ಹೊರಗುತ್ತಿಗೆ ಪದ್ಧತಿ ರದ್ದತಿಗೆ ಆಗ್ರಹ: ಬಳ್ಳಾರಿಯಲ್ಲಿ ಕರ್ನಾಟಕ ಗ್ರಾಮೀಣ ಬ್ಯಾಂಕ್ ನೌಕರರ ಧರಣಿ

Ballari Karnataka Rural Bank Employees' Protest
ಕರ್ನಾಟಕ ಗ್ರಾಮೀಣ ಬ್ಯಾಂಕ್ ನೌಕರರು ಮತ್ತು ಅಧಿಕಾರಿಗಳ ಸಂಘದಿಂದ ಮಂಗಳವಾರ ಬಳ್ಳಾರಿಯಲ್ಲಿರುವ ಬ್ಯಾಂಕಿನ ಪ್ರಧಾನ ಕಚೇರಿ ಎದುರು ಮಂಗಳವಾರ ಧರಣಿ ನಡೆಯಿತು.
Published on

ಬಳ್ಳಾರಿ: ಹೊರಗುತ್ತಿಗೆ ಪದ್ಧತಿ ರದ್ದು ಮಾಡಬೇಕು. ಗುತ್ತಿಗೆ ನೌಕರರನ್ನು ಕಾರ್ಮಿಕ ನ್ಯಾಯಮಂಡಳಿ ಆದೇಶದಂತೆ ಕಾಯಂಗೊಳಿಸಬೇಕು ಎಂಬುದು ಸೇರಿ ವಿವಿಧ ಬೇಡಿಕೆ ಈಡೇರಿಸಲು ಆಗ್ರಹಿಸಿ ಕರ್ನಾಟಕ ಗ್ರಾಮೀಣ ಬ್ಯಾಂಕ್ ನೌಕರರು ಮತ್ತು ಅಧಿಕಾರಿಗಳ ಸಂಘದಿಂದ ಮಂಗಳವಾರ ನಗರದಲ್ಲಿರುವ ಬ್ಯಾಂಕ್‌ನ ಪ್ರಧಾನ ಕಚೇರಿ ಎದುರು ಧರಣಿ ನಡೆಯಿತು.

ಪ್ರೇರಕ ಬ್ಯಾಂಕ್‌ನ ಎಲ್ಲ ಸೌಲಭ್ಯಗಳನ್ನು ಗ್ರಾಮೀಣ ಬ್ಯಾಂಕ್ ಸಿಬ್ಬಂದಿಗೆ ನೀಡಬೇಕು. ವೈಜ್ಞಾನಿಕ ವರ್ಗಾವಣೆ ನೀತಿ ಜಾರಿಗೊಳಿಸಬೇಕು. ನಿವೃತ್ತಿ ದಿನವೇ ಸಿಬ್ಬಂದಿಗೆ ಅಗತ್ಯ ಸೌಲಭ್ಯ ಕಲ್ಪಿಸಬೇಕು. ಕರೊನಾ ಸೋಂಕಿತ ಹಾಗೂ ಕ್ವಾರಂಟೈನ್‌ನಲ್ಲಿರುವ ಸಿಬ್ಬಂದಿಗೆ ವಿಶೇಷ ರಜೆ ನೀಡಬೇಕು. ಬ್ಯಾಂಕ್‌ನ 10 ಶಾಖೆಗಳನ್ನು ಮುಚ್ಚುವ ನಿರ್ಧಾರ ಕೈಬಿಡಬೇಕೆಂದು ಒತ್ತಾಯಿಸಲಾಯಿತು. ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಅ.15ರವರೆಗೆ ಜಿಲ್ಲಾವಾರು ನೌಕರರು ಸರದಿಯಂತೆ ಧರಣಿಯಲ್ಲಿ ಪಾಲ್ಗೊಳ್ಳಲಿದ್ದಾರೆ.

ನೌಕರರ ಸಂಘದ ಪ್ರಧಾನ ಕಾರ್ಯದರ್ಶಿ ಕೆ.ಎಂ.ಗುರುಮೂರ್ತಿ, ಜಿಲ್ಲಾ ಅಧ್ಯಕ್ಷ ಗಂಗಾಧರ, ಜಂಟಿ ಕಾರ್ಯದರ್ಶಿ ಮಂಜುನಾಥ, ಅಧಿಕಾರಿಗಳ ಸಂಘದ ಪ್ರಧಾನ ಕಾರ್ಯದರ್ಶಿ ಶ್ರೀಧರ ಜೋಷಿ, ಜಿಲ್ಲಾ ಅಧ್ಯಕ್ಷ ಶಾಂತ ನಾಯ್ಕ, ಕಾರ್ಯದರ್ಶಿ ರಾಮಲಿಂಗೇಶ್ವರ ಇತರರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net