

ಕೋಲಾರ: ಮಾವು ಬೆಳೆಗಾರರನ್ನು ರ್ನಿಲಸಿರುವ ರಾಜ್ಯ ಮತ್ತು ಕೇಂದ್ರ ಸರ್ಕಾರಗಳ ನೀತಿ ಖಂಡಿಸಿ ಪ್ರತಿ ಕೆಜಿ ಮಾವಿಗೆ 15 ರೂ. ಬೆಂಬಲ ಬೆಲೆ ಷಣೆ ಮಾಡುವಂತೆ ಒತ್ತಾಯಿಸಿ ಸಿಪಿಐಎಂ ಪಕ್ಷದ ಜಿಲ್ಲಾ ಸಮಿತಿ ನೇತೃತ್ವದಲ್ಲಿ ಗುರುವಾರ ನಗರದ ಹೊಸ ಬಸ್ ನಿಲ್ದಾಣದ ಬಳಿ ರಸ್ತೆ ಮಧ್ಯೆ ಮಾವಿನ ಕಾಯಿ ಸುರಿದು, ಸಾರ್ವಜನಿಕರಿಗೆ ಉಚಿತವಾಗಿ ಮಾವಿನ ಹಣು ವಿತರಿಸಿ ಆಕ್ರೋಶ ವ್ಯಕ್ತಪಡಿಸಿದರು.
ಸಿಪಿಐಎಂ ಜಿಲ್ಲಾ ಕಾರ್ಯದರ್ಶಿ ಪಿ.ಆರ್ ಸೂರ್ಯನಾರಾಯಣ ಮಾತನಾಡಿ, ನಮ್ಮನ್ನಾಳುವ ಸರ್ಕಾರಗಳ ರೈತ ವಿರೋಧಿ ಧೋರಣೆಗಳಿಂದ ಮಾವು ಬೆಳೆಗಾರರು ಬೀದಿಗೆ ಬಂದಿದ್ದಾರೆ. ಮಾವು ಬೆಳೆ ಕುಸಿತಕ್ಕೆ ಹೋರ ದೇಶಗಳ ಹಣ್ಣುಗಳ ರಸದ ಆಮದು ಆಗುತ್ತಿರುವುದರಿಂದ ದೇಶದಲ್ಲಿ ತಯಾರಾಗುವ ಹಣ್ಣಿನ ರಸ ಉಳಿಯುವಂತಾಗಿದೆ. ಆಂಧ್ರಪ್ರದೇಶ ಮತ್ತು ತಮಿಳುನಾಡು ಜ್ಯೂಸ್ ್ಯಾಕ್ಟರಿಗಳ ಮೇಲೆ ಅವಲಂಬನೆ ಆಗುವುದು ಬಿಟ್ಟು ನಮ್ಮದೇ ರಾಜ್ಯದಲ್ಲಿ ಜ್ಯೂಸ್ ್ಯಾಕ್ಟರಿಗಳನ್ನು ಪ್ರಾರಂಭಿಸಬೇಕು ಎಂದು ಒತ್ತಾಯಿಸಿದರು.
ರಾಜ್ಯ ಮತ್ತು ಕೇಂದ್ರ ಸರ್ಕಾರಗಳು ಒಂದು ಟನ್ ಮಾವುಗೆ 15 ಸಾವಿರ ರೂ. ಸಿಗುವಂತೆ ಬೆಂಬಲ ಬೆಲೆ ೂಷಣೆ ಮಾಡಿ ಸಹಕಾರಿ ರಂಗದ ಮೂಲಕ ಹಣ್ಣು ತಿರುಳು ಕೈಗಾರಿಕೆಯನ್ನು ಸ್ಥಾಪಿಸಬೇಕು. ಶ್ರೀನಿವಾಸಪುರದಲ್ಲಿನ ಪ್ರಮುಖ ಮಾರುಕಟ್ಟೆ ಕೇಂದ್ರವು ಪ್ರಪಂಚದ ಪ್ರಸಿದ್ಧ ಮಾವಿನ ನಗರವಾಗಿ ಹೆಸರು ಪಡೆದಿದೆ. ಹವಾಮಾನ ವೈಪರೀತ್ಯಗಳಿಂದ ಸಾಕಷ್ಟು ಬೆಳೆ ನಷ್ಟವಾಗಿದ್ದು, ರೈತರಿಗೆ ಸರಿಯಾದ ಮಾರುಕಟ್ಟೆ ವ್ಯವಸ್ಥೆ ಇಲ್ಲದೇ ಕಾಯಿಗಳನ್ನು ತೋಟದಲ್ಲೇ ಬಿಡುವಂತೆ ಪರಿಸ್ಥಿತಿ ಎದುರಾಗಿದೆ. ಕೂಡಲೇ ಸರ್ಕಾರಗಳು ಗಮನ ಹರಿಸಬೇಕು ಎಂದು ಒತ್ತಾಯಿಸಿದರು.
