

ಕುಂದಾಪುರ: ಬೌದ್ಧಿಕ ಚಟುವಟಿಕೆಗಿಂತ ಹೆಚ್ಚಾಗಿ ಪ್ರಾಪಂಚಿಕ ಜ್ಞಾನಕ್ಕೆ ಹೆಚ್ಚು ಒತ್ತು ಕೊಟ್ಟು ದೇಶಭಕ್ತಿ, ತಾಯಿತಂದೆ, ಗುರು ಹಿರಿಯರಿಗೆ ಗೌರವ ಕೊಡುವ ಸಂಸ್ಕೃತಿಯನ್ನು ಇಂದಿನ ಯುವಜನತೆ ಪಾಲಿಸಬೇಕಾಗಿದೆ. ಪದವಿಯಿಂದ ಪುರುಷಾರ್ಥವಲ್ಲ, ಬದಲಿಗೆ ನಮ್ಮ ವ್ಯಕ್ತಿತ್ವದಿಂದಲೇ ನಾವು ಪಡೆದ ಜ್ಞಾನದ ಬೆಳಕು ನಮ್ಮ ಬದುಕನ್ನು ಬೆಳಗುತ್ತದೆ. ನಮ್ಮ ಬದುಕನ್ನು ಬದಲಾಯಿಸಿಕೊಳ್ಳುವ ಬಲ ನಮ್ಮೊಳಗೇ ಇದೆ ಎಂದು ಕನ್ನಡ ಸಾಹಿತ್ಯ ಪರಿಷತ್ ಕಾರ್ಕಳ ಟಕದ ಅಧ್ಯಕ್ಷ ಪ್ರಭಾಕರ ಶೆಟ್ಟಿ ಕೊಂಡಳ್ಳಿ ಹೇಳಿದರು.
ಕುಂದಾಪುರ ಕೋಟೇಶ್ವರದ ಶ್ರೀ ಕಾಳಾವರ ವರದರಾಜ ಎಂ.ಶೆಟ್ಟಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಮತ್ತು ಸ್ನಾತಕೋತ್ತರ ಅಧ್ಯಯನ ಕೇಂದ್ರದ 18ನೇ ವಾರ್ಷಿಕೋತ್ಸವ ಸವಾರಂಭದಲ್ಲಿ ವಾತನಾಡಿದರು.
ಕಾಲೇಜು ಪ್ರಾಂಶುಪಾಲ ರಾಮರಾಯ ಆಚಾರ್ಯ ಅಧ್ಯಕ್ಷತೆ ವಹಿಸಿದ್ದರು. ಇಂಡಿಯನ್ ರೆಡ್ಕ್ರಾಸ್ ಕುಂದಾಪುರ ಟಕ ಅಧ್ಯಕ್ಷ ಜಯಕರ ಶೆಟ್ಟಿ ವಿದ್ಯಾರ್ಥಿ ಪ್ರೋತ್ಸಾಹ ಧನ ವಿತರಿಸಿದರು. ಕರ್ನಾಟಕ ಬ್ಯಾಂಕ್ನ ಸಿಎಸ್ಆರ್ ನಿಧಿಯಿಂದ ಗಣಕ ವಿಜ್ಞಾನದ ಪ್ರಯೋಗಾಲಯಕ್ಕೆ ಯುಪಿಎಸ್ ಬ್ಯಾಟರಿಯನ್ನು ಉಡುಪಿ ಕರ್ನಾಟಕ ಬ್ಯಾಂಕ್ ವಿಭಾಗೀಯ ಕಚೇರಿಯ ಅಸಿಸ್ಟೆಂಟ್ ಜನರಲ್ ವ್ಯಾನೇಜರ್ ವಾದಿರಾಜ.ಕೆ ಅವರು ಪ್ರಾಂಶುಪಾಲರಿಗೆ ಹಸ್ತಾಂತರಿಸಿದರು.
ಕಾರ್ಯಕ್ರಮದಲ್ಲಿ ಪಿಎಚ್.ಡಿ ಪದವಿ ಪಡೆದ ಕಾಲೇಜಿನ ಸಹಾಯಕ ಪ್ರಾಧ್ಯಾಪಕ ಡಾ.ಚೇತನ ಎಂ. ಹಾಗೂ ಭಾರತೀಯ ವಿಶ್ವ ಪರಿಶೋಧಕರ ಅಂತಿಮ ಪರೀಕ್ಷೆಯಲ್ಲಿ ತೇರ್ಗಡೆ ಹೊಂದಿದ ಹಳೇ ವಿದ್ಯಾರ್ಥಿ ನಾಗರಾಜ ಪೂಜಾರಿ ಅವರನ್ನು ಸನ್ಮಾನಿಸಲಾಯಿತು. ಶಿಕ್ಷಕ-ರಕ್ಷಕ ಸಂ ಅಧ್ಯಕ್ಷ ಪ್ರಭಾಕರ ಖಾರ್ವಿ ಹಾಗೂ ವಿದ್ಯಾರ್ಥಿ ನಾಯಕರು ಉಪಸ್ಥಿತರಿದ್ದರು. ವಿದ್ಯಾರ್ಥಿ ಕ್ಷೇಮಪಾಲನಾಧಿಕಾರಿ ನಾಗರಾಜ ವೈದ್ಯ ಎಂ.ಸ್ವಾಗತಿಸಿ, ವಿದ್ಯಾರ್ಥಿ ನಾಯಕ ನಿತಿನ್ ವಂದಿಸಿದರು. ಉಪನ್ಯಾಸಕಿ ಶರಾವತಿ ನಿರೂಪಿಸಿದರು.