

ಮಡಿಕೇರಿ:
ಭತ್ತದ ಬೀಜದಿಂದ ಬರುವ ಬೆಂಕಿ ರೋಗ, ಊದುಬತ್ತಿ ರೋಗ, ಕಂದು ಎಲೆಚುಕ್ಕಿ ರೋಗ ಮತ್ತು ಹುಸಿಕಾಡಿಗೆ ರೋಗಾಣುಗಳು ಮಣ್ಣು, ನೀರು, ಗಾಳಿ, ಬಿತ್ತನೆ ಬೀಜ ಮತ್ತು ಇತರೆ ಮಾಧ್ಯಮಗಳಿಂದ ಬೀಜದ ಮುಖಾಂತರ ಪ್ರಸಾರಗೂಂಡು ರೈತರಿಗೆ ಅಪಾರ ರ‍್ಥಿಕ ಹಾನಿಯನ್ನು ಉಂಟುಮಾಡುತ್ತವೆ. ಹಾಗಾಗಿ ರೈತರು ಅತಿ ಸರಳ ಮತ್ತು ಕಡಿಮೆ ರ‍್ಚಿನಲ್ಲಿ ಬೀಜದಿಂದ ಪ್ರಸಾರವಾಗುವ ಈ ರೋಗಗಳನ್ನು ಬಿಜೋಪಚಾರ ಮಾಡಿ ಬಿತ್ತನೆ ಮಾಡುವುದರಿಂದ ಬೀಜಗಳಿಗೆ, ಮೊಳಕೆಯೊಡೆಯುವ ಸಸಿಗಳಿಗೆ ಹಾಗೂ ಮುಂದಿನ ಸಸ್ಯ ಬೆಳವಣಿಗೆ ಹಂತದಲ್ಲಿ ಬರುವ ಅನೇಕ ರೋಗಗಳಿಂದ ರಕ್ಷಣೆಯನ್ನು ಒದಗಿಸಬಹುದಾಗಿದೆ ಎಂದು ಗೋಣಿಕೊಪ್ಪಲುವಿನ ಐ.ಸಿ.ಎ.ಆರ್-ಕೃಷಿ ವಿಜ್ಞಾನ ಕೇಂದ್ರದ ತಜ್ಞರು ಸಲಹೆ ನೀಡಿದ್ದಾರೆ.
ಬೀಜದಿಂದ ಪ್ರಸಾರವಾಗುವ ಅನೇಕ ರೋಗಗಳಲ್ಲಿ ಹಾನಿಕಾರಕ ರೋಗಾಣುಗಳಾದ ಶಿಲೀಂದ್ರ, ದುಂಡಾಣು ಮತ್ತು ನಂಜಾಣು ಸೂಕ್ಷ್ಮ ಜೀವಿಗಳು ಬೀಜಗಳ ಹೊರಮೈ ಹಾಗೂ ಒಳಮೈ ಆವರಿಸಿ ಬೀಜಗಳು ಮೊಳಕೆಯೊಡೆಯುವಾಗ, ಸಸಿಗಳು ಬೆಳೆಯುವಾಗ ಜತೆಯಲ್ಲೇ ಇದ್ದು ಬೆಳೆಯ ವಿವಿಧ ಬೆಳವಣಿಗೆಯ ಹಂತದಲ್ಲಿ ರೋಗವು ಉಲ್ಬಣಿಸಿ ಬೆಳೆಯ ಹಾನಿಗೆ ಕಾರಣವಾಗುತ್ತವೆ.
ಹಾಗಾಗಿ ಪ್ರತಿ ಎಕರೆಗೆ ಶಿಫಾರಸ್ಸು ಮಾಡಿದ 25-30 ಕೆ.ಜಿ ಭತ್ತದ ಬೀಜವನ್ನು ತೆಗೆದುಕೊಂಡು 1:4 ಪ್ರಮಾಣದ ಉಪ್ಪಿನ ದ್ರಾವಣದಲ್ಲಿ (4 ಲೀ. ನೀರಿಗೆ 1 ಕೆ.ಜಿ ಉಪ್ಪು) ಅದ್ದಿ ಗಟ್ಟಿ ಮತ್ತು ಜೊಳ್ಳು ಬೀಜಗಳನ್ನು ಬರ‍್ಪಡಿಸಬೇಕು.
ಗಟ್ಟಿಯಾದ ಬೀಜಗಳನ್ನು ಬರ‍್ಪಡಿಸಿದ ನಂತರ 2-3 ಬಾರಿ ತಣ್ಣೀರಿನಲ್ಲಿ ತೊಳೆದು ಸುಮಾರು 24 ಗಂಟೆಗಳ ಕಾಲ ಬಿತ್ತನೆ ಬೀಜವನ್ನು ನೀರಿನಲ್ಲಿ ನೆನೆಸಬೇಕು.