ಕೇಂದ್ರ ಸರ್ಕಾರ ದೇಶದ ರೈತರ ರಕ್ಷಣೆಗೆ ನಿಲ್ಲಲು ಅನ್ಯ ದೇಶಗಳಿಂದ ನಮ್ಮ ದೇಶಕ್ಕೆ ಬರುತ್ತಿರುವ ಆಗದು ನಿಲ್ಲಿಸಬೇಕು. ಹಣ್ಣಿನ ರಸ ಸಾಂದ್ರೀಕರಣ ನಿಲ್ಲಿಸಬೇಕು. ಡಾ.ಸ್ವಾಮಿನಾಥನ್ ಶಿಫಾರಸ್ಸಿನ ಮೇಲೆ ಮಾವಿಗೂ ಬೆಂಬಲ ಬೆಲೆ ೂಷಣೆ ಮಾಡಬೇಕು. ಇಲ್ಲದೇ ಹೋದರೆ ಮುಂದಿನ ದಿನಗಳಲ್ಲಿ ರಾಜ್ಯಾದ್ಯಂತ ಪ್ರತಿಭಟನೆ ತೀವ್ರಗೊಳಿಸಬೇಕಾಗುತ್ತದೆ ಎಂದು ಎಚ್ಚರಿಕೆ ನೀಡಿದರು.
ಸಿಪಿಐಎಂ ಪಕ್ಷದ ಜಿಲ್ಲಾ ಕಾರ್ಯದರ್ಶಿ ಮಂಡಳಿ ಸದಸ್ಯೆ ವಿ.ಗೀತಾ ಮಾತನಾಡಿ, ಮಾವಿನ ಹಣ್ಣುಗಳಿಗೆ ಬೆಂಬಲ ಬೆಲೆ ೂಷಣೆಗೆ ಜಿಲ್ಲೆಯ ಜನಪ್ರತಿನಿಧಿಗಳು ಸರ್ಕಾರದ ಮೇಲೆ ಒತ್ತಡ ತರಬೇಕು. ಜಿಲ್ಲೆಯಲ್ಲಿ ಕೃಷಿ ಆಧಾರಿತ ಹಾಗೂ ಹಣ್ಣುಗಳ ರಸ ತೆಗೆಯುವ ಕಾರ್ಖಾನೆಗಳು ಸ್ಥಾಪನೆ ಆಗಬೇಕು, ರೈತರ ಧ್ವನಿಯಾಗದ ಶಾಸಕರು ಸಂಸದರ ವಿರುದ್ಧ ಪ್ರತಿಭಟನೆಗೆ ಮುಂದಾಗಬೇಕು ಎಂದು ಎಚ್ಚರಿಕೆ ನೀಡಿದರು.
ಸಿಪಿಐಎಂ ಕಾರ್ಯದರ್ಶಿ ಮಂಡಳಿ ಸದಸ್ಯರಾದ ಗಾಂಧಿನಗರ ನಾರಾಯಣಸ್ವಾಮಿ, ಟಿ.ಎಂ. ವೆಂಕಟೇಶ್, ಪಾತಕೋಟೆ ನವೀನ್ಕುಮಾರ್, ತಂಗರಾಜ್, ಜಿಲ್ಲಾ ಸಮಿತಿ ಸದಸ್ಯರಾದ ವಿಜಯಕೃಷ್ಣ, ಅಪ್ಪಯ್ಯಣ್ಣ, ಜಯಲಕ್ಷಿ$್ಮ, ಪಿ.ಶ್ರೀನಿವಾಸ್ ಇತರರು ಇದ್ದರು.