ನಮ್ಮ ಶಾಲೆ ನಮ್ಮ ಜವಾಬ್ದಾರಿ ಕಾರ್ಯಕ್ರಮಕ್ಕೆ ಚಾಲನೆ

ನಮ್ಮ ಶಾಲೆ ನಮ್ಮ ಜವಾಬ್ದಾರಿ ಕಾರ್ಯಕ್ರಮಕ್ಕೆ ಚಾಲನೆ
Published on

ಪಾಂಡವಪುರ: ಸರ್ಕಾರಿ ಶಾಲೆಗಳಲ್ಲಿ ವಿದ್ಯಾರ್ಥಿಗಳ ಹಾಜರಾತಿ ಹೆಚ್ಚಳ ಮಾಡುವ ಮತ್ತು ಶಾಲೆಗಳನ್ನು ಸಬಲೀಕರಣಗೊಳಿಸುವ ಉದ್ದೇಶದಿಂದ ಪಟ್ಟಣದ ಸರ್ಕಾರಿ ಪದವಿಪೂರ್ವ ಕಾಲೇಜಿನಲ್ಲಿ ಆಯೋಜಿಸಿದ್ದ ನಮ್ಮ ಶಾಲೆ ನಮ್ಮ ಜವಾಬ್ದಾರಿ ವಿಶೇಷ ಕಾರ್ಯಕ್ರಮಕ್ಕೆ ಕ್ಷೇತ್ರ ಶಿಕ್ಷಣಾಧಿಕಾರಿ ರವಿಕುಮಾರ್ ಶುಕ್ರವಾರ ಚಾಲನೆ ನೀಡಿದರು.

ಸರ್ಕಾರಿ ಶಾಲೆಗಳಲ್ಲಿ ಓದುವ ವಿದ್ಯಾರ್ಥಿಗಳಿಗೆ ಸರ್ಕಾರ ಹಲವಾರು ಸವಲತ್ತುಗಳನ್ನು ನೀಡುತ್ತಿದ್ದು, ಈ ಸವಲತ್ತುಗಳನ್ನು ವಿದ್ಯಾರ್ಥಿಗಳು ಸದ್ಬಳಕೆ ಮಾಡಿಕೊಂಡು ಉತ್ತಮ ಶಿಕ್ಷಣ ಪಡೆದುಕೊಳ್ಳಬೇಕು. ಸರ್ಕಾರ ಅನೇಕ ವಿಶೇಷ ಯೋಜನೆಗಳನ್ನು ಸರ್ಕಾರಿ ಶಾಲೆ ವಿದ್ಯಾರ್ಥಿಗಳಿಗಾಗಿ ರೂಪಿಸಿದೆ. ಮಧ್ಯಾಹ್ನದ ಬಿಸಿಯೂಟ ನೀಡಲಾಗುತ್ತಿದೆ ಎಂದರು.

ಕ್ಷೇತ್ರ ಸಮನ್ವಯಾಧಿಕಾರಿ ಪ್ರಕಾಶ್, ಪ್ರಾಂಶುಪಾಲ ಲಕ್ಷ್ಮೀನಾರಾಯಣ, ಉಪ ಪ್ರಾಂಶುಪಾಲ ಎನ್.ಮಹದೇವಪ್ಪ, ಉಪನ್ಯಾಸಕ ರಾಮಕೃಷ್ಣೇಗೌಡ, ಎಸ್‌ಡಿಎಂಸಿ ಅಧ್ಯಕ್ಷ ಮಾಕೇಗೌಡ, ಸಿಆರ್‌ಪಿ ಅನುಸೂಯ ಇತರರು ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net