ರಾಜ್ಯಕ್ಕೆ ಮಾದರಿಯಾಗುವಂತೆ ಶಿಬಿರ ಆಯೋಜಿಸಿ

ಕೊಳ್ಳೇಗಾಲ ಪಟ್ಟಣದ ಎಂಜಿಎಸ್‌ವಿ ಕಾಲೇಜು ಮೈದಾನದಲ್ಲಿ ಆಯೋಜಿಸಿರುವ ಮೆಗಾ ಅರೋಗ್ಯ ತಪಾಸಣಾ ಶಿಬಿರದ ಸಿದ್ಧತೆಯನ್ನು ಡಿಸಿ ಶಿಲ್ಪಾನಾಗ್ ಪರಿಶೀಲಿಸಿದರು. ಮಹೇಶ್, ಮಂಜುಳಾ, ಚಿದಂಬರಂ, ರಾಜಶೇಖರ್, ಗೋಪಾಲ್ ಇತರರು ಇದ್ದರು.
ಕೊಳ್ಳೇಗಾಲ ಪಟ್ಟಣದ ಎಂಜಿಎಸ್‌ವಿ ಕಾಲೇಜು ಮೈದಾನದಲ್ಲಿ ಆಯೋಜಿಸಿರುವ ಮೆಗಾ ಅರೋಗ್ಯ ತಪಾಸಣಾ ಶಿಬಿರದ ಸಿದ್ಧತೆಯನ್ನು ಡಿಸಿ ಶಿಲ್ಪಾನಾಗ್ ಪರಿಶೀಲಿಸಿದರು. ಮಹೇಶ್, ಮಂಜುಳಾ, ಚಿದಂಬರಂ, ರಾಜಶೇಖರ್, ಗೋಪಾಲ್ ಇತರರು ಇದ್ದರು.
Published on

ಕೊಳ್ಳೇಗಾಲ: ಕೊಳ್ಳೇಗಾಲದ ಎಂಜಿಎಸ್‌ವಿ ಜೂನಿಯರ್ ಕಾಲೇಜು ಮೈದಾನದಲ್ಲಿ ಜ.29 ರಂದು ಏರ್ಪಡಿಸಿರುವ ಮೆಗಾ ಆರೋಗ್ಯ ತಪಾಸಣಾ ಶಿಬಿರವನ್ನು ರಾಜ್ಯಕ್ಕೆ ಮಾದರಿಯಾಗುವಂತೆ ಯಶಸ್ವಿಗೊಳಿಸಬೇಕೆಂದು ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಶಿಲ್ಪಾನಾಗ್ ಸೂಚನೆ ನೀಡಿದರು.

ಜಿಲ್ಲಾ ಹಾಗೂ ತಾಲೂಕು ಮಟ್ಟದ ವಿವಿಧ ಇಲಾಖೆಯ ಅಧಿಕಾರಿಗಳೊಂದಿಗೆ ಎಂಜಿಎಸ್‌ವಿ ಜೂನಿಯರ್ ಕಾಲೇಜಿಗೆ ಬುಧವಾರ ಭೇಟಿ ನೀಡಿ ಪರಿಶೀಲನೆ ನಡೆಸಿ ಮಾತನಾಡಿದರು.

ಸರ್ಕಾರ ಆಯೋಜಿಸಿರುವ ಆರೋಗ್ಯ ತಪಾಸಣಾ ಶಿಬಿರವನ್ನು ಅಚ್ಚುಕಟ್ಟಾಗಿ ಆಯೋಜನೆ ಮಾಡಬೇಕು. ಪಾರ್ಕಿಂಗ್ ವ್ಯವಸ್ಥೆ, ಮೊಬೈಲ್ ಶೌಚಗೃಹ ನಿರ್ಮಾಣ ಮಾಡಬೇಕು. ಶಿಬಿರದಲ್ಲಿ ಸುಮಾರು 5 ಸಾವಿರ ಜನ ಪಾಲ್ಗೊಳ್ಳುವ ನಿರೀಕ್ಷೆ ಇದೆ. ಮೂಲಸೌಕರ್ಯಗಳ ವ್ಯವಸ್ಥೆಗೆ ಸಮಸ್ಯೆ ಆಗದಂತೆ ಕ್ರಮವಹಿಸಬೇಕು. ನಗರಸಭೆ ಸ್ವಚ್ಛತಾ ಕಾರ್ಯದ ಬಗ್ಗೆ ಎಚ್ಚರ ವಹಿಸಬೇಕು ಎಂದರು.

ಜ.29ರಂದು ಬೆಳಗ್ಗೆ 7ಗಂಟೆಯಿಂದ ಶಿಬಿರ ಪ್ರಾರಂಭವಾಗಲಿದ್ದು, 10 ಗಂಟೆಗೆ ವೇದಿಕೆ ಕಾರ್ಯಕ್ರಮ ನಡೆಯಲಿದ್ದು, ಆರೋಗ್ಯ ಸಚಿವರು ಹಾಗೂ ಸ್ಥಳೀಯ ಶಾಸಕರು ಉಪಸ್ಥಿತರಿರಲಿದ್ದಾರೆ. ಆರೋಗ್ಯ ಸಚಿವ ದಿನೇಶ್ ಗೂಂಡುರಾವ್ ಅವರು ಸಭೆ ನಡೆಸಿ ಈ ಬಗ್ಗೆ ಹಲವು ನಿರ್ದೇಶನಗಳನ್ನು ನೀಡಿದ್ದಾರೆ ಎಂದರು.
ಸಿಎಚ್‌ಸಿ ಹಾಗೂ ಪಿಎಚ್‌ಸಿ ಕೇಂದ್ರಗಳಲ್ಲಿ ಪ್ರಾಥಮಿಕ ಸ್ಕ್ರೀನಿಂಗ್ ಪ್ರಾರಂಭವಾಗಿದೆ. ಬೇರೆ ತಾಲೂಕಿನಿಂದ ಬರುವವರಿಗೆ ಸ್ಥಳದಲ್ಲಿಯೇ ನೋಂದಣಿ ಮಾಡಿ ತಪಾಸಣೆ ಮಾಡಲಾಗುತ್ತದೆ. ಗ್ರಾಮೀಣ ಪ್ರದೇಶಗಳಿಂದ ಬರುವವರಿಗೆ 60 ಮಿನಿ ಬಸ್ ವ್ಯವಸ್ಥೆ ಮಾಡಲಾಗಿದೆ ಎಂದು ಮಾಹಿತಿ ನೀಡಿದರು.

ಸಿಇಒ ಆನಂದ ಪ್ರಕಾಶ್ ಮೀನಾ, ಡಿಎಚ್‌ಒ ಚಿದಂಬರಂ, ಉಪವಿಭಾಗಾಧಿಕಾರಿ ಬಿ.ಆರ್. ಮಹೇಶ್, ತಹಸೀಲ್ದಾರ್ ಮಂಜುಳಾ, ಟಿಎಚ್‌ಒ ಗೋಪಾಲ್, ಉಪವಿಭಾಗ ಆಸ್ಪತ್ರೆಯ ಆಡಳಿತ ಅಧಿಕಾರಿ ಡಾ. ರಾಜಶೇಖರ್, ನಗರಸಭೆ ಆಯುಕ್ತ ರಮೇಶ್ ಇತರರು ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net