ಬೂತ್ ಮಟ್ಟದಲ್ಲಿ ಪಕ್ಷ ಸಂಘಟಿಸಿ

8 ಎಸ್ಕೆಪಿ 1b
Published on

ಶಿಕಾರಿಪುರ: ಪ್ರತಿಯೊಬ್ಬ ಕಾರ್ಯಕರ್ತನೂ ಪಕ್ಷದ ಆಸ್ತಿ. ತಾಲೂಕು ಮಟ್ಟದಲ್ಲಿ ಪಕ್ಷವನ್ನು ಇನ್ನಷ್ಟು ಗಟ್ಟಿಗೊಳಿಸಲು ಕಾರ್ಯಕರ್ತರು ಮುಂದಾಗಬೇಕು ಎಂದು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಹುಲ್ಮಾರ್ ಮಹೇಶ್ ತಿಳಿಸಿದರು.

ರಾಜ್ಯದಲ್ಲಿ ಕಾಂಗ್ರೆಸ್ ಸಮರ್ಥವಾಗಿ ಐದು ವರ್ಷ ಜನಪರ, ಜಾತ್ಯತೀತ ನೆಲೆಗಟ್ಟಿನಲ್ಲಿ ಆಡಳಿತ ನಡೆಸಲಿದೆ. ಜನರ ಆಶೀರ್ವಾದದಿಂದ ನಮ್ಮ ಪಕ್ಷ ಅಽಕಾರಕ್ಕೆ ಬಂದಿದೆ. ಸರ್ಕಾರದ ಯೋಜನೆಗಳನ್ನು ಜನರಿಗೆ ತಲುಪಿಸುವ ಜವಾಬ್ದಾರಿ ನಮ್ಮೆಲ್ಲರ ಮೇಲಿದೆ ಎಂದು ಮಂಗಳವಾರ ಸುದ್ದಿಗೋಷ್ಠಿಯಲ್ಲಿ ಹೇಳಿದರು.
ರಾಜ್ಯದ ಜನರು ಹಿಂದಿನ ಬಿಜೆಪಿ ಸರ್ಕಾರದ ದುರಾಡಳಿತಕ್ಕೆ ಬೇಸತ್ತಿದ್ದು ಕಾಂಗ್ರೆಸ್ ಪಕ್ಷದ ಮೇಲೆ ವಿಶ್ವಾಸವಿಟ್ಟು ಗೆಲ್ಲಿಸಿದ್ದಾರೆ. ಅವರ ನಂಬಿಕೆ ಉಳಿಸಿಕೊಳ್ಳಲು ಪಕ್ಷದ ಕಾರ್ಯಕರ್ತರು ಜನರ ಸಂಕಷ್ಟಗಳಿಗೆ ಸ್ಪಂದಿಸಿ ಕೆಲಸ ಮಾಡಬೇಕು ಎಂದರು.
ಶಿಶುವಿಹಾರ ರಸ್ತೆಯಲ್ಲಿ ಪಕ್ಷದ ನೂತನ ಕಚೇರಿ ನಿರ್ಮಾಣವಾಗಿದ್ದು ಆ.14ರಂದು ಲೋಕಾರ್ಪಣೆಗೊಳಿಸಲಾಗುವುದು. ಜನಸಾಮಾನ್ಯರು, ಕಾರ್ಯಕರ್ತರು ಇಲ್ಲಿಗೆ ಬಂದು ತಮ್ಮ ಸಮಸ್ಯೆಗಳ ಅಹವಾಲು ಸಲ್ಲಿಸಬಹುದಾಗಿದ್ದು ಅದಕ್ಕೆ ಪರಿಹಾರ ಕೊಡಿಸಲು ಪ್ರಾಮಾಣಿಕ ಪ್ರಯತ್ನ ಮಾಡಲಾಗುವುದು ಎಂದರು.
ಪುರಸಭೆ ಸದಸ್ಯ ಉಳ್ಳಿ ದರ್ಶನ್, ಗಾಮ ದಯಾನಂದ್, ಪುಷ್ಪಾ ಶಿವಕುಮಾರ್, ಜಯಶ್ರೀ ಹೇಮರಾಜ್, ತಿಮ್ಮಣ್ಣ, ಬ್ಲಾಕ್, ಮಂಜಾನಾಯ್ಕ್, ಭಂಡಾರಿ ಮಾಲತೇಶ್, ಶಿವಾನಾಯ್ಕ್ ಇತರರಿದ್ದರು

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net