ಬೂತ್‌ಮಟ್ಟದಿಂದ ರಾಜ್ಯಾಧ್ಯವರೆಗೂ ಸಂಘಟನಾ ಪರ್ವ

ex minister kumar bangarappa
ಮಾಜಿ ಸಚಿವ ಕುಮಾರ್ ಬಂಗಾರಪ್ಪ
Published on

ಶಿವಮೊಗ್ಗ: ಬಿಜೆಪಿ ರಾಜ್ಯಾಧ್ಯಕ್ಷ ಸ್ಥಾನ ಜನವರಿಯಲ್ಲಿ ಬದಲಾಗುವ ನಿರೀಕ್ಷೆ ಇದ್ದು ನಾನು ಕೂಡ ರಾಜ್ಯಾಧ್ಯಕ್ಷ ಸ್ಥಾನದ ಆಕಾಂಕ್ಷಿಯಾಗಿದ್ದೇನೆ ಎಂದು ಮಾಜಿ ಸಚಿವ ಕುಮಾರ್ ಬಂಗಾರಪ್ಪ ಹೇಳಿದರು.

ನಗರದಲ್ಲಿ ಭಾನುವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯ ಬಿಜೆಪಿಯ ಭಿನ್ನಮತ ಕೇಂದ್ರದ ವರಿಷ್ಠರು ಗಮನ ಹರಿಸಿದ್ದಾರೆ. ಶೀಘ್ರವಾಗಿ ತೀಕ್ಷ್ಣವಾದ ನಿರ್ಧಾರ ಕೈಗೊಳ್ಳುತ್ತಾರೆ ಎಂಬ ವಿಶ್ವಾಸವಿದೆ ಎಂದರು.

ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ಅವರು ಕೇಂದ್ರ ಸರ್ಕಾರದಲ್ಲಿ ಸಚಿವರಾಗಿದ್ದು ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡುವ ಸಾಧ್ಯತೆ ಇದೆ. ಈ ಹಿನ್ನೆಲೆಯಲ್ಲಿ ರಾಷ್ಟ್ರೀಯ ಅಧ್ಯಕ್ಷರು ಮತ್ತು ರಾಜ್ಯಾಧ್ಯಕ್ಷರ ಸ್ಥಾನ ಖಾಲಿಯಾಗುವ ನಿರೀಕ್ಷೆ ಇದೆ ಎಂದು ಹೇಳಿದರು.

ಪಕ್ಷದ ಆಂತರಿಕ ವಿಚಾರವಾಗಿ ಬೂತ್‌ಮಟ್ಟದಿಂದ ರಾಜ್ಯಾಧ್ಯವರೆಗೂ ಸಂಘಟನಾ ಪರ್ವ ನಡೆಯುತ್ತಿದೆ. ಕಳೆದ 30 ವರ್ಷದಿಂದ ರಾಜಕಾರಣದಲ್ಲಿ ಇದ್ದೇನೆ. ಕಾಂಗ್ರೆಸ್‌ನ ಅಹಿಂದ ಸಂಘಟನೆಗೆ ವಿರುದ್ಧವಾಗಿ ಬಿಜೆಪಿ ಒಬಿಸಿ ಸಂಘಟನೆಯನ್ನು ಬೆಳೆಸಬೇಕಿದೆ. ಆ ನಿಟ್ಟಿನಲ್ಲಿ ಒಬಿಸಿ ನಾಯಕರಿಗೆ ಹೆಚ್ಚು ಒತ್ತು ನೀಡಬೇಕಿದೆ. ಒಬಿಸಿ ಸಮುದಾಯಕ್ಕೆ ರಾಜ್ಯಾಧ್ಯಕ್ಷ ಸ್ಥಾನ ನೀಡುವ ವಿಚಾರ ಬಂದರೆ ನನ್ನನ್ನು ಪರಿಗಣಿಸಿ ಎಂದಿದ್ದೇನೆ ಎಂದರು.

ಇದೇ ವೇಳೆ ವಕ್ಫ್ ವಿಚಾರವಾಗಿ ಸಿಎಂ ಸಿದ್ದರಾಮಯ್ಯ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದರೆ, ಅವರೇ ಕ್ರಮ ತೆಗೆದುಕೊಳ್ಳುತ್ತಿದ್ದರು. ಹಾಗಾಗಿ ಸಿದ್ದರಾಮಯ್ಯ ಮಾಡಿರುವುದು ಸುಳ್ಳು ಆರೋಪ ಎಂದು ಹೇಳಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net