ಸಂಘಟಿತ ಹೋರಾಟದಿಂದ ಸೌಲಭ್ಯ ಪಡೆಯಲು ಸಾಧ್ಯ

20 dabasapete ph programme
Published on

ದಾಬಸ್‌ಪೇಟೆ: ಸಂಘಟಿತರಾಗಿ ಹೋರಾಡುವುದರಿಂದ ಮಾತ್ರ ಸೌಲಭ್ಯ ಪಡೆಯಲು ಸಾಧ್ಯ ಎಂದು ಹೊನ್ನೇನಹಳ್ಳಿ ಗ್ರಾಪಂ ಮಾಜಿ ಅಧ್ಯಕ್ಷ ಜಗದೀಶ್ ಚೌಧರಿ ತಿಳಿಸಿದರು.

ಪಟ್ಟಣದ ಶಾಲಾ ಮೈದಾನದಲ್ಲಿ ರಾಜ್ಯ ಜ್ಞಾನ ವಿಜ್ಞಾನ ಸಮಿತಿ ಮತ್ತು ಕರ್ನಾಟಕ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ೆಡರೇಷನ್ ಸಹಯೋಗದಲ್ಲಿ ಶುಕ್ರವಾರ ಹಮ್ಮಿಕೊಂಡಿದ್ದ ೆಡರೇಷನ್ ನೂತನ ತಾಲೂಕು ಘಟಕ ಉದ್ಘಾಟನೆ ಮತ್ತು ಶಾಲಾ ಮಕ್ಕಳಿಗೆ ಪ್ರತಿಭಾ ಪುರಸ್ಕಾರ ಕಾರ್ಯಕ್ರಮದಲ್ಲಿ ಮಾತನಾಡಿದರು .

ಹೆಚ್ಚು ಶ್ರಮವಹಿಸಿ ಕನಿಷ್ಠ ವೇತನ ಪಡೆಯುವ ಅಂಗನವಾಡಿ ಕಾರ್ಯಕರ್ತೆಯರ ಕಾರ್ಯ ಸಮಾಜ ಮೆಚ್ಚುವಂತಹದ್ದು. ಇವರಿಗೆ ಕನಿಷ್ಠ 20 ಸಾವಿರ ರೂ. ಗೌರವ ಧನ ನೀಡಬೇಕು. ಸರ್ಕಾರಿ ನೌಕರರೆಂದು ಪರಿಗಣಿಸಬೇಕು ಎಂದು ಆಗ್ರಹಿಸಿದರು.

ಸಿಐಟಿಯುಸಿ ರಾಜ್ಯ ಘಟಕದ ಅಧ್ಯಕ್ಷ ಎನ್. ಶಿವಣ್ಣ ಮಾತನಾಡಿ, ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರಿಗೆ ಶ್ರಮಕ್ಕೆ ತಕ್ಕ ವೇತನ ನೀಡಬೇಕು. ಸಂಘದ ಹಲವು ಬೇಡಿಕೆ ಈಡೇರಿಸಬೇಕು ಎಂದು ಒತ್ತಾಯಿಸಿದರು.

ರಾಜ್ಯ ಜ್ಞಾನ ವಿಜ್ಞಾನ ಸಮಿತಿ ರಾಜ್ಯ ಕಾರ್ಯದರ್ಶಿ ಈ.ಬಸವರಾಜು ಮಾತನಾಡಿ, ಪ್ರಪಂಚವನ್ನೇ ತಲ್ಲಣಗೊಳಿಸಿರುವ ಕರೊನಾ ಸೋಂಕಿನಿಂದ ಜನರು ಆರೋಗ್ಯದ ಬಗ್ಗೆ ಕಾಳಜಿ ವಹಿಸುವ ಮೂಲಕ ಸ್ವಚ್ಛತೆಗೆ ಆದ್ಯತೆ ನೀಡುತ್ತಿದ್ದಾರೆ. ಮುಂದೆಯು ಆರೋಗ್ಯದತ್ತ ಕಾಳಜಿವಹಿಸಿ ಆರೋಗ್ಯವಂತ ಸಮಾಜವನ್ನು ನಿರ್ಮಿಸಲು ಮುಂದಾಗಬೆಕು ಎಂದರು.

ಸ್ತ್ರೀ ಶಕ್ತಿ ಒಕ್ಕೂಟದ ತಾಲೂಕು ಅಧ್ಯಕ್ಷೆ ವೇದಾವತಿ, ಹೋಬಳಿ ಕಸಾಪ ಅಧ್ಯಕ್ಷ ಕೇಶವಮೂರ್ತಿ, ಎಸ್‌ಸಿ ಮತ್ತು ಎಸ್‌ಟಿ ಶಿಕ್ಷಕ ಸಂಘದ ಕಾರ್ಯದರ್ಶಿ ಪೂಜಗಯ್ಯ, ಶಿಕ್ಷಕರಾದ ರವಿಕುಮಾರ್, ವಿರುಪಾಕ್ಷ, ನರಸಿಂಹರಾಜು, ಹೇಮಣ್ಣ, ರಂಗಸ್ವಾಮಿ, ಮಂಜುಳಾ, ಅಂಗನವಾಡಿ ಕಾರ್ಯಕರ್ತೆಯರಾದ ಜ್ಯೋತಿ, ಲಕ್ಷ್ಮೀಶ್ರೀ ಇತರರು ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net