ನೆನೆಸಿದ ಬೀಜಗಳನ್ನು ನೀರಿನಿಂದ ತೆಗೆದು ಎಕರೆಗೆ ಬೇಕಾದ 25-30 ಕೆ.ಜಿ ಬಿತ್ತನೆ ಬೀಜಕ್ಕೆ 100 ರಿಂದ 120 ಗ್ರಾಂ ಕರ‍್ಬೆಂಡೆಜಿಮ್ ಅಥವಾ 50 – 60 ಗ್ರಾಂ ಕರ‍್ಬೆಂಡೆಜಿಮ್ + ಮ್ಯಾಂಕೊಜೆಬ್ ಅಥವಾ 50- 60 ಗ್ರಾಂ ಟ್ರೆöಸೈಕ್ಲಜೋಲ್ ಎಂಬ ಶಿಲೀಂದ್ರನಾಶಕವನ್ನು ಚೆನ್ನಾಗಿ ಮಿಶ್ರಣ ಮಾಡಿ ನೆರಳಿನಲ್ಲಿ ಒಣಗಿಸಬೇಕು.
ಈ ರೀತಿ ಬೀಜೋಪಚಾರ ಮಾಡಿದ ಬಿತ್ತನೆ ಬೀಜವನ್ನು ಒಂದು ಚೀಲದಲ್ಲಿ ಗಟ್ಟಿಯಾಗಿ ಕಟ್ಟಿ ಮೊಳಕೆಯೊಡೆಯಲು ಇಟ್ಟು ನಂತರ ಸಸಿಮಡಿಗೆ ಉಪಯೋಗಿಸಬೇಕು.
ಬೀಜೋಪಚಾರ ಮಾಡುವಾಗ ಶಿಫಾರಸ್ಸು ಮಾಡಿದ ಶಿಲೀಂದ್ರನಾಶಕವನ್ನು ನರ‍್ಧಿಷ್ಟ ಪ್ರಮಾಣದಲ್ಲಿ ಉಪಯೋಗಿಸಿ ಬೀಜೋಪಚಾರ ಮಾಡಬೇಕು.
ಬೀಜೋಪಚಾರ ಮಾಡಿದ ಬಿತ್ತನೆ ಬೀಜಗಳನ್ನು ಸುರಕ್ಷಿತ ಸ್ಥಳದಲ್ಲಿ ಇಡಬೇಕು. ಎರಡು ಮೂರು ಶಿಲೀಂದ್ರನಾಶಕಗಳನ್ನು ಒಟ್ಟಿಗೆ ಮಿಶ್ರಣ ಮಾಡಿ ಬೀಜೋಪಚಾರ ಮಾಡಬಾರದು.
ಬಿತ್ತನೆ ಬೀಜಕ್ಕೆ ಬೀಜೋಪಚಾರ ಮಾಡುವ ಸಂರ‍್ಭದಲ್ಲಿ ಕೈಗಳಿಗೆ ಪ್ಲಾಸ್ಟಿಕ್ ಚೀಲ ಅಥವಾ ಗ್ಲೌಸ್‌ಗಳನ್ನು ಬಳಸಿ ಬೀಜೋಪಚಾರ ಮಾಡಬೇಕು.
ಅಝೋಸ್ಪೆಂರಿಲಂ ಎನ್ನುವ ಏಕಾಣುಗಳು ಭತ್ತದ ಬೆಳೆಯ ಬೇರಿನ ಹೊರವಲಯದಲ್ಲಿ ಜೀವಿಸಿ, ಸಾರಜನಕ ಸ್ಥೀರಿಕರಣ ಮಾಡುತ್ತವೆ. ಅಝೋಸ್ಪೆಂರಿಲಂ ಜೀವಾಣು ಗೊಬ್ಬರ ಬಳಕೆಯಿಂದ ಬೆಳೆಗಳಿಗೆ ನೇರವಾಗಿ ಸಾರಜನಕ ಲಭ್ಯವಾಗುವುದರಿಂದ ಜೊತೆಗೆ ಈ ಏಕಾಣುಗಳು ಹರ‍್ಮೋನುಗಳನ್ನು ಉತ್ಪನ್ನಮಾಡಿ ಸಸ್ಯಗಳ ಬೆಳವಣಿಗೆಯನ್ನು ಹೆಚ್ಚಿಸುತ್ತವೆ.
