

ಮಂಗಳೂರು: ಸೋಮವಾರ ನಿಧನರಾದ ಕೇಂದ್ರದ ಮಾಜಿ ಸಚಿವ ಆಸ್ಕರ್ ಫರ್ನಾಂಡಿಸ್ ಅವರಿಗೆ ಬುಧವಾರ ಮಂಗಳೂರಿನ ಮಿಲಾಗ್ರಿಸ್ ಚರ್ಚ್‌ನಲ್ಲಿ ಮಂಗಳೂರು ಕ್ರೈಸ್ತ ಧರ್ಮ ಪ್ರಾಂತ್ಯ ವತಿಯಿಂದ ಅಂತಿಮ ನಮನ ಸಲ್ಲಿಸುವ ಕಾರ್ಯಕ್ರಮ ನೆರವೇರಿತು.
ಬಿಷಪ್ ಡಾ.ಪೀಟರ್ ಪಾವ್ಲ್ ಸಲ್ಡಾನಾ ಬಲಿಪೂಜೆ ನೆರವೇರಿಸಿದರು. ಸಂಸದ ನಳಿನ್ ಕುಮಾರ್ ಕಟೀಲ್ ಭೇಟಿ ನೀಡಿ ಅಂತಿಮ ನಮನ ಸಲ್ಲಿಸಿದರು. ಆಸ್ಕರ್ ಆಪ್ತ, ಕೇಂದ್ರ ಮಾಜಿ ಸಚಿವ ಜನಾರ್ದನ ಪೂಜಾರಿ ಅಂತಿಮ ದರ್ಶನ ಮಾಡಿ, ಜತೆಗಾರನನ್ನು ನೆನೆದು ಬಾವುಕರಾದರು. ಎಐಸಿಸಿ ಕಾರ್ಯದರ್ಶಿ ಕೇರಳದ ವಿಶ್ವನಾಥನ್ ಸೇರಿದಂತೆ ಹಲವು ಗಣ್ಯರು ಅಂತಿಮ ನಮನ ಸಲ್ಲಿಸಿದರು.
ಇಂದು ಸಾಯಂಕಾಲ ಮೃತದೇಹವನ್ನು ಬೆಂಗಳೂರಿಗೆ ಏರ್ ಲಿಫ್ಟ್ ಮಾಡಲಾಗುವುದು ಎಂದು ಕುಟುಂಬದ ಆಪ್ತ ವಲಯದವರು ತಿಳಿಸಿದ್ದಾರೆ.