ಕಾಡಾನೆಗಳಿಂದ ಭತ್ತದ ಗದ್ದೆ ನಾಶ

11 mlv 1
Published on


ಮಳವಳ್ಳಿ: ತಾಲೂಕಿನ ದಬ್ಬಳ್ಳಿ ಗ್ರಾಮದ ಭತ್ತದ ಗದ್ದೆಗೆ ಭಾನುವಾರ ರಾತ್ರಿ ಕಾಡಾನೆಗಳು ದಾಳಿ ಮಾಡಿ ಹಾನಿಗೊಳಿಸಿವೆ. ಗ್ರಾಮದ ಶಿವರಾಜು ಎಂಬುವವರ 20 ಗುಂಟೆ ಜಮೀನಿನಲ್ಲಿ ಬೆಳೆದಿದ್ದ ಭತ್ತ ನಾಶವಾಗಿದೆ. ಸ್ಥಳಕ್ಕೆ ಅರಣ್ಯ ಇಲಾಖೆ ಸಿಬ್ಬಂದಿ ಭೇಟಿ ನೀಡಿ ಪರಿಶೀಲನೆ ನಡೆಸಿ ರೈತನಿಗೆ ಸೂಕ್ತ ಪರಿಹಾರ ನೀಡುವ ಭರವಸೆ ನೀಡಿದ್ದಾರೆ. ಕಳೆದ ವಾರವೂ ಇದೇ ಗ್ರಾಮದಲ್ಲಿ ಕಾಡಾನೆಗಳು ಭತ್ತದ ಗದ್ದೆಗೆ ದಾಳಿ ಮಾಡಿದ್ದವು. ಅರಣ್ಯ ಇಲಾಖೆ ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ಗ್ರಾಮಸ್ಥರು ಆಗ್ರಹಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net