50 ಗ್ರಾಂ ಬೆಲ್ಲ ಅಥವಾ ಸಕ್ಕರೆಯನ್ನು ರ‍್ಧ ಲೀಟರ್ ನೀರಿನಲ್ಲಿ ಕರಗಿಸಿ 5 ನಿಮಿಷಗಳ ಕಾಲ ಕುದಿಸಿ ಅಂಟು ದ್ರಾವಣವನ್ನು ತಯಾರಿಸಬೇಕು.
ತಣ್ಣಗಾದ ಬೆಲ್ಲ ಅಥವಾ ಸಕ್ಕರೆ ದ್ರಾವಣವನ್ನು 25 ಕೆ.ಜಿ ಬೀತ್ತನೆ ಬೀಜದ ಮೇಲೆ ಸಮನಾಗಿ ಲೇಪಿಸಿ ನಂತರ 400 ಗ್ರಾಂ ಅಝೋಸ್ಪೆಂರಿಲಂ ಜೈವಿಕ ಗೊಬ್ಬರದಿಂದ ಮಿಶ್ರಣ ಮಾಡಿ, ರ‍್ಧಗಂಟೆ ನೆರಳಿನಲ್ಲಿ ಒಣಗಿಸಿ ಸಸಿಮಡಿಗೆ ಉಪಯೋಗಿಸಬೇಕು.
800 ಗ್ರಾಂ ಅಝೋಸ್ಪೆಂರಿಲಂ ಜೈವಿಕ ಗೊಬ್ಬರವನ್ನು ಪುಡಿಮಾಡಿದ 10 ಕೆ.ಜಿ. ಕೊಟ್ಟಿಗೆ ಗೊಬ್ಬರ ಮತ್ತು 10 ಕೆ.ಜಿ. ಮಣ್ಣಿನೊಡೆನೆ ಮಿಶ್ರಣಗೊಳಿಸಿ ಗದ್ದೆಗೆ ನಾಟಿ ಮಾಡುವ ಸಮಯದಲ್ಲಿ ಎರಚಬೇಕು.
6 ಅಡಿ ಉದ್ದ ಮತ್ತು ಅಗಲದ ಹೊಂಡವನ್ನು ಮಾಡಿ ಇದರಲ್ಲಿ ಮುಕ್ಕಾಲು ಅಡಿ ನೀರು ನಿಲ್ಲಿಸಿ ಅದರಲ್ಲಿ 400 ಗ್ರಾಂ ಅಝೋಸ್ಪೆಂರಿಲಂ ಜೈವಿಕ ಗೊಬ್ಬರವನ್ನು ಮಿಶ್ರಣಮಾಡಿ ಸಸಿ ಮಡಿಯಿಂದ ಕಿತ್ತ ಸಸಿಗಳ ಬೇರುಗಳನ್ನು 10 ರಿಂದ 15 ನಿಮಿಷಗಳ ಕಾಲ ಅದ್ದಿ ನಂತರ ನಾಟಿ ಮಾಡಬೇಕು.
ಈ ರೀತಿಯಾಗಿ ರೈತರು ಶಿಫಾರಸ್ಸು ಮಾಡಿದ ಶಿಲೀಂದ್ರನಾಶಕವನ್ನು ನರ‍್ಧಿಷ್ಟ ಪ್ರಮಾಣದಲ್ಲಿ ಉಪಯೋಗಿಸಿ ಬೀಜೋಪಚಾರ ಮಾಡುವುದರಿಂದ ಬೀಜಗಳಿಂದ ಪ್ರಸಾರವಾಗುವ ಅನೇಕ ರೋಗಗಳನ್ನು ಅತಿ ಸುಲಭವಾಗಿ ಹಾಗೂ ಕಡಿಮೆ ರ‍್ಚಿನಲ್ಲಿ ಹತೋಟಿ ಮಾಡಬಹುದಲ್ಲದೆ, ರೋಗರಹಿತ ಬೆಳೆಯಿಂದ ಅಧಿಕ ಇಳುವರಿಯನ್ನು ಪಡೆಯಬಹುದು ಎಂದು ತಜ್ಞರು ಮಾಹಿತಿ ನೀಡಿದ್ದಾರೆ.
ಹೆಚ್ಚಿನ ಮಾಹಿತಿಗಾಗಿ ಗೋಣಿಕೊಪ್ಪಲು ಐ.ಸಿ.ಎ.ಆರ್-ಕೃಷಿ ವಿಜ್ಞಾನ ಕೇಂದ್ರ ಸಂರ‍್ಕಿಸಬಹುದಾಗಿದೆ.