ಕಾನೂನು ಕಾಲೇಜಿನಲ್ಲಿ ಒರಿಯಂಟೇಶನ್

IMG_20241027_195539_726-1.jpg
Published on

ಹುಬ್ಬಳ್ಳಿ: ಇಲ್ಲಿಯ ಕೆಎಲ್ಇ ಸಂಸ್ಥೆಯ ಗುರುಸಿದ್ದಪ್ಪ ಕೋತಂಬ್ರಿ ಕಾನೂನು ಮಹಾವಿದ್ಯಾಲಯದಲ್ಲಿ 2024-25ನೇ ಸಾಲಿನ ಪ್ರಥಮ ವರ್ಷದ ವಿದ್ಯಾರ್ಥಿಗಳಿಗೆ ಕಾನೂನು ವೃತ್ತಿಯ ಪ್ರಾಮುಖ್ಯತೆ ಮತ್ತು ಉದಾತ್ತತೆ ಕುರಿತು ಒರಿಯಂಟೇಶನ್ ಕಾರ್ಯಕ್ರಮ ಶನಿವಾರ ಹಮ್ಮಿಕೊಳ್ಳಲಾಗಿತ್ತು.

ಸಂಪನ್ಮೂಲ ವ್ಯಕ್ತಿಯಾಗಿದ್ದ ನಿವೃತ್ತ ಸರ್ಕಾರಿ ಅಭಿಯೋಜಕ ಎಂ.ಎಂ. ದೊಡ್ಡಮನಿ, ವಕೀಲರು ಸಮಾಜದ ಆಧಾರ ಸ್ತಂಭಗಳು. ಅವರು ಜನರಿಗೆ ನ್ಯಾಯ ದೊರಕಿಸುವುದು ಮತ್ತು ಹೊಸ ಕಾನೂನುಗಳನ್ನು ಮಾಡಲು ಸರ್ಕಾರದ ಮನವೊಲಿಸಲು ಸಹಾಯ ಮಾಡುತ್ತಾರೆ. ಸರಿ ಮತ್ತು ತಪ್ಪುಗಳ ನಡುವೆ ವ್ಯತ್ಯಾಸ ಗುರುತಿಸುವ ಸಾರ್ವಜನಿಕ ಶಿಕ್ಷಣ ನೀಡುವುದು ಅವರ ಪ್ರಾಥಮಿಕ ಕರ್ತವ್ಯವಾಗಿದೆ ಎಂದು ಹೇಳಿದರು.

ಕಾಲೇಜಿನ ಪ್ರಾಚಾರ್ಯ ಡಾ. ಜ್ಞಾನೇಶ್ವರ ಚೌರಿ ಅಧ್ಯಕ್ಷತೆ ವಹಿಸಿದ್ದರು.

ಗಣೇಶ ಸ್ವಾಗತಿಸಿದರು. ಡಾ. ಶಾರದಾ ಪಾಟೀಲ ಅತಿಥಿಗಳನ್ನು ಪರಿಚಯಿಸಿದರು. ಚೇತನಾ ಪೊಲೇಶಿ ಕಾರ್ಯಕ್ರಮ ನಿರೂಪಿಸಿದರು. ಪ್ರೊ. ಮೇಘಾ ಈರಡ್ಡಿ ವಂದಿಸಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net