ನಿಪ್ಪಾಣಿ: 300ಕ್ಕೂ ಅಧಿಕ ವಾಹನಗಳು ವಶ

bike
Published on

ನಿಪ್ಪಾಣಿ: ಲಾಕ್‌ಡೌನ್ ಉಲ್ಲಂಘಿಸಿ ಸೋಮವಾರದವರೆಗೆ ಅನವಶ್ಯಕವಾಗಿ ಸಂಚರಿಸುತ್ತಿದ್ದ ಸುಮಾರು 300ಕ್ಕೂ ಅಧಿಕ ವಾಹನಗಳನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ. 13 ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು 80ಕ್ಕೂ ಅಧಿಕ ಜನರನ್ನು ಬಂಧಿಸಿದ್ದಾರೆ.

ಸ್ಥಳೀಯ ಆರಕ್ಷಕ ವೃತ್ತ ನಿರೀಕ್ಷಕರ ವ್ಯಾಪ್ತಿಯಲ್ಲಿ ಶಹರ್ ಪೊಲೀಸ್ ಠಾಣೆ, ಬಸವೇಶ್ವರ ಚೌಕ್ ಪೊಲೀಸ್ ಠಾಣೆ, ಗ್ರಾಮೀಣ ಪೊಲೀಸ್ ಠಾಣೆ ಮತ್ತು ಚಿಕ್ಕೋಡಿ ತಾಲೂಕಿನ ಖಡಕಲಾಟ ಪೊಲೀಸ್ ಠಾಣೆಯ ವ್ಯಾಪ್ತಿಯಲ್ಲಿ ಒಟ್ಟಾರೆ 300ಕ್ಕೂ ಅಧಿಕ ವಾಹನಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಸಿಪಿಐ ಸಂತೋಷ ಸತ್ಯನಾಯಿಕ ತಿಳಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net