

ಮಂಗಳೂರು: ಪದವಿನಂಗಡಿ ಬೊಲ್ಪುಗುಡ್ಡೆ ನವಚೇತನ ಫ್ರೆಂಡ್ಸ್ ಕ್ಲಬ್‌ನ 32ನೇ ವಾರ್ಷಿಕೋತ್ಸವ ಜ.15ರಂದು ನಡೆಯಲಿದ್ದು, ಇದರ ಅಂಗವಾಗಿ ಬೆಳಗ್ಗೆ 9.30ರಿಂದ ಸಾರ್ವಜನಿಕ ಶ್ರೀ ಸತ್ಯನಾರಾಯಣ ಪೂಜೆ ಹಾಗೂ ಶ್ರೀ ಮಹಾಲಿಂಗೇಶ್ವರ ದೇವರ ಕಟ್ಟೆಯ ಪೂಜೆ ನಡೆಯಲಿದೆ.
ಸಂಜೆ 7 ಗಂಟೆಗೆ ನಡೆಯುವ ಸಭಾ ಕಾರ್ಯಕ್ರಮದಲ್ಲಿ ಕೊಂಚಾಡಿ ಶ್ರೀ ವೆಂಕಟರಮಣ ದೇವಸ್ಥಾನದ ಆಡಳಿತ ಮೊಕ್ತೇಸರ ಜಿ. ರತ್ನಾಕರ ಕಾಮತ್ ಅಧ್ಯಕ್ಷತೆ ವಹಿಸಲಿದ್ದಾರೆ. ಇಂಡಿಯನ್ ಸೈಕಿಯಾಟ್ರಿ ಸೊಸೈಟಿಯ ಅಧ್ಯಕ್ಷ ಡಾ. ಪಿ.ಕೆ. ಕಿರಣ್ ಕುಮಾರ್, ಎಸೈ ಹರೀಶ್ ಪದವಿನಂಗಡಿ, ಉದ್ಯಮಿ ಅನಿಲ್ ಕುಮಾರ್ ಭಾಗವಹಿಸಲಿದ್ದಾರೆ. ರಾತ್ರಿ 8.30ರಿಂದ ಮಂಜೇಶ್ವರ ಶಾರದಾ ಆರ್ಟ್ಸ್ ಕಲಾವಿದರಿಂದ ‘ಕಥೆ ಎಡ್ಡೆಂಡು’ ನಾಟಕ ಪ್ರದರ್ಶನಗೊಳ್ಳಲಿದೆ ಎಂದು ಕ್ಲಬ್ ಅಧ್ಯಕ್ಷ ನಿತಿನ್ ಶೆಟ್ಟಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.