

ವಿಜಯವಾಣಿ ಸುದ್ದಿಜಾಲ ಕಲಬುರಗಿ
ಸೌಜನ್ಯ ಅತ್ಯಾಚಾರ ಮತ್ತು ಕೊಲೆ ಪ್ರಕರಣದ ಪ್ರಮುಖ ಆರೋಪಿಗಳ ವಿರುದ್ಧ ಕಠಿಣ ಕ್ರಮಕ್ಕೆ ಒತ್ತಾಯಿಸಿ ಕರ್ನಾಟಕ ರಾಷ್ಟ ಸಮಿತಿ ಪಕ್ಷ ರಾಜ್ಯಾದ್ಯಕ್ಷರಾದ ರವಿ ಕೃಷ್ಣಾರೆಡ್ಡಿ ನೇತೃತ್ವದಲ್ಲಿ ಆಗಸ್ಟ್ ೨೬ ರಿಂದ ಬೆಳ್ತಂಗಡಿಯಿAದ ಬೆಂಗಳೂರುವರೆಗೆ ಪಾದಯಾತ್ರೆ ಹಮ್ಮಿಕೊಳ್ಳಲಾಗಿದೆ ಎಂದು ಸಮಿತಿ ಜಿ¯್ಲÁಧ್ಯP್ಷÀ ವಿಜಯ ಜಾಧವ್ ಹೇಳಿದರು.
ನಗರದ ಪತ್ರಿಕಾ ಭವನದಲ್ಲಿ ಶುಕ್ರವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಜಾಧವ್, ಈ ಪಾದಯಾತ್ರೆ ಬೆಳ್ತಂಗಡಿಯಿAದ ಶುರು ಆಗಿ ಧರ್ಮಸ್ಥಳದ ಮಾರ್ಗವಾಗಿ ಬೆಂಗಳೂರಿಗೆ ಸೆಪ್ಟೆಂಬರ್ ೭ರಂದು ತಲುಪಲಿದೆ. ೮ ರಂದು ವಿಧಾನಸೌಧಕ್ಕೆ ತಲುಪಿ ಮುಖ್ಯಮಂತ್ರಿ ಸಿದ್ಧರಾಮಯ್ಯನವರಿಗೆ ಮನವಿ ಸಲ್ಲಿಸಲಾಗುವುದು ಎಂದರು.