ಸರ್ಕಾರಿ ಶಾಲೆ ಉಳಿವಿಗೆ ಸಂಘಟಿತ ಶ್ರಮ

Kdb_government school
Published on

ಕಡಬ: ನಮ್ಮೂರ ಶಾಲೆಯ ಬಗ್ಗೆ ನಮಗೆ ಹೆಮ್ಮೆಯಿರಬೇಕು. ಶಾಲೆಯನ್ನು ಉಳಿಸಿ ಬೆಳೆಸುವಲ್ಲಿ ಎಲ್ಲರೂ ಶ್ರಮಿಸಬೇಕು ಎಂದು ಪಳ್ಳತ್ತಾರು ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಸ್ಥಾಪಕಾಧ್ಯಕ್ಷ ನಿರ್ಮಲ್ ಕುಮಾರ್ ಜೈನ್ ಹೇಳಿದರು.

ಪಳ್ಳತ್ತಾರು ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಇತ್ತೀಚೆಗೆ ನಡೆದ ಶಾಲಾ ವಾರ್ಷಿಕೋತ್ಸವ ಉದ್ಘಾಟಿಸಿ ಮಾತನಾಡಿದರು.

ಬೆಳಂದೂರು ಗ್ರಾಮ ಪಂಚಾಯಿತಿ ಅಧ್ಯಕ್ಷೆ ಪಾರ್ವತಿ ಮರಕ್ಕಡ ಅಧ್ಯಕ್ಷತೆ ವಹಿಸಿದ್ದರು. ಸವಣೂರು ಕ್ಲಸ್ಟರ್ ಸಿ.ಆರ್.ಪಿ.ಜಯಂತ್ ವೈ., ಪುತ್ತೂರು ಎಪಿಎಂಸಿ ವಾಜಿ ಅಧ್ಯಕ್ಷ ದಿನೇಶ್ ಮೆದು, ಸವಣೂರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂದ ಮುಖ್ಯ ಕಾರ್ಯನಿರ್ವಾಹಣಾಧಿಕಾರಿ ಚಂದ್ರಶೇಖರ, ವಕೀಲ ಶೀನಪ್ಪ ಗೌಡ ಬೈತಡ್ಕ, ಶಾಲಾ ವಾರ್ಷಿಕೋತ್ಸವ ಸಮಿತಿ ಉಪಾಧ್ಯಕ್ಷ ನವಾಜ್ ಸಖಾಫಿ ಶುಭಹಾರೈಸಿದರು.

ಬೆಳಂದೂರು ಗ್ರಾಮ ಪಂಚಾಯಿತಿ ಉಪಾಧ್ಯಕ್ಷ ಜಯಂತ ಅಬೀರ, ಸದಸ್ಯರಾದ ಪ್ರವೀಣ್ ಕೆರೆನಾರು, ಉಮೇಶ್ವರಿ ಅಗಳಿ, ದ.ಕ. ಜಿಲ್ಲಾ ಯುವಜನ ಒಕ್ಕೂಟದ ಅಧ್ಯಕ್ಷ ಸುರೇಶ್ ರೈ ಸೂಡಿಮುಳ್ಳು, ಬರೆಪ್ಪಾಡಿ ಶ್ರೀ ಪಂಚಲಿಂಗೇಶ್ವರ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ನಿಕಟಪೂರ್ವ ಅಧ್ಯಕ್ಷ ವಿಟ್ಠಲ ಗೌಡ ಬರೆಪ್ಪಾಡಿ, ದೇವರಗುಡ್ಡೆ ಶ್ರೀ ವೀರಾಂಜನೇಯ ಗೆಳೆಯರ ಬಳಗ ಸೇವಾ ಟ್ರಸ್ಟ್ ನ ಗೌರವಾಧ್ಯಕ್ಷ ಶ್ರೀಧರ ಗೌಡ ಕೊಯಕ್ಕುಡೆ ಮತ್ತಿತರರು ಉಪಸ್ಥಿತರಿದ್ದರು.

ಪಳ್ಳತ್ತಾರು ಶಾಲೆಯಲ್ಲಿ ನೂತನವಾಗಿ ಆರಂಭಗೊಂಡಿರುವ ಎಲ್. ಕೆ. ಜಿ, ಯು.ಕೆ.ಜಿ ತರಗತಿ ಕೊಠಡಿಯನ್ನು ಗಣ್ಯರು ಉದ್ಘಾಟಿಸಿದರು. ಶಿಕ್ಷಕ ರಂಗನಾಥ್ ಸ್ವಾಗತಿಸಿದರು. ಮುಖ್ಯಶಿಕ್ಷಕ ಸೀತಾರಾಮ ಕೆ.ಜಿ. ವರದಿ ವಾಚಿಸಿದರು. ಶಿಕ್ಷಕ ರಂಗನಾಥ್ ನಿರೂಪಿಸಿದರು. ಶಿಕ್ಷಕಿ ಸಂಧ್ಯಾ ವಂದಿಸಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net