

ಬೆಳ್ತಂಗಡಿ: ದೃಢ ಚಿತ್ತದಿಂದ ಉತ್ತಮ ವಿಚಾರಗಳನ್ನು ಅಳವಡಿಸಿಕೊಂಡು ಮಹತ್ವಪೂರ್ಣ ಸಾಧನೆ ಮಾಡುವುದು ವಿದ್ಯಾರ್ಥಿಗಳ ಗುರಿಯಾಗಬೇಕು ಎಂದು ಬೆಳ್ತಂಗಡಿ ಪಟ್ಟಣ ಪಂಚಾಯಿತಿ ಅಧ್ಯಕ್ಷ ಜಯಾನಂದ ಗೌಡ ಹೇಳಿದರು.
ವಾಣಿ ಪದವಿ ಪೂರ್ವ ಕಾಲೇಜಿನಲ್ಲಿ ಪ್ರಥಮ ಪಿಯುಸಿ ಕಲಾ ಮತ್ತು ವಾಣಿಜ್ಯ ವಿಭಾಗದ ವಿದ್ಯಾರ್ಥಿಗಳಿಗೆ ಹಮ್ಮಿಕೊಂಡ ’ಪ್ರಬೋಧ’ ಓರಿಯಂಟೇಶನ್ ಉದ್ಘಾಟಿಸಿ ಮಾತನಾಡಿದರು.
ವಾಣಿ ಶಿಕ್ಷಣ ಸಂಸ್ಥೆಗಳ ಕಾರ್ಯದರ್ಶಿ ಗಣೇಶ್ ಗೌಡ ಅಧ್ಯಕ್ಷತೆ ವಹಿಸಿದ್ದರು. ಎಂಆರ್ಪಿಎಲ್ ತೆರಿಗೆ ವಿಭಾಗ ಅಧಿಕಾರಿ ಸಿಎ ಸನತ್ ಕುಮಾರ್ ಓರಿಯಂಟೇಶನ್ ನಡೆಸಿಕೊಟ್ಟರು. ಉಪನ್ಯಾಸಕರಾದ ಸುಧೀರ್ ಕೆ.ಎನ್, ಶಂಕರ್ ರಾವ್ ವಿದ್ಯಾರ್ಥಿಗಳಿಗೆ ಕಾಲೇಜಿನ ನಿಯಮಾವಳಿಗಳನ್ನು ತಿಳಿಸಿಕೊಟ್ಟರು. ವಾಣಿ ಆಂಗ್ಲ ಮಾಧ್ಯಮ ಪ್ರೌಢಶಾಲೆ ಮುಖ್ಯ ಶಿಕ್ಷಕಿ ಲಕ್ಷ್ಮೀನಾರಾಯಣ ಕೆ. ಉಪಸ್ಥಿತರಿದ್ದರು. ಪ್ರಾಂಶುಪಾಲ ವಿಷ್ಣುಪ್ರಕಾಶ್ ಎಂ. ಸ್ವಾಗತಿಸಿದರು. ವಿದ್ಯಾರ್ಥಿ ಕ್ಷೇಮಪಾಲನಾಧಿಕಾರಿ ಸುರೇಂದ್ರ ವಂದಿಸಿದರು. ಉಪನ್ಯಾಸಕಿ ಮೀನಾಕ್ಷಿ ಕಾರ್ಯಕ್ರಮ ನಿರೂಪಿಸಿದರು.