ಹೊಸ ಭಾರತದ ನಿರ್ಮಾಣ ನಮ್ಮ ಗುರಿ

Our goal is to build a new India
ಬಾಗಲಕೋಟೆ ನಗರದ ಶಿವಾನಂದ ಜೀನ್ ನಲ್ಲಿರುವ ಬಿಜೆಪಿ ಕಚೇರಿಯಲ್ಲಿ ಸಂಸದ ಪಿ.ಸಿ.ಗದ್ದಿಗೌಡ ಧ್ವಜಾರೋಹಣ ನೆರವೇರಿಸಿದರು. ಮಾಜಿ ಶಾಸಕ ವೀರಣ್ಣ ಚರಂತಿಮಠ, ವಿ.ಪ ಮಾಜಿ ಸದಸ್ಯ ನಾರಾಯಣಸಾ ಭಾಂಡಗೆ, ಜಿಲ್ಲಾ ಉಪಾಧ್ಯಕ್ಷ ಅಶೋಕ ಲಿಂಬಾವಳಿ, ಪ್ರಧಾನ ಕಾರ್ಯದರ್ಶಿ ರಾಜು ನಾಯ್ಕರ ಇದ್ದರು.
Published on

ಬಾಗಲಕೋಟೆ: ನವ ಪಿಳಿಗೆಗಾಗಿ ಹೊಸ ಭಾರತ ನಿರ್ಮಾಣದ ಗುರಿ ನಮ್ಮದಾಗಿದೆ. ಜಗತ್ತಿನ ಕಣ್ಣು ಭಾರತದತ್ತ ಇದೆ ಎಂದು ಸಂಸದ ಪಿ.ಸಿ.ಗದ್ದಿಗೌಡರ ಹೇಳಿದರು. ನವನಗರದ ಶಿವಾನಂದ ಜೀನ್ ನಲ್ಲಿರುವ ಭಾರತೀಯ ಜನತಾ ಪಾರ್ಟಿಯ ಕಾರ್ಯಾಲಯದ ಆವರಣದಲ್ಲಿ ಸ್ವಾತಂತ್ರ್ಯೋವ ದಿನಾಚರಣೆ ಅಂಗವಾಗಿ ಧ್ವಜಾರೋಹಣ ನೆರವೇರಿಸಿ ಅವರು ಮಾತನಾಡಿದರು.

ಸಹಸ್ರಾರು ಮಹನಿಯರ ಪ್ರಾಣ ತ್ಯಾಗದ ಬಲಿದಾನದಿಂದ ನಮಗೆ ಸ್ವಾತಂತ್ರ್ಯ ಸಿಕ್ಕಿದೆ. ಅವರೆಲ್ಲರು ನಮಗೆ ಸದಾಕಾಲ ಸ್ಮರಣೀಯರು. ಪ್ರಧಾನ ಮಂತ್ರಿ ನರೇಂದ್ರ ಮೋದಿಯವರು ಭಾರತದ ಸರ್ವಾಂಗೀಣ ಅಭಿವೃದ್ದಿ ಮೂಲಕ ದೇಶವನ್ನು ಸದೃಢಗೊಳಿಸುವತ್ತ ಕೆಲಸ ಮಾಡುತ್ತಿದ್ದಾರೆ. ಆ ನಿಟ್ಟಿನಲ್ಲಿ ಇಡಿ ಜಗತ್ತು ಭಾರತದತ್ತ ತಿರುಗಿ ನೋಡುತ್ತಿದೆ ಎಂದರು.

ಮಾಜಿ ಶಾಸಕ ಡಾ.ವೀರಣ್ಣ ಚರಂತಿಮಠ ಮಾತನಾಡಿ, ಪ್ರಧಾನ ಮಂತ್ರಿ ನರೇಂದ್ರ ಮೋದಿಯವರು ಭಾರತದ ಕಾಶ್ಮೀರದಲ್ಲಿ 370 ನೇ ಕಲಂ ತೆಗೆದು ಹಾಕಿ ಅಲ್ಲಿ ಶಾಂತಿ ನೆಲೆಸುವಂತೆ ಮಾಡಿದರು. ಅಲ್ಲದೆ ಮುಂದಿನ ದಿನಗಳಲ್ಲಿ ಪಾಕ್ ಆಕ್ರಮಿತ ಕಾಶ್ಮೀರವನ್ನು ನಮ್ಮ ದೇಶದಲ್ಲಿ ವಿಲೀನವಾಗುವ ಎಲ್ಲ ಸಾಧ್ಯತೆಗಳು ಇವೆ. ನೆನೆಗುದಿಗೆ ಬಿದ್ದಿದ್ದ ಅಯೋಧ್ಯ ರಾಮ ಮಂದಿರ ನಿರ್ಮಾಣಗೊಳ್ಳುತ್ತಿದ್ದು, ಜ.24 ರಂದು ಲೋಕಾರ್ಪಣೆಗೊಳ್ಳಲಿದೆ. ಕಾಶಿ ವಿಶ್ವನಾಥನ ಮಂದಿರ,ಉಜ್ಜಯಿನಿ ಮಹಾಂಕಾಳೇಶ್ವರ ಮಂದಿರಗಳ ಜೀರ್ಣೋದ್ದಾರ ಮಾಡಿದ್ದಾರೆ. ಹೀಗೆ ಅನೇಕ ಮಹತ್ತ ಕಾರ್ಯ ಕೇಂದ್ರ ಸರ್ಕಾರ ಮಾಡಿದೆ ಎಂದರು. ವಿ.ಪ ಮಾಜಿ ಸದಸ್ಯ ನಾರಾಯಣಸಾ ಭಾಂಡಗೆ, ಜಿಲ್ಲಾ ಉಪಾಧ್ಯಕ್ಷ ಅಶೋಕ ಲಿಂಬಾವಳಿ, ಪ್ರಧಾನ ಕಾರ್ಯದರ್ಶಿ ರಾಜು ನಾಯ್ಕರ, ರಾಜು ರೇವಣಕರ, ಬಸವರಾಜ ಯಂಕಂಚಿ, ಸತ್ಯನಾರಾಯಣ ಹೇಮಾದ್ರಿ, ಸದಾನಂದ ನಾರಾ, ಶಿವಾನಂದ ಟವಳಿ ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net