25 ಆಕ್ಸಿಜನ್ ಕಾನ್ಸನ್‌ಟ್ರೇಟರ್ ಹಸ್ತಾಂತರ

zp-art of living oxygen concentrator donation (1)
Published on

ಶಿವಮೊಗ್ಗ: ಆರ್ಟ್ ಆಫ್ ಲಿವಿಂಗ್ ಸಂಸ್ಥೆ ಹಾಗೂ ಇದರ ಅಂಗ ಸಂಸ್ಥೆಯ ಇಂಟರ್‌ನ್ಯಾಷನಲ್ ಅಸೋಸಿಯೇಷನ್ ಫಾರ್ ಹ್ಯೂಮನ್ ವ್ಯಾಲ್ಯೂ ಸಹಯೋಗದಲ್ಲಿ ಶುಕ್ರವಾರ ಜಿಪಂ ಸಭಾಂಗಣದಲ್ಲಿ ಕರೊನಾ ರೋಗಿಗಳಿಗೆ ಅನುಕೂಲವಾಗುವ 25 ಆಕ್ಸಿಜನ್ ಕಾನ್ಸನ್‌ಟ್ರೇಟರ್‌ಗಳನ್ನು ಜಿಲ್ಲಾಡಳಿತಕ್ಕೆ ಹಸ್ತಾಂತರಿಸಲಾಯಿತು.

ತಲಾ 1.28 ಲಕ್ಷ ರೂ. ವೆಚ್ಚದ 5 ಲೀ. ಸಾಮರ್ಥ್ಯದ ಆಕ್ಸಿಜನ್ ಕಾನ್ಸನ್‌ಟ್ರೇಟರ್ ನೀಡಲಾಯಿತು. ಜಿಲ್ಲಾಸ್ಪತ್ರೆಗೆ 5 ಹಾಗೂ ತಾಲೂಕು ಸರ್ಕಾರಿ ಆಸ್ಪತ್ರೆಗಳಿಗೆ ತಲಾ 4 ಕಾನ್ಸನ್‌ಟ್ರೇಟರ್‌ಗಳನ್ನು ಡಿಸಿ ಕೆ.ಬಿ.ಶಿವಕುಮಾರ್, ಜಿಪಂ ಸಿಇಒ ಎಂ.ಎಲ್.ವೈಶಾಲಿ ಹಾಗೂ ಡಿಎಚ್‌ಓ ಡಾ. ರಾಜೇಶ್ ಸುರಗಿಹಳ್ಳಿ ಅವರಿಗೆ ಸಂಸ್ಥೆಯ ಪದಾಧಿಕಾರಿಗಳು ಹಸ್ತಾಂತರಿಸಿದರು.

ಆರ್ಟ್ ಆಫ್ ಲಿವಿಂಗ್‌ನ ಜಿಲ್ಲಾ ಶಿಕ್ಷಕ ಸಂಯೋಜಕ ಶಶಿಭೂಷಣ್ ಶಾಸ್ತ್ರಿ, ಶಿಕ್ಷಕರಾದ ಮೂರ್ತಿ ಭದ್ರಾವತಿ, ಭಾಗ್ಯಮೂರ್ತಿ, ಸಂಸ್ಥೆಯ ಜಿಲ್ಲಾ ಅಭಿವೃದ್ಧಿ ಸಮಿತಿ ಸದಸ್ಯರಾದ ವೇಣುಗೋಪಾಲ್, ಪ್ರಕಾಶ್, ನಾಗರಾಜ್ ಸೇಠ್ ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net