ಧರ್ಮ ಕಾರ್ಯದಿಂದ ಸುಸಂಸ್ಕೃತ ಸಮಾಜ : ಶಾಸಕಿ ಭಾಗಿರಥಿ ಮುರುಳ್ಯ ಅಭಿಮತ

New Project (1)
Published on

ವಿಜಯವಾಣಿ ಸುದ್ದಿಜಾಲ ಕಡಬ

ಧರ್ಮ ಕಾರ್ಯದ ಮೂಲಕ ಸುಸಂಸ್ಕೃತ ಸಮಾಜ ನಿರ್ಮಾಣವಾಗಲು ಸಾಧ್ಯ ಎಂದು ಶಾಸಕಿ ಭಾಗಿರಥಿ ಮುರುಳ್ಯ ಹೇಳಿದರು.

ಪಾಲ್ತಾಡಿ ಗ್ರಾಮದ ಪಾದೆಬಂಬಿಲ ಶಕ್ತಿನಗರ ಶ್ರೀ ದುರ್ಗಾ ಭಜನಾ ಮಂಡಳಿಯ ರಜತ ಸಂಭ್ರಮ ಅಂಗವಾಗಿ ಧಾರ್ಮಿಕ ಸಭಾ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದರು.

ಉಡುