

ಮೂಡುಬಿದಿರೆ: ಎಕ್ಸಲೆಂಟ್ ವಿದ್ಯಾಸಂಸ್ಥೆಯಲ್ಲಿ-ಶಾಲಾ ಶಿಕ್ಷಣ ಇಲಾಖೆ ಮೂಡುಬಿದಿರೆ ತಾಲೂಕು, ದ.ಕ. ಮತ್ತು ಎಕ್ಸಲೆಂಟ್ ಪದವಿಪೂರ್ವ ಕಾಲೇಜಿನ ಸಂಯುಕ್ತ ಆಶ್ರಯದಲ್ಲಿ 2024-25ನೇ ಸಾಲಿನ ಮೂಡಬಿದಿರೆ ತಾಲೂಕು ಮಟ್ಟದ- ಶಟಲ್ ಬ್ಯಾಡ್ಮಿಂಟನ್ ಮತ್ತು ಟೇಬಲ್ ಟೆನ್ಸಿಸ್ ಪಂದ್ಯಾಟದಲ್ಲಿ ಎಕ್ಸಲೆಂಟ್ ಕಾಲೇಜು ಸಮಗ್ರ ಪ್ರಶಸ್ತಿ ಪಡೆಯಿತು.
ಪದವಿಪೂರ್ವ ಬಾಲಕ ಬಾಲಕಿಯರ ವಿಭಾಗದ ಟೇಬಲ್ ಟೆನ್ನಿಸ್ ಪಂದ್ಯಾಟದಲ್ಲಿ ಎಕ್ಸಲೆಂಟ್ ಪದವಿಪೂರ್ವ ಕಾಲೇಜು ಪ್ರಥಮ ಸ್ಥಾನವನ್ನು ಹಾಗೂ ಶೆಟಲ್ ಬ್ಯಾಡ್ಮಿಟನ್ ಪಂದ್ಯದಲ್ಲಿ ಬಾಲಕಿಯರ ವಿಭಾಗದಲ್ಲಿ ಪ್ರಥಮ ಸ್ಥಾನವನ್ನು, ಬಾಲಕರ ವಿಭಾಗದಲ್ಲಿ ದ್ವಿತೀಯ ಸ್ಥಾನವನ್ನು ಪಡೆದು ಸಮಗ್ರ ಪ್ರಶಸ್ತಿಯನ್ನು ತಮ್ಮದಾಗಿಸಿಕೊಂಡು ಜಿಲ್ಲಾ ಮಟಕ್ಕೆ ಪ್ರವೇಶ ಪಡೆದರು.
ಎಕ್ಸಲೆಂಟ್ ಕಾಲೇಜಿನ ಪ್ರಾಧ್ಯಾಪಕ ನರಸಿಂಹ ರಾವ್ ಪಂದ್ಯಾಟಕ್ಕೆ ಚಾಲನೆ ನೀಡಿದರು. ಮೂಡುಬಿದಿರೆ ತಾಲೂಕಿನ ದೈಹಿಕ ಶಿಕ್ಷಣ ಸಂಯೋಜಕ ನವೀನ್ ಎಂ ಹೆಗ್ಡೆ, ಎಕ್ಸಲೆಂಟ್ ಸಂಸ್ಥೆಯ ಕಾರ್ಯದರ್ಶಿ ರಶ್ಮಿತಾ ಜೈನ್ ಉಪಸ್ಥಿತರಿದ್ದರು.