

ಕೆ.ಆರ್.ಸಾಗರ: ಕೆ.ಆರ್.ಸಾಗರ ಗ್ರಾಮ ಪಂಚಾಯಿತಿ ವತಿಯಿಂದ ಸರ್ಕಾರ ನರೇಗಾ ಯೋಜನೆಯಡಿಯಲ್ಲಿ ನಿರ್ಮಿಸಿರುವ ಷಟಲ್ ಬ್ಯಾಡ್ಮಿಂಟನ್ ಕ್ರೀಡಾಂಗಣದ ಕೀ ಯನ್ನು ಕಂದಾಯ ಇಲಾಖೆಗೆ ನೀಡಲು ಪಿಡಿಒ ಮುಂದಾದ ಹಿನ್ನೆಲೆಯಲ್ಲಿ ಗ್ರಾಪಂ ಅಧ್ಯಕ್ಷರ ನೇತೃತ್ವದಲ್ಲಿ ಸೋಮವಾರ ಕಚೇರಿ ಮುಂದೆ ಪ್ರತಿಭಟನೆ ನಡೆಸಿ ಆಕ್ರೋಶ ವ್ಯಕ್ತಪಡಿಸಿದರು.
ಕೆಲವರ ರಾಜಕೀಯ ಪ್ರಭಾವಕ್ಕೆ ಒಳಗಾಗಿ ನರೇಗಾ ಯೋಜನೆಯಡಿಯಲ್ಲಿ ನಿರ್ಮಿಸಿರುವ ಷಟಲ್ ಬ್ಯಾಡ್ಮಿಂಟನ್ ಕ್ರೀಡಾಂಗಣವನ್ನು ಗ್ರಾಪಂ ಸದಸ್ಯರ ಗಮನಕ್ಕೆ ತಾರದೆ ನಿಯಮ ಉಲ್ಲಂಘಿಸಿ ಪಿಡಿಒ ಬಸವರಾಜು ಅವರು ಕಂದಾಯ ಇಲಾಖೆಗೆ ನೀಡಲು ದಾಖಲಾತಿ ಸಿದ್ಧಪಡಿಸುತ್ತಿದ್ದಾರೆ ಎಂದು ಪ್ರತಿಭಟನಾನಿರತರು ಆರೋಪಿಸಿದರು.
ಪ್ರತಿಭಟನೆಯಲ್ಲಿ ಗ್ರಾಪಂ ಆಧ್ಯಕ್ಷೆ ಶ್ರುತಿ, ಉಪಾಧ್ಯಕ್ಷ ರವಿಶಂಕರೇಗೌಡ, ಸದ್ಯರು, ಗ್ರಾಮಸ್ಥರು ಹಾಜರಿದ್ದರು.