ನಮ್ಮ ಜಾತಿ ಕಾಂಗ್ರೆಸ್, ನಮ್ಮ ಭಾಷೆ ಕಾಂಗ್ರೆಸ್ : ಸಚಿವ ಕೆ.ಜೆ. ಜಾರ್ಜ್

kj George
Published on

ಮೈಸೂರು: ಸಹಸ್ರಾರು ಕಾಂಗ್ರೆಸ್ ಕಾರ್ಯಕರ್ತರ ಶ್ರಮದಿಂದ ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಸ್ತಿತ್ವಕ್ಕೆ ಬಂದಿದೆ ಎಂದು ಇಂಧನ ಸಚಿವ ಕೆ.ಜೆ. ಜಾರ್ಜ್ ಹೇಳಿದರು.

ನಗರದ ಕಾಂಗ್ರೆಸ್ ಕಚೇರಿಗೆ ಬುಧವಾರ ಭೇಟಿ ನೀಡಿ ಕಾರ್ಯಕರ್ತರ ಅಹವಾಲು ಆಲಿಸಿ ಮಾತನಾಡಿ, ಕಾಂಗ್ರೆಸ್ ಎಂದರೆ ಮೌಲ್ಯ ಮತ್ತು ಸಿದ್ಧಾಂತಗಳ ಕಣಜ. ಕಾಂಗ್ರೆಸ್ ಇದ್ದರೆ ಮಾತ್ರ ನಾವು, ನಮ್ಮಿಂದ ಕಾಂಗ್ರೆಸ್ ಅಲ್ಲ ಎಂಬುದನ್ನು ಅರಿತುಕೊಳ್ಳಬೇಕು. ಎಲ್ಲ, ಜಾತಿ ಧರ್ಮದವರನ್ನು ಒಟ್ಟಿಗೆ ಕರೆದೊಯ್ಯುವ ಶಕ್ತಿ ಕಾಂಗ್ರೆಸ್‌ಗೆ ಇದೆ. ನಮ್ಮ ಜಾತಿ ಕಾಂಗ್ರೆಸ್, ನಮ್ಮ ಭಾಷೆ ಕಾಂಗ್ರೆಸ್. ಕಾಂಗ್ರೆಸ್ ಜನಪರವಾಗಿ ಕೆಲಸ ಮಾಡುವ ಪಕ್ಷ. ನಮಗೆ ಅಧಿಕಾರ ಇರಲಿ ಬಿಡಲಿ, ಸಮಾಜದಲ್ಲಿ ತುಳಿತಕ್ಕೊಳಗಾದವರ ಪರವಾಗಿ ಕೆಲಸ ಮಾಡುತ್ತೇವೆ ಎಂದರು.

ಈ ಸಂದರ್ಭ ಶಾಸಕರಾದ ತನ್ವೀರ್ ಸೇಠ್, ಕೆ. ಹರೀಶ್ ಗೌಡ, ಡಿ. ರವಿಶಂಕರ್, ಕರ್ನಾಟಕ ವಸ್ತು ಪ್ರದರ್ಶನ ಪ್ರಾಧಿಕಾರ ಅಧ್ಯಕ್ಷ ಅಯೂಬ್ ಖಾನ್, ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಜಿಲ್ಲಾಧ್ಯಕ್ಷ ಅರುಣ್ ಕುಮಾರ್, ಎಐಸಿಸಿ ಸದಸ್ಯ ಪ್ರೇಮ್ ಕುಮಾರ್, ಮಾಜಿ ಮೇಯರ್‌ಗಳಾದ ಮೋದಾಮಣಿ, ಪುಷ್ಪಲತಾ ಚಿಕ್ಕಣ್ಣ, ಚಿಕ್ಕಣ್ಣ, ಕಾಂಗ್ರೆಸ್ ಜಿಲ್ಲಾಧ್ಯಕ್ಷ ಡಾ.ಬಿ.ಜೆ. ವಿಜಯ ಕುಮಾರ್, ಪ್ರಧಾನ ಕಾರ್ಯದರ್ಶಿ ಎಂ. ಶಿವಣ್ಣ, ನಗರಾಧ್ಯಕ್ಷ ಆರ್. ಮೂರ್ತಿ ಹಾಗೂ ಇತರರು ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net