ಭತ್ತ ಹಾನಿಗೆ ರಾಜ್ಯ ಸರ್ಕಾರದಿಂದ ಸೂಕ್ತ ಪರಿಹಾರ: ಡಿಸಿಎಂ ಲಕ್ಷ್ಮಣ ಸವದಿ ಭರವಸೆ

270420 Jalapura Camp Visit DCM Laxman Savadi
Published on

ಸಿರವಾರ: ತಾಲೂಕಿನಲ್ಲಿ ಗಾಳಿ ಮಳೆಗೆ ಹೆಚ್ಚಿನ ಪ್ರಮಾಣದಲ್ಲಿ ಭತ್ತದ ಬೆಳೆ ನಷ್ಟವಾಗಿದ್ದು, ಅಧಿಕಾರಿಗಳು ನೀಡುವ ವರದಿಯಂತೆ ಸರ್ಕಾರದಿಂದ ಸೂಕ್ತ ಪರಿಹಾರ ನೀಡಲಾಗುವುದು ಎಂದು ಉಪ ಮುಖ್ಯಮಂತ್ರಿ ಲಕ್ಷ್ಮಣ ಸವದಿ ಭರವಸೆ ನೀಡಿದರು.

ತಾಲೂಕಿನ ಜಾಲಾಪುರ ಕ್ಯಾಂಪ್‌ನಲ್ಲಿ ಮಳೆ, ಗಾಳಿಗೆ ನೆಲಕ್ಕಚ್ಚಿದ ಭತ್ತದ ಗದ್ದೆ ವೀಕ್ಷಿಸಿ ನಂತರ ಸುದ್ದಿಗಾರರೊಂದಿಗೆ ಮಾತನಾಡಿದರು. ರಾಯಚೂರು ಜಿಲ್ಲೆಯಲ್ಲಿ ನಷ್ಟವಾದ ಬೆಳೆ ಪ್ರಮಾಣದ ವರದಿ ಪಡೆದು ಸಿಎಂ ಜತೆ ಚರ್ಚಿಸಿ ರೈತರಿಗೆ ಪರಿಹಾರ ಕೊಡಿಸಲಾಗವುದು. ಹೆಚ್ಚಿನ ಕರೊನಾ ಕೇಸ್ ಪತ್ತೆಯಾದ ಜಿಲ್ಲೆಗಳಲ್ಲಿ ಪರೀಕ್ಷಾ ಕೇಂದ್ರಗಳನ್ನು ತೆರೆಯಲಾಗಿದೆ. ಎರಡನೇ ಹಂತದಲ್ಲಿ ರಾಯಚೂರು ಜಿಲ್ಲೆಯಲ್ಲಿ ಪ್ರಾರಂಭ ಮಾಡಲು ಸಿದ್ಧತೆ ಮಾಡಿಕೊಳ್ಳಲಾಗಿದೆ ಎಂದರು.

ಈಗಾಗಲೇ ಕೆಎಸ್‌ಆರ್‌ಟಿಸಿ ನಷ್ಟದಲ್ಲಿದ್ದು, ಕರೊನಾ ಪರಿಣಾಮ ಸುಮಾರು 1 ಸಾವಿರಕ್ಕೂ ಹೆಚ್ಚು ಕೋಟಿ ರೂ. ನಷ್ಟವಾಗಿದೆ. ನೌಕರರಿಗೆ ವೇತನ ನೀಡುವುದಕ್ಕಾಗಿ ಸರ್ಕಾರಕ್ಕೆ 346 ಕೋಟಿ ರೂ. ಪ್ರಸ್ಥಾವನೆ ಸಲ್ಲಿಸಲಾಗಿದೆ. 140 ಕೋಟಿ ರೂ. ನೀಡುವುದಾಗಿ ಭರವಸೆ ನೀಡಲಾಗಿದೆ ಎಂದರು.

ಸಂಸದ ರಾಜಾ ಅಮರೇಶ್ವರ ನಾಯಕ, ಶಾಸಕರಾದ ರಾಜಾ ವೆಂಕಟಪ್ಪ ನಾಯಕ, ಕೆ.ಶಿವನಗೌಡ, ಡಾ.ಶಿವರಾಜ ಪಾಟೀಲ್, ಮಾಜಿ ಶಾಸಕ ಗಂಗಾಧರ ನಾಯಕ, ಬಸವಗೌಡ ಬ್ಯಾಗವಾಟ್, ಮುಖಂಡರದ ಜೆ.ಶರಣಪ್ಪಗೌಡ, ಜಿ.ಲೋಕರೆಡ್ಡಿ, ಜೆ.ದೇವರಾಜಗೌಡ, ಜಿಲ್ಲಾಧಿಕಾರಿ ವೆಂಕಟೇಶ, ಸಿರವಾರ ತಹಸೀಲ್ದಾರ್ ಕೆ.ಶ್ರುತಿ ಸೇರಿ ವಿವಿಧ ಇಲಾಖೆ ಅಧಿಕಾರಿಗಳು ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net