

ದೇವರಹಿಪ್ಪರಗಿ: ಶ್ರೀಮಠದ ಭಕ್ತರ ಅಭಿಪ್ರಾಯ, ಅಭಿಲಾಷೆಯಂತೆ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುವುದು ಎಲ್ಲರ ಜವಾಬ್ದಾರಿ ಎಂದು ಜಡಿಮಠದ ಜಡಿಸಿದ್ಧೇಶ್ವರ ಶ್ರೀಗಳು ಹೇಳಿದರು.
ಪಟ್ಟಣದ ಜಡಿಮಠದ ಆವರಣದಲ್ಲಿ ಭಾನುವಾರ ನಡೆದ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ನೂತನವಾಗಿ ನಿರ್ಮಾಣಗೊಂಡಿರುವ ಶ್ರೀಮಠದ ಲೋಕಾರ್ಪಣೆ ಅಂಗವಾಗಿ ಮೇ 22 ರಿಂದ ಜೂ. 5 ರ ವರೆಗೆ ಪುರಾಣ ಕಾರ್ಯಕ್ರಮ ನಡೆಯಲಿದೆ. ಬಳಿಕ ಜಗದ್ಗುರುಗಳ ಅಡ್ಡಪಲ್ಲಕ್ಕಿ, ಪಟ್ಟಾಧಿಕಾರ ವರ್ಧಂತಿ ಮಹೋತ್ಸವ ಹಾಗೂ ರೇಣುಕಾಚಾರ್ಯರ ಪ್ರತಿಮೆ ಪ್ರತಿಷ್ಠಾಪನೆ ಸೇರಿ ಹಲವಾರು ಕಾರ್ಯಕ್ರಮಗಳು ನಡೆಯಲಿವೆ. ಎಲ್ಲ ಕಾರ್ಯಕ್ರಮಗಳನ್ನು ಭಕ್ತರು ಯಶಸ್ವಿಗೊಳಿಸಬೇಕೆಂದು ಸಲಹೆ ನೀಡಿದರು.
ಸದಯ್ಯನಮಠದ ವೀರಗಂಗಾಧರ ಶ್ರೀಗಳು ಸಾನ್ನಿಧ್ಯ ವಹಿಸಿ ಆಶೀರ್ವಚನ ನೀಡಿ, ಭಕ್ತವೃಂದ ತನು, ಮನ, ಧನಗಳ ಮೂಲಕ ಉತ್ಸಾಹದಿಂದ ಕಾರ್ಯನಿರ್ವಹಿಸಿದ್ದೇ ಆದಲ್ಲಿ ಕಾರ್ಯಕ್ರಮ ಯಶಸ್ವಿಯಾಗುವುದರಲ್ಲಿ ಯಾವುದೇ ಸಂದೇಹವಿಲ್ಲ ಎಂದರು.
ತಾಲೂಕು ನಿವೃತ್ತ ನೌಕರರ ಸಂಘದ ಅಧ್ಯಕ್ಷ ಸಿ.ಕೆ. ಕುದರಿ, ಪ್ರಗತಿ ಪಟ್ಟಣ ಸಹಕಾರಿ ಬ್ಯಾಂಕ್ ನಿರ್ದೇಶಕ ಬಾಬುಗೌಡ ಪಾಟೀಲ(ಜಿಡ್ಡಿಮನಿ), ಪಟ್ಟಣ ಪಂಚಾಯಿತಿ ಸದಸ್ಯ ಶಾಂತಯ್ಯ ಜಡಿಮಠ, ಪಂಚಾಕ್ಷರಿ ಮಿಂಚನಾಳ, ಶಾಂತಗೌಡ ಬಿರಾದಾರ(ಯರನಾಳ), ಅಜ್ಜಯ್ಯ ಹಿರೇಮಠ, ಬಂಡೆಪ್ಪಗೌಡ ದಿಂಡವಾರ, ಶಂಕರಗೌಡ ಪಾಟೀಲ(ಯರನಾಳ), ಉಮಾಕಾಂತ ಸೊನ್ನದ, ರಾಮಗೊಂಡ ಅವುಟಿ, ಭೀಮರಾಯ ತೆಗನೂರ, ಸಿದ್ದು ಆನಂದಿ, ಸಿದ್ದು ಮಸಬಿನಾಳ ಇತರರಿದ್ದರು.