ಮಕ್ಕಳಲ್ಲಿ ಮಾನವೀಯ ಮೌಲ್ಯ ಬೆಳೆಸಿ

pratibha karanji
Published on

ಹುಬ್ಬಳ್ಳಿ: ನಗರದ ಓರಿಯಂಟಲ್ ಆಂಗ್ಲ ಮಾಧ್ಯಮ ಪ್ರಾಥಮಿಕ ಹಾಗೂ ಪ್ರೌಢಶಾಲೆಯಲ್ಲಿ ಶುಕ್ರವಾರ ಬಸವೇಶ್ವರ ನಗರ ಕ್ಲಸ್ಟರ್ ಮಟ್ಟದ ಪ್ರತಿಭಾ ಕಾರಂಜಿ ಆಯೋಜಿಸಲಾಗಿತ್ತು.

ಉದ್ಘಾಟಿಸಿದ ಹುಬ್ಬಳ್ಳಿ ಶಹರ ಬಿಇಒ ಚನ್ನಪ್ಪಗೌಡ ಮಾತನಾಡಿ, ಶಿಕ್ಷಕರು ಮಕ್ಕಳಲ್ಲಿ ಮಾನವೀಯ ಮೌಲ್ಯಗಳನ್ನು ಬೆಳೆಸಬೇಕು. ಸಹಪಠ್ಯ ಚಟುವಟಿಕೆ ವಿದ್ಯಾರ್ಥಿಗಳಲ್ಲಿ ಚೈತನ್ಯಕ್ಕೆ ಕಾರಣವಾಗುತ್ತದೆ ಎಂದರು.

ಶಾಲೆಯ ಚೇರ್ಮನ್ ಅನುಷಾ ಜೆ. ಅಧ್ಯಕ್ಷತೆ ವಹಿಸಿದ್ದರು. ವಿಶ್ವಜೀತ ಜೋಗಿ ಇದ್ದರು. ಮುಖ್ಯಾಧ್ಯಾಪಕಿ ರಶ್ಮಿ ಬ್ಯಾಡಗಿ ಸ್ವಾಗತಿಸಿದರು. ಸಿಆರ್​ಪಿ ಅಶೋಕ ಕುರ್ತಕೋಟಿ ಪ್ರಾಸ್ತಾವಿಕ ಮಾತನಾಡಿದರು. ಭಾರತಿ ನೆನಕ್ಕಿ ವಂದಿಸಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net