ಸವಾಲುಗಳನ್ನು ಮೆಟ್ಟಿನಿಂತು ಸಾಧನೆ ಮಾಡಿ, ಜಿಪಂ ಸಿಇಒ ನಾಗರಾಜ್ ಕಿವಿಮಾತು, ಅಂಧ ವಿದ್ಯಾರ್ಥಿಗಳಿಗೆ ಟಾಕಿಂಗ್ ಲ್ಯಾಪ್‌ಟಾಪ್

laptop
Published on

ಬೆಂಗಳೂರು ಗ್ರಾಮಾಂತರ: ಅಂಗವೈಕಲ್ಯದ ಸವಾಲು ಮೆಟ್ಟಿನಿಲ್ಲುವ ಮೂಲಕ ಜೀವನದಲ್ಲಿ ವಿಶೇಷ ಸಾಧನೆಗೆ ಮುನ್ನುಡಿ ಬರೆಯಬೇಕು ಎಂದು ಗ್ರಾಮಾಂತರ ಜಿಲ್ಲಾ ಪಂಚಾಯಿತಿ ಕಾರ್ಯನಿರ್ವಹಣಾಧಿಕಾರಿ ಎನ್.ಎಂ.ನಾಗರಾಜ್ ಹೇಳಿದರು.

ದೇವನಹಳ್ಳಿ ತಾಲೂಕು ಗ್ರಾಮಾಂತರ ಜಿಲ್ಲಾಡಳಿತ ಭವನದಲ್ಲಿ ಗುರುವಾರ ಮೂವರು ಅಂಧರಿಗೆ ಟಾಕಿಂಗ್ ಲ್ಯಾಪ್‌ಟಾಪ್ ವಿತರಿಸಿ ಮಾತನಾಡಿದರು. ತಂತ್ರಜ್ಞಾನ ಜಗತ್ತಿನಲ್ಲಿ ಎಲ್ಲ ಸವಾಲು ಮೆಟ್ಟಿನಿಲ್ಲುವಂತಹ ತಂತ್ರಜ್ಞಾನ ಅವಿಷ್ಕಾರಗೊಂಡಿವೆ. ಅವುಗಳನ್ನು ಸದ್ಬಳಕೆ ಮಾಡಿಕೊಳ್ಳುವ ಮೂಲಕ ಸವಾಲು ಎದುರಿಸಬೇಕು ಎಂದು ಕಿವಿಮಾತು ಹೇಳಿದರು.

ಪ್ರಸ್ತುತ ಸ್ಪರ್ಧಾತ್ಮಕ ಯುಗದಲ್ಲಿ ಕಂಪ್ಯೂಟರ್ ತಂತ್ರಜ್ಞಾನ ಅತ್ಯವಶ್ಯಕತವಾಗಿದ್ದು, ಅಂಧ ವಿದ್ಯಾರ್ಥಿಗಳು ಇವುಗಳನ್ನು ಸದ್ಬಳಕೆ ಮಾಡಿಕೊಂಡು ಭವಿಷ್ಯ ರೂಪಿಸಿಕೊಳ್ಳಬೇಕು. ಸಾಧನೆಗೆ ಅಂಗವೈಕಲ್ಯ ಶಾಪವಾಗಬಾರದು. ಸಾಧಿಸುವ ಛಲ ಬೆಳಸಿಕೊಂಡರೆ ಅಸಾಧ್ಯವೆನಿಸಿದ್ದನ್ನು ಸಾಧಿಸಿ ತೋರಿಸಬಹುದು ಎಂದರು.

2019-20ನೇ ಸಾಲಿನ ಗ್ರಾಮಾಂತರ ಜಿಲ್ಲಾ ವ್ಯಾಪ್ತಿಯಲ್ಲಿರುವ ಶಾಲಾ ಕಾಲೇಜುಗಳಲ್ಲಿ ವ್ಯಾಸಂಗ ಮಾಡುತ್ತಿರುವ ಮೂವರು ಅಂಧ ವಿದ್ಯಾರ್ಥಿಗಳಿಗೆ ಟಾಕಿಂಗ್ ಲ್ಯಾಪ್‌ಟಾಪ್ ವಿತರಿಸಲಾಗುತ್ತಿದೆ ಎಂದು ಜಿಲ್ಲಾ ಅಂಗವಿಕಲ ಕಲ್ಯಾಣಾಧಿಕಾರಿ ಎನ್.ಎಂ.ಜಗದೀಶ್ ಹೇಳಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net