ವಿಜಯವಾಣಿಯ ಹಿರಿಯ ಉಪಸಂಪಾದಕ ರಾಜೇಶ್ ಶೆಟ್ಟಿ ದೋಟ ಪ.ಗೋ. ಪ್ರಶಸ್ತಿಗೆ ಆಯ್ಕೆ

mng-21may-rajesh shetty
Published on


ಮಂಗಳೂರು : ದ.ಕ. ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ವತಿಯಿಂದ ನೀಡಲಾಗುವ ಪ.ಗೋ. ಪ್ರಶಸ್ತಿಗೆ ವಿಜಯವಾಣಿಯ ಹಿರಿಯ ಉಪಸಂಪಾದಕ ರಾಜೇಶ್ ಶೆಟ್ಟಿ ದೋಟ ಆಯ್ಕೆಯಾಗಿದ್ದಾರೆ.
2024ರ ಡಿ.26ರಂದು ವಿಜಯವಾಣಿ ಪತ್ರಿಕೆಯಲ್ಲಿ ಪ್ರಕಟವಾದ ದಟ್ಟಡವಿಯಲ್ಲೊಂದು ದಾರಿಯ ಕೂಗು, ಮೂಲನಿವಾಸಿ ಕುಟುಂಬಕ್ಕೆ ಬೇಕಿದೆ ಮಾನವೀಯ ಕಾಳಜಿ ಎಂಬ ವಿಶೇಷ ವರದಿ ಪ್ರಶಸ್ತಿಗೆ ಆಯ್ಕೆ ಯಾಗಿದೆ. ಹಿರಿಯ ಪತ್ರಕರ್ತ ಯು.ಕೆ. ಕುಮಾರನಾಥ್, ಸಾಹಿತಿ ಭಾಸ್ಕರ ರೈ ಕುಕ್ಕುವಳ್ಳಿ, ಪತ್ರಿಕೋದ್ಯಮ ಉಪನ್ಯಾಸಕಿ ಸುಶ್ಮಿತಾ ಆಯ್ಕೆ ಸಮಿತಿಯಲ್ಲಿದ್ದರು. ಪ್ರಶಸ್ತಿಯು 10,001 ರೂ. ನಗದು, ಪ್ರಶಸ್ತಿ ಫಲಕ, ಸ್ಮರಣಿಕೆ ಒಳಗೊಂಡಿದೆ.
*ಪ್ರಶಸ್ತಿ ಪ್ರದಾನ ಸಮಾರಂಭ
ಮೇ 24ರಂದು ಬೆಳಗ್ಗೆ 11ಕ್ಕೆ ಮಂಗಳೂರು ಪ್ರೆಸ್ ಕ್ಲಬ್‌ನಲ್ಲಿ ಕರ್ನಾಟಕ ಮಾಹಿತಿ ಆಯೋಗದ ಅಧ್ಯಕ್ಷ ಬದ್ರುದ್ದೀನ್ ಕೆ. ಪ್ರಶಸ್ತಿ ಪ್ರದಾನ ಮಾಡಲಿದ್ದಾರೆ. ವಾರ್ತಾ ಇಲಾಖೆ ಹಿರಿಯ ಸಹಾಯಕ ನಿರ್ದೇಶಕ ಖಾದರ್ ಷಾ ಮುಖ್ಯ ಅತಿಥಿಯಾಗಿ ಭಾಗವಹಿಸಲಿದ್ದಾರೆ . ಜಿಲ್ಲಾ ಕಾರ್ಯ ನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಶ್ರೀನಿವಾಸ್ ನಾಯಕ್‌ಇಂದಾಜೆ ಅಧ್ಯಕ್ಷತೆ ವಹಿಸುವರು. ಮಂಗಳೂರು ಪ್ರೆಸ್ ಕ್ಲಬ್ ಅಧ್ಯಕ್ಷ ಪಿ.ಬಿ.ಹರೀಶ್ ರೈ, ಪತ್ರಿಕಾ ಭವನ ಟ್ರಸ್ಟ್ ಅಧ್ಯಕ್ಷ ರಾಮಕೃಷ್ಣ ಆರ್.ಉಪಸ್ಥಿತರಿರುವರು ಎಂದು ಪತ್ರಕರ್ತರ ಸಂಘದ ಪ್ರಧಾನ ಕಾರ್ಯದರ್ಶಿ ಜಿತೇಂದ್ರ ಕುಂದೇಶ್ವರ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
*ಪರಿಚಯ
ರಾಜೇಶ್ ಶೆಟ್ಟಿ ದೋಟ ಅವರು ಬಂಟ್ವಾಳ ತಾಲೂಕಿನ ವಾಮದಪದವು ನಿವಾಸಿ. ಸಮೂಹ ಸಂವಹನ ಮತ್ತು ಪತ್ರಿಕೋದ್ಯಮದಲ್ಲಿ
ಸ್ನಾತಕೋತ್ತರ ಪದವಿ ಪಡೆದಿದ್ದು, 11 ವರ್ಷಗಳಿಂದ ’ವಿಜಯವಾಣಿ’ ಸಂಪಾದಕೀಯ ವಿಭಾಗದಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದಾರೆ. ಸಾಹಿತ್ಯ, ಪರಿಸರ, ಕಲೆ ಆಸಕ್ತಿಯ ಕ್ಷೇತ್ರ. ಎರಡು ತುಳು ಕೃತಿಗಳು ಬಿಡುಗಡೆಗೊಂಡಿವೆ. ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿಯ ಪುಸ್ತಕ ಪ್ರಶಸ್ತಿ
ಪುರಸ್ಕೃತರಾಗಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net