ಭತ್ತ ಖರೀದಿಸಿ ರೈತರಿಗೆ ಹಣ ಪಾವತಿಸದ ಸರ್ಕಾರ: ರೈತ ಸಂಘದ ಪ್ರ.ಕಾರ್ಯದರ್ಶಿ ಕಾರ್ತಿಕ್ ಆರೋಪ

Ballari Farmers Union Leader J Karthik
ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ಪ್ರ. ಕಾರ್ಯದರ್ಶಿ ಜೆ.ಕಾರ್ತಿಕ್ .
Published on

ಬಳ್ಳಾರಿ: ಸರ್ಕಾರ ಜಿಲ್ಲೆಯಲ್ಲಿ ಖರೀದಿ ಕೇಂದ್ರ ಆರಂಭಿಸಿ ರೈತರಿಂದ ಐದು ಸಾವಿರ ಕ್ವಿಂಟಾಲ್ ಭತ್ತ ಖರೀದಿಸಿದೆ. ಆದರೆ, ಎರಡು ತಿಂಗಳು ಕಳೆದರೂ ರೈತರಿಗೆ ಹಣ ಪಾವತಿಸಿಲ್ಲ ಎಂದು ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ಪ್ರ. ಕಾರ್ಯದರ್ಶಿ ಜೆ.ಕಾರ್ತಿಕ್ ಆರೋಪಿಸಿದರು.

ನಗರದಲ್ಲಿ ಶುಕ್ರವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದರು. ಮಂಡ್ಯ ಜಿಲ್ಲೆಯ ರೈತರಿಗೆ ಈಗಾಗಲೇ ಹಣ ಪಾವತಿಸಲಾಗಿದೆ. ಆದರೆ, ಈ ಭಾಗದ ರೈತರಿಗೆ ಭತ್ತ ಖರೀದಿಸಿದ 10 ಲಕ್ಷ ರೂ. ಪಾವತಿ ಮಾಡಿಲ್ಲ. ಈ ಕುರಿತು ಜಿಲ್ಲೆಯ ಜನಪ್ರತಿನಿಧಿಗಳು ಸರ್ಕಾರದ ಮೇಲೆ ಒತ್ತಡ ಹೇರಬೇಕೆಂದು ಆಗ್ರಹಿಸಿದರು.

ಅಗತ್ಯ ವಸ್ತಗಳ ಬೆಲೆ ಏರಿಕೆಯಾಗಿದ್ದು, ನಿಯಂತ್ರಿಸುವಲ್ಲಿ ಸರ್ಕಾರಗಳು ವಿಫಲವಾಗಿವೆ. ಪ್ರಶ್ನೆ ಮಾಡಬೇಕಾದ ವಿರೋಧ ಪಕ್ಷಗಳ ನಾಯಕರು ಸುಮ್ಮನೆ ಕುಳಿತಿದ್ದಾರೆ. ದೆಹಲಿಯಲ್ಲಿ ಕೃಷಿ ಕಾಯ್ದೆಗಳ ವಿರುದ್ಧ 96 ದಿನಗಳಿಂದ ರೈತರು ಹೋರಾಟ ಮಾಡುತ್ತಿದ್ದು, ಈವರೆಗೆ 245 ಜನ ಮೃತಪಟ್ಟಿದ್ದಾರೆ. ಆದರೆ, ಸಚಿವರು ಪ್ರತಿಭಟನಾ ಸ್ಥಳಕ್ಕೆ ಭೇಟಿ ನೀಡದೆ ರೈತರಿಗೆ ಅವಮಾನ ಮಾಡಿದ್ದಾರೆ ಎಂದು ಆರೋಪಿಸಿದರು. ಇದೇ ವೇಳೆ ರೈತ ಸಂಘದ ಜಿಲ್ಲಾ ಅಧ್ಯಕ್ಷರನ್ನಾಗಿ ಬಿ.ವಿ.ಗೌಡರನ್ನು ನೇಮಿಸಲಾಯಿತು. ಸದಸ್ಯರಾದ ಬಿ.ದೇವರೆಡ್ಡಿ, ರುದ್ರಪ್ಪ, ಶರಣಬಸಪ್ಪ, ಭರತರೆಡ್ಡಿ, ಸುದರ್ಶನ್, ಸುರೇಶ್, ವೀರರೆಡ್ಡಿ, ಮಲ್ಲಿಕಾರ್ಜುನ ರೆಡ್ಡಿ ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net