ಭತ್ತ-ರಾಗಿ ನೋಂದಣಿ ಕೇಂದ್ರ ಆರಂಭ

mysore
Published on

ಮೈಸೂರು: ಬೆಂಬಲ ಬೆಲೆ ಯೋಜನೆಯಡಿ ಜಿಲ್ಲೆಯಲ್ಲಿ ಭತ್ತ ಮತ್ತು ರಾಗಿ ನೋಂದಣಿ ಕೇಂದ್ರ ತೆರೆಯಲಾಗಿದೆ ಎಂದು ಜಿಲ್ಲಾಧಿಕಾ ಡಾ.ಕೆ.ವಿ.ರಾಜೇಂದ್ರ ತಿಳಿಸಿದರು.


ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ಜಿಲ್ಲಾ ಮಟ್ಟದ ಟಾಸ್ಕ್‌ಫೋರ್ಸ್ ಸಮಿತಿಯ ಸಭೆಯಲ್ಲಿ ಮಾತನಾಡಿ, ಈಗಾಗಲೇ ನೋಂದಣಿ ಆಗಿರುವ ರೈತರಿಂದ ಭತ್ತ ಮತ್ತು ರಾಗಿಯನ್ನು ಖರೀದಿಸಲು ಸಕಲ ಸಿದ್ಧತೆ ಮಾಡಿಕೊಳ್ಳಬೇಕು. ಜತೆಗೆ, ಖರೀದಿ ಹಂತದಲ್ಲಿ ಕೇಂದ್ರ ಸರ್ಕಾರದಿಂದ ನಿಗದಿಪಡಿಸಿದ ಮಾನದಂಡಗಳನ್ವಯ ಎಫ್‌ಎಕ್ಯೂ ಗುಣಮಟ್ಟವನ್ನು ದೃಢೀಕರಿಸಲು ಕ್ರಮ ವಹಿಸುವಂತೆ ಖರೀದಿ ಏಜೆನ್ಸಿಯಾಗಿರುವ ರಾಜ್ಯ ಕೃಷಿ ಮಾರಾಟ ಮಂಡಳಿಯ ಅಧಿಕಾರಿಗಳಿಗೆ ಸೂಚಿಸಿದರು.


ಪ್ರತಿ ಖರೀದಿ ಕೇಂದ್ರಕ್ಕೆ ಕೃಷಿ ಇಲಾಖೆಯ ವತಿಯಿಂದ ಗ್ರೇಡ್‌ಗಳನ್ನು ನೇಮಿಸಬೇಕು. ಖರೀದಿ ದಿನಾಂಕ ಕುರಿತು ರೈತರಿಗೆ ಜಾಗೃತಿ ಮೂಡಿಸಲು ಅಗತ್ಯ ಕ್ರಮ ವಹಿಸಬೇಕು ಎಂದು ಅಧಿಕಾರಿಗಳಿಗೆ ಸೂಚಿಸಿದರು.


ಆಹಾರ ಮತ್ತು ನಾಗರಿಕ ಸರಬರಾಜು, ಗ್ರಾಹಕರ ವ್ಯವಹಾರಗಳ ಇಲಾಖೆಯ ಜಂಟಿ ನಿರ್ದೇಶಕಿ ಕುಮುದಾ ಶರತ್, ರಾಜ್ಯ ಉಗ್ರಾಣ ನಿಗಮದ ಪ್ರಾದೇಶಿಕ ಆಯುಕ್ತ ರೇಣುಕಾ ಸ್ವಾಮಿ ಹಾಗೂ ಟಾಸ್ಕ್‌ಫೋರ್ಸ್ ಸಮಿತಿಯ ಸದಸ್ಯರು, ಆಹಾರ ಇಲಾಖೆಯ ಅಧಿಕಾರಿಗಳು ಮತ್ತು ಖರೀದಿ ಅಧಿಕಾರಿಗಳು ಉಪಸ್ಥಿತರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net