೂಡುಬಿದಿರೆ ಘಟಕದ ನೂತನ ಅಧ್ಯಕ್ಷ ಮುರಳೀಧರ ಕೋಟ್ಯಾನ್ ಹಾಗೂ ಅವರ ತಂಡದ ಪದಾಧಿಕಾರಿಗಳ ಪದಗ್ರಹಣ ಸಮಾರಂಭ ಅಧ್ಯಕ್ಷತೆ ವಹಿಸಿ ಮಾತನಾಡಿದರು.

ಬ್ಯಾಂಕ್ ನಿವೃತ್ತ ಉದ್ಯೋಗಿ ಪದ್ಮನಾಭ ಸಾಲ್ಯಾನ್ ಉದ್ಘಾಟಿಸಿದರು. ಯುವವಾಹಿನಿ ಕೇಂದ್ರ ಸಮಿತಿ ಅಧ್ಯಕ್ಷ ಹರೀಶ್ ಕೆ.ಪೂಜಾರಿ ಪ್ರತಿಜ್ಞಾವಿಧಿ ಬೋಧಿಸಿದರು.

ಬಿಜೆಪಿ ಮಾಜಿ ಜಿಲ್ಲಾಧ್ಯಕ್ಷ ಸುದರ್ಶನ್ ಎಂ.ಮಾತನಾಡಿ, 37 ವಾರ್ಷಿಕ ಸಮ್ಮೇಳನ ಮೂಡುಬಿದಿರೆಯಲ್ಲಿ ಯಶಸ್ವಿಯಾಗಿ ನಡೆದಿರುವುದು ಹೆಮ್ಮೆ ವಿಷಯ. ಹಿಂದಿನ ಅಧ್ಯಕ್ಷರು 12 ಲಕ್ಷ ರೂ.ವೆಚ್ಚದ ಬಜೆಟ್‌ನಲ್ಲಿ ಅಭಿವೃದ್ಧಿ ಕಾರ್ಯಗಳನ್ನು ಮಾಡಿದ್ದಾರೆ. ಮುಂದಿನ ಅಧ್ಯಕ್ಷರು 20 ಲಕ್ಷದ ಬಜೆಟ್‌ನಲ್ಲಿ ಅಭಿವೃದ್ಧಿ ಕಾರ್ಯಗಳನ್ನು ಮಾಡುವಂತಾಗಲಿ ಎಂದರು.

ಕಂಬಳ ಕ್ಷೇತ್ರದ ಸಾಧಕ ಇರುವೈಲ್ ಪಾಣಿಲ ಸತೀಶ್ಚಂದ್ರ ಸಾಲ್ಯಾನ್ ಹಾಗೂ ಸಾಧಕ ಕ್ರೀಡಾಪಟು ಶಮಿತಾ ಶಿರ್ವ ಅವರನ್ನು ಸನ್ಮಾನಿಸಲಾಯಿತು. ಪುರಸಭೆ ಸದಸ್ಯ ಸುರೇಶ್ ಕೋಟ್ಯಾನ್, ಉದ್ಯಮಿ ರಂಜಿತ್ ಪೂಜಾರಿ, ಯುವವಾಹಿನಿ ಕೇಂದ್ರ ಸಮಿತಿ ಪ್ರಧಾನ ಕಾರ್ಯದರ್ಶಿ ಜಗದೀಶ್ ಚಂದ್ರ ಡಿ.ಕೆ.ಉಪಸ್ಥಿತರಿದ್ದರು.

ನಿರ್ಗಮನ ಕಾರ್ಯದರ್ಶಿ ಗಿರೀಶ್ ಕೋಟ್ಯಾನ್ ವಾರ್ಷಿಕ ವರದಿ ವಾಚಿಸಿದರು. ಸ್ಮಿತೇಶ್ ನಿರೂಪಿಸಿದರು. ನಿಯೋಜಿತ ಕಾರ್ಯದರ್ಶಿ ವಿನೀತ್ ಕುಮಾರ್ ವಂದಿಸಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net