ಭತ್ತ, ರಾಗಿ ಖರೀದಿಗೆ ಷರತ್ತು ಸಡಿಲಿಸಲಿ

paddy
Published on

ಮಡಿಕೇರಿ:

ಕೊಡಗಿನಲ್ಲೂ ಬೆಂಬಲ ಬೆಲೆ ಯೋಜನೆಯಡಿ ಭತ್ತ ಮತ್ತು ರಾಗಿ ಖರೀದಿ ಪ್ರಕ್ರಿಯೆ ಶುರುವಾಗಿದೆ. ಈ ಸಂಬAಧ ಈಗಾಗಲೇ ರೈತರ ನೋಂದಣಿ ಕಾರ್ಯ ನಡೆಯುತ್ತಿದೆ. ಆಹಾರ, ನಾಗರಿಕ ಸರಬರಾಜು ನಿಗಮ ನಿಯಮಿತದವರನ್ನು ಖರೀದಿ ಏಜೆನ್ಸಿಯನ್ನಾಗಿ ಸರ್ಕಾರ ನೇಮಕ ಮಾಡಿದೆ. ಜಿಲ್ಲೆಯಲ್ಲಿ ಮಡಿಕೇರಿ ಎಪಿಎಂಸಿ ಆವರಣ, ಕುಶಾಲನಗರ ಎಪಿಎಂಸಿ ಆವರಣ, ಗೋಣಿಕೊಪ್ಪಲು ಎಪಿಎಂಸಿ ಆವರಣ, ಸೋಮವಾರಪೇಟೆ ಎಪಿಎಂಸಿ ಮಾರ್ಕೆಟ್ ಆವರಣ ಹಾಗೂ ವಿರಾಜಪೇಟೆ ಪಟ್ಟಣದ ತಾಲೂಕು ಕೃಷಿ ಇಲಾಖೆ ಕಚೇರಿಯಲ್ಲಿ ಖರೀದಿ ಕೇಂದ್ರ ತೆರೆಯಲಾಗಿದೆ.

ಖರೀದಿ ಕೇಂದ್ರಗಳಲ್ಲಿ ರೈತರಿಂದ ಖರೀದಿ ಮಾಡಿದ ಭತ್ತ ಹಾಗೂ ರಾಗಿ ಮೊತ್ತವನ್ನು ನೇರವಾಗಿ ರೈತರ ಬ್ಯಾಂಕ್ ಖಾತೆಗೆ ಜಮೆ ಮಾಡಲಾಗುತ್ತದೆ. ನೋಂದಣಿ ಕೇಂದ್ರದಲ್ಲಿ ರೈತರು ಫ್ರೂಟ್ ಐಡಿ, ಆಧಾರ್ ಸಂಖ್ಯೆಗೆ ಜೋಡಣೆಯಾದ ತಮ್ಮ ಬ್ಯಾಂಕ್ ಖಾತೆಯ ವಿವರಗಳನ್ನು ಕೊಡಬೇಕು. ಸಾಮಾನ್ಯ ಭತ್ತ ಪ್ರತಿ ಕ್ವಿಂಟಾಲ್‌ಗೆ 2,369 ರೂ. ನಿಗದಿಪಡಿಸಲಾಗಿದ್ದು, ರಾಗಿ ಪ್ರತಿ ಕ್ವಿಂಟಲ್‌ಗೆ 4,886 ರೂ. ನಿಗದಿ ಮಾಡಲಾಗಿದೆ.

ಬೆಂಬಲ ಬೆಲೆಯಲ್ಲಿ ಭತ್ತ ಖರೀದಿಸುವ ಸರ್ಕಾರದ ನಿರ್ಧಾರವನ್ನು ರೈತರು ಸ್ವಾಗತಿಸಿದ್ದಾರೆ. ಆದರೆ ಈ ಸಂಬAಧ ಇರುವ ಷರತ್ತುಗಳ ಬಗ್ಗೆ ಅಸಮಾಧಾನ ಇದೆ. ಷರತ್ತುಗಳನ್ನು ಸಡಿಲಿಸುವ ಮೂಲಕ ರೈತರಿಗೆ ಅನುಕೂಲ ಮಾಡಿಕೊಡಬೇಕು ಎನ್ನುವ ಒತ್ತಾಯ ಕೇಳಿಬಂದಿದೆ. ನೋಂದಣಿಗೆ ಸಮಯಾವಕಾಶ ನಿಗದಿ, ಫ್ರೂಟ್ಸ್ ತಂತ್ರಾAಶದಲ್ಲಿ ಕಡ್ಡಾಯ ನೋಂದಣಿ, ಭತ್ತದಲ್ಲಿನ ತೇವಾಂಶ ಮಿತಿ, ಖರೀದಿಗೆ ಗರಿಷ್ಠ ಮಿತಿ ಮತ್ತಿತರ ಷರತ್ತುಗಳು ರೈತರನ್ನು ಬೆಂಬಲ ಬೆಲೆಯಲ್ಲಿ ಭತ್ತ, ರಾಗಿ ಖರೀದಿ ಕೇಂದ್ರದಿAದ ದೂರ ಇಡುವಂತೆ ಮಾಡುತ್ತಿದೆ ಎನ್ನುವ ಅಭಿಪ್ರಾಯಗಳೂ ವ್ಯಕ್ತವಾಗುತ್ತಿದೆ. ಈ ಎಲ್ಲಾ ವಿಷಯಗಳ ಬಗ್ಗೆ ವಿಜಯವಾಣಿ ಓದುಗರು ಲೌಡ್ ಸ್ಪೀಕರ್‌ನಲ್ಲಿ ಅಭಿಪ್ರಾಯ ಹಂಚಿಕೊAಡಿದ್ದಾರೆ.

