

ವಿಜಯವಾಣಿ ಸುದ್ದಿಜಾಲ ಕೋಟ
ಗ್ರಾಮೀಣ ಕರಾವಳಿ ಭಾಗದಲ್ಲಿ ಪಚ್ಚಿಲೆ ಕೃಷಿ ಮೂಲಕ ಸ್ವಾವಲಂಬಿ ಬದುಕು ಸಾಧ್ಯ ಎಂದು ಮತ್ಸೊದ್ಯಮಿ ಆನಂದ್ ಸಿ.ಕುಂದರ್ ಹೇಳಿದರು.
ಜಲಾನಯನ ಅಭಿವೃದ್ಧಿ ಇಲಾಖೆ, ಕೃಷಿ ಇಲಾಖೆ, ಮೀನುಗಾರಿಕಾ ಇಲಾಖೆ, ಮೀನುಗಾರಿಕಾ ಕಾಲೇಜು ಮಂಗಳೂರು, ಸ್ಕೊಡ್‌ವೆಸ್ ಸಂಸ್ಥೆ, ಆಯುಷ್ಮಾನ್‌ಭವ ಸಂಸ್ಥೆ, ಉಡುಪಿ ಕಿನಾರ ಮೀನುಗಾರ ಉತ್ಪಾದಕ ಕಂಪನಿ, ಅಮೃತೇಶ್ವರಿ ರೈತ ಉತ್ಪಾದಕ ಕಂಪನಿ ಆಶ್ರಯದಲ್ಲಿ ಕೋಡಿ ಕನ್ಯಾಣ ಪರಿಸರದಲ್ಲಿ ಶುಕ್ರವಾರ ಪಚ್ಚಿಲೆ ಮೇಳ-2024 ಅನ್ನು ಉದ್ಘಾಟಿಸಿ ಮಾತನಾಡಿದರು.
ಉಡುಪಿ ಜಿಪಂ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಪ್ರತೀಕ್ ಬಾಯಲ್, ಮೀನುಗಾರಿಕಾ ಮಹಾವಿದ್ಯಾಲಯ ಡೀನ್ ಡಾ.ಎಚ್.ಎನ್.ಆಂಜನೇಯಪ್ಪ, ಜಿಲ್ಲಾ ಕೃಷಿ ಇಲಾಖೆ ಸಹಾಯಕ ನಿರ್ದೇಶಕ ಮೋಹನ್‌ರಾಜ್, ಉಪನಿರ್ದೇಶಕ ಡಾ.ರಾಜೇಶ್, ಮೀನುಗಾರಿಕೆ ಇಲಾಖೆ ಜಂಟಿ ನಿರ್ದೇಶಕ ವಿವೇಕ್ ಆರ್., ಜಿಲ್ಲಾ ಆಹಾರ ಸುರಕ್ಷೆ ಮತ್ತು ಗುಣಮಟ್ಟ ಪ್ರಾಧಿಕಾರ ಅಂಕಿತ ಅಧಿಕಾರಿ ಡಾ.ಪ್ರವೀಣ್ ಸಿ.ಎಚ್., ಉಡುಪಿ ಲೀಡ್ ಬ್ಯಾಂಕ್ ಮ್ಯಾನೇಜರ್ ಹರೀಶ್ ಜಿ., ಮತ್ಸೊೃೀದ್ಯಮಿ ಶಂಕರ್ ಕುಂದರ್, ಪಿಡಿಒ ಹರೀಶ್ ಕುಮಾರ್ ಶೆಟ್ಟಿ, ಕೋಡಿ ಪಿಡಿಒ ರವೀಂದ್ರ ರಾವ್, ಜಿಲ್ಲಾ ಜಿಲ್ಲಾ ಕೃಷಿಕ ಸಮಾಜ ಅಧ್ಯಕ್ಷ ಎ.ಅಶೋಕ್ ಕುಮಾರ್ ಕೊಡ್ಗಿ, ಉಡುಪಿ ಕಿನಾರ ಮೀನುಗಾರರ ಉತ್ಪಾದಕ ಕಂಪನಿ ಅಧ್ಯಕ್ಷ ಲೋಹಿತ್ ಖಾರ್ವಿ, ಅಮೃತೇಶ್ವರಿ ರೈತ ಉತ್ಪಾದಕ ಕಂಪನಿ ಅಧ್ಯಕ್ಷೆ ಬೇಬಿ ಮೆಂಡನ್ ಉಪಸ್ಥಿತರಿದ್ದರು.
ಮೀನು ಸಂಸ್ಕರಣಾ ತಂತ್ರಜ್ಞಾನ ಇಲಾಖೆ ಪ್ರಾಧ್ಯಾಪಕ ಡಾ.ಬಿ.ಮಂಜು ನಾಯ್ಕ ಸಂಪನ್ಮೂಲ ವ್ಯಕ್ತಿಗಳಾಗಿದ್ದರು. ಸ್ಕೊಡ್‌ವೆಸ್ ಸಂಸ್ಥೆ ಸಂಯೋಜಕ ಗಂಗಾಧರ್ ನಿರೂಪಿಸಿದರು. ಉಡುಪಿ ಕಿನಾರ ಮೀನುಗಾರರ ಉತ್ಪಾದಕ ಕಂಪನಿ ನಿರ್ದೇಶಕ ಸುದೀನ ಕೋಡಿ ವಂದಿಸಿದರು.