

ಗುಂಡ್ಲುಪೇಟೆ: ರೈತರು ತಮ್ಮ ಮೇಲೆ ನಿರಂತರವಾಗಿ ನಡೆಯುತ್ತಿರುವ ಶೋಷಣೆಗಳನ್ನು ತಡೆಯಲು ಸಂಘಟಿತರಾಗಬೇಕಾಗಿದೆ ಎಂದು ರಾಜ್ಯ ರೈತ ಸಂಘದ ಉಪಾಧ್ಯಕ್ಷ ಡಾ.ಗುರುಪ್ರಸಾದ್ ಹೇಳಿದರು.
ತಾಲೂಕಿನ ರಂಗೂಪುರ ಗ್ರಾಮದಲ್ಲಿ ಶನಿವಾರ ರೈತ ಸಂಘ ಹಸಿರು ಸೇನೆಯ ಗ್ರಾಮ ಘಟಕವನ್ನು ಉದ್ಘಾಟಿಸಿ ಮಾತನಾಡಿದರು. ರಾಜ್ಯ ಹಾಗೂ ಕೇಂದ್ರ ಸರ್ಕಾರಗಳ ರೈತ ವಿರೋಧಿ ನೀತಿಗಳಿಂದ ರೈತಾಪಿ ವರ್ಗ ಸಂಕಷ್ಟಕ್ಕೆ ಒಳಗಾಗುತ್ತಿದೆ. ನೀರಾವರಿ ಜಮೀನುಗಳಿಗೆ ಟಿಸಿ ಅಳವಡಿಕೆಗೆ ಹೆಚ್ಚಿನ ಶುಲ್ಕವನ್ನು ವಿಧಿಸುತ್ತಿರುವುದರಿಂದ ರೈತರು ತಮ್ಮ ಬೆಳೆಗಳ ರಕ್ಷಣೆಗೆ ರಸಗೊಬ್ಬರ ಕೀಟನಾಶಕಗಳನ್ನೂ ಖರೀದಿ ಮಾಡದಂತಹ ಪರಿಸ್ಥಿತಿ ಎದುರಾಗಿದೆ. ಆದ್ದರಿಂದ ರೈತರು ತಮ್ಮ ಮೇಲೆ ನಿರಂತರವಾಗಿ ನಡೆಯುತ್ತಿರುವ ಶೋಷಣೆಗಳನ್ನು ತಡೆಯಲು ಸಂಘಟಿತರಾಗಬೇಕಾಗಿದೆ ಎಂದು ಹೇಳಿದರು.
ಜಿಲ್ಲಾಧ್ಯಕ್ಷ ಮಾಡ್ರಳ್ಳಿ ವಹದೇವಪ್ಪ, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಕುಂದಕೆರೆ ಸಂಪತ್ತು, ಜಿಲ್ಲಾ ಉಪಾಧ್ಯಕ್ಷ ಹಾಲಳ್ಳಿ ಮಹೇಶ, ಲೋಕೇಶ್, ಗ್ರಾಮಸ್ಥರಾದ ಆರ್.ಎಂ.ಮಹದೇವಪ್ಪ, ಪುಟ್ಟಸ್ವಾಮಿ, ಕುಮಾರ್, ಮಾಧು, ಪಾಪಯ್ಯ, ದಿಲೀಪ್, ನಾಗಯ್ಯ ಸೇರಿದಂತೆ ಹಲವರು ಇದ್ದರು.