

ಸಿರವಾರ: ಭತ್ತ ಕಟಾವಿಗೆ ಬಂದಿದ್ದು ಸರ್ಕಾರ ಕೂಡಲೇ ಭತ್ತ ಖರೀದಿ ಕೇಂದ್ರ ಆರಂಭಿಸಬೇಕು ಎಂದು ಒತ್ತಾಯಿಸಿ ಕರ್ನಾಟಕ ರಕ್ಷಣ ವೇದಿಕೆಯಿಂದ ತಹಸೀಲ್ದಾರ್ ರವಿ ಎಸ್.ಅಂಗಡಿ ಅವರಿಗೆ ಮಂಗಳವಾರ ಮನವಿ ಸಲ್ಲಿಸಲಾಯಿತು.
ಭತ್ತ ಕಟಾವು ಮಾಡಿದ ನಂತರ ಭತ್ತ ಖರೀದಿ ಕೇಂದ್ರ ಆರಂಭಿಸಿದರೆ ಅದರ ಲಾಭ ದಲ್ಲಾಳಿಗಳಿಗೆ ಆಗುತ್ತದೆಯೇ ವಿನಹಃ ರೈತರಿಗೆ ಪ್ರಯೋಜನವಾಗುವುದಿಲ್ಲ. ರಾಜ್ಯ ಸರ್ಕಾರ ಕೂಡಲೇ ಭತ್ತ ಖರೀದಿ ಕೇಂದ್ರಗಳನ್ನು ಆರಂಭಿಸಬೇಕು ಎಂದು ಮುಖ್ಯಮಂತ್ರಿಯವರಿಗೆ ಬರೆದ ಮನವಿ ಪತ್ರವನ್ನು ತಹಸೀಲ್ದಾರ್ ರವಿ ಎಸ್. ಅಂಗಡಿ ಅವರಿಗೆ ಕರ್ನಾಟಕ ರಕ್ಷಣಾ ವೇದಿಕೆ (ಪ್ರವೀಣ ಶೆಟ್ಟಿ) ಬಣದಿಂದ ಮನವಿ ಸಲ್ಲಿಸಲಾಯಿತು.
ತಾಲೂಕು ಘಟಕದ ಪದಾಧಿಕಾರಿಗಳಾದ ಯಲ್ಲಪ್ಪ ದೊರೆ ಮಾಡಗಿರಿ, ಅಮರೇಗೌಡ, ಲಿಂಗಣ್ಣ ಸೈದಾಪುರ, ಆಂಜನೇಯ, ಅಡಿವೆಪ್ಪ, ಅಜ್ಮೀರ್ ಇತರರಿದ್ದರು.