ಭತ್ತದ ಗದ್ದೆಗೆ ನುಗ್ಗಿದ ನೀರು

22-july-hdl--02
ಮಳೆಯಿಂದಾಗಿ ಹೂವಿನಹಡಗಲಿ ತಾಲೂಕಿನ ಬ್ಯಾಲಹುಣಸಿ ಗ್ರಾಮದಲ್ಲಿ ಭತ್ತದ ಗದ್ದೆಗೆ ನೀರು ನುಗ್ಗಿರುವುದು.
Published on

ಹೂವಿನಹಡಗಲಿ: ತಾಲೂಕಿನಲ್ಲಿ ಕಳೆದ ಒಂದು ವಾರದಿಂದ ನಿರಂತರವಾಗಿ ಸುರಿಯುತ್ತಿರುವ ಮಳೆಯಿಂದಾಗಿ ಬ್ಯಾಲಹುಣಸಿ ಗ್ರಾಮದ ನೂರಾರು ಎಕರೆ ಭತ್ತದ ಗದ್ದೆಗೆ ನೀರು ನುಗ್ಗಿದೆ.

ಪ್ರತಿವರ್ಷ ಮಳೆಗಾಲದಲ್ಲಿ ನದಿ ನೀರು ಹಾಗೂ ಮಳೆಯ ನೀರು ಗದ್ದೆಗಳಿಗೆ ನುಗ್ಗುವುದರಿಂದ ಬೆಳೆ ಕೈಗೆ ಸೇರುತ್ತಿಲ್ಲ. ನಿರಂತರ ಮಳೆಯಿಂದಾಗಿ ಜನ ಜೀವನ ಅಸ್ತವ್ಯಸ್ತಗೊಂಡಿದೆ. ವಿದ್ಯಾರ್ಥಿಗಳು ಶಾಲೆ, ಕಾಲೇಜುಗಳಿಗೆ ತೆರಳಲು ಪರದಾಡುವಂತಾಗಿದೆ. ಮಂಗಳವಾರ ತಾಲೂಕಿನಲ್ಲಿ 13 ಮಿ.ಮೀ ಮಳೆಯಾಗಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net