ಭತ್ತ ಮತ್ತು ರಾಗಿಯನ್ನು ಬೆಂಬಲ ಬೆಲೆಯಲ್ಲಿ ಖರೀದಿಸಲು ಖರೀದಿ ಕೇಂದ್ರವನ್ನು ಪ್ರತಿವರ್ಷ ಆರಂಭಿಸುತ್ತಾರೆ. ಆದರೆ ಸರ್ಕಾರದ ನಿಯಮಗಳಂತೆ ರೈತರು ಭತ್ತವನ್ನು ರೈತ ಕೇಂದ್ರಕ್ಕೆ ಕೊಡಲು ಸಾಧ್ಯವಾಗುತ್ತಿಲ್ಲ. ಸಾಗಾಟ ವೆಚ್ಚ ಜಾಸ್ತಿಯಾಗುತ್ತಿದೆ. ಅಕಾಲಿಕ ಮಳೆಯಿಂದ ಭತ್ತದಲ್ಲಿ ತೇವಾಂಶವನ್ನು ಕಾಪಾಡಿಕೊಳ್ಳುವುದು ಕಷ್ಟವಾಗಿದೆ. ರೈತರಿಗೆ ತೃಪ್ತಿಕರವಾದ ಬೆಲೆಯೂ ಸಿಗುತ್ತಿಲ್ಲ.

ಎ.ಆರ್. ಕುಶಾಲಪ್ಪ, ಭತ್ತ ಕೃಷಿಕ, ಯಡೂರು ಗ್ರಾಮ.

ಅಕಾಲಿಕ ಮಳೆ, ಹವಾಮಾನ ವೈಪರಿತ್ಯ, ಕಾಡುಪ್ರಾಣಿಗಳ ಹಾವಳಿ, ಕಾರ್ಮಿಕರ ಸಮಸ್ಯೆಯಿಂದ ಜಿಲ್ಲೆಯಲ್ಲಿ ಭತ್ತ ಕೃಷಿಗೆ ಹಿನ್ನಡೆಯಾಗಿದೆ. ಭತ್ತ ಬೆಳೆಯುವವರು ಗಣನೀಯವಾಗಿ ಕಡಿಮೆಯಾಗಿದ್ದಾರೆ. ಗ್ರಾಮಗಳಿಗೆ ಬಂದು ಬೆಂಬಲ ಬೆಲೆ ನೀಡಿ ಭತ್ತವನ್ನು ಖರೀದಿ ಮಾಡಬೇಕಿದೆ. ಭತ್ತ ಕೃಷಿಕರಿಗೆ ಸರ್ಕಾರ ಸಹಾಯದನ ನೀಡಿ, ಬೆಂಬಲ ಬೆಲೆಯಲ್ಲಿ ಖರೀದಿ ಮಾಡಬೇಕು. ತಪ್ಪಿದಲ್ಲಿ ಕೊಡಗಿನ ಕಿತ್ತಳೆ ಪರಿಸ್ಥಿತಿ ಭತ್ತಕ್ಕೂ ಬರಲಿದೆ.

ಜಯಂತಿ, ರೈತ ಮಹಿಳೆ, ಸೂರ್ಲಬ್ಬಿ ಗ್ರಾಮ

ಭತ್ತದ ಬೆಳೆ ಬೆಳೆಯುವವರ ಸಂಖ್ಯೆ ಕಡಿಮೆ ಆಗುತ್ತಿದೆ. ಸರಿಯಾದ ಬೆಲೆ ಇಲ್ಲದಿರುವುದೂ ಇದಕ್ಕೆ ಒಂದು ಕಾರಣ. ಸರ್ಕಾರ ಬೆಂಬಲ ಬೆಲೆ ನೀಡಿ ಖರೀದಿಸಲು ಮುಂದಾಗಿರುವುದು ಸಂತಸದ ಸಂಗತಿ. ಆದರೆ ಹೆಚ್ಚಿನ ಷರತ್ತುಗಳನ್ನು ವಿಧಿಸದೆ ರೈತರ ಭತ್ತವನ್ನು ಉತ್ತಮ ಬೆಂಬಲ ಬೆಲೆ ನೀಡಿ ಖರೀದಿಸಿದರೆ ಒಳ್ಳೆಯದು. ಇದರಿಂದ ಇನ್ನಷ್ಟು ರೈತರಿಗೆ ಪ್ರೋತ್ಸಾಹ ನೀಡಿದಂತೆ ಆಗುತ್ತದೆ.

ಬಿ.ಪಿ. ರವಿಶಂಕರ್, ಭತ್ತದ ತಳಿ ಸಂರಕ್ಷಕ, ಹುದೂರು

ಭತ್ತ ಮತ್ತು ರಾಗಿ ಬೆಳೆಗೆ ಸರ್ಕಾರ ಬೆಂಬಲ ಬೆಲೆಯೊಂದಿಗೆ ಖರೀದಿ ಕೇಂದ್ರಗಳನ್ನು ಸ್ಥಾಪಿಸಿರುವುದು ಉತ್ತಮ ಯೋಜನೆ. ಭತ್ತ ಪ್ರತಿ ಕಿಂಟಾಲ್ ಗೆ 2,300 ರೂ. ಮತ್ತು ರಾಗಿಗೆ ರೂ 4,290 ನಿಗದಿಪಡಿಸಿದ್ದು ಜಿಲ್ಲೆಯಲ್ಲಿ 5 ಕಡೆ ಖರೀದಿ ಕೇಂದ್ರಗಳನ್ನು ಆರಂಭಿಸಿದೆ. ಆದರೆ ಹೆಚ್ಚಿನ ರೈತರಿಗೆ ಈ ಬಗ್ಗೆ ಮಾಹಿತಿ ಇಲ್ಲ. ಪ್ರೂಟ್ಸ್ ತಂತ್ರಾAಶದಲ್ಲಿ ನೋಂದಣಿ ಆದವರು ಮಾತ್ರ ಮಾರಾಟ ಮಾಡುವ ನಿಯಮ ಸ್ವಲ್ಪ ಮಟ್ಟಿಗೆ ಸಡಿಲಿಕೆ ಮಾಡಿದರೆ ಒಳಿತು.

ಓಶಿನ್ ಬೋಪಯ್ಯ, ವಿರಾಜಪೇಟೆ

ಸರ್ಕಾರದ ಬೆಂಬಲ ಬೆಲೆಯಡಿ ಜಿಲ್ಲೆಯಲ್ಲಿ ಭತ್ತ ಹಾಗೂ ರಾಗಿಯನ್ನು ಖರೀದಿ ಮಾಡಲಾಗುತ್ತಿದ್ದು, ರೈತರ ಹೆಸರು ನೋಂದಣಿ ಕಾರ್ಯ ಈಗಾಗಲೇ ಆರಂಭವಾಗಿದೆ. ಭತ್ತ ಮತ್ತು ರಾಗಿಯನ್ನು ಬೆಂಬಲ ಬೆಲೆಯಡಿ ಖರೀದಿಸಲಾಗುತ್ತಿದ್ದು, ಆಹಾರ, ನಾಗರಿಕ ಸರಬರಾಜು ನಿಗಮ ನಿಯಮಿತರದವರನ್ನು ಖರೀದಿ ಏಜೆನ್ಸಿಯನ್ನಾಗಿ ಸರ್ಕಾರ ನೇಮಕ ಮಾಡಿದೆ. ಜಿಲ್ಲೆಯಾದ್ಯಂತ 5 ಕಡೆಗಳಲ್ಲಿ ಖರೀದಿ ಕೇಂದ್ರ ತೆರೆಯಲಾಗಿದೆ. ಖರೀದಿ ಕೇಂದ್ರಗಳಲ್ಲಿ ರೈತರಿಂದ ಖರೀದಿ ಮಾಡಿದ ಭತ್ತದ ಹಾಗೂ ರಾಗಿ ಮೊತ್ತವನ್ನು ನೇರವಾಗಿ ರೈತರ ಬ್ಯಾಂಕ್ ಖಾತೆಗೆ ಜಮೆ ಮಾಡಲಾಗುತ್ತದೆ. ನೋಂದಣಿ ಕೇಂದ್ರದಲ್ಲಿ ರೈತರು ಫ್ರೂಟ್ ಐಡಿ, ಆಧಾರ್ ಸಂಖ್ಯೆಗೆ ಜೋಡಣೆಯಾದ ತಮ್ಮ ಬ್ಯಾಂಕ್ ಖಾತೆ ವಿವರ ನೀಡಬೇಕು.

ವೆಂಕಟ್ ರಾಜಾ, ಕೊಡಗು ಜಿಲ್ಲಾಧಿಕಾರಿ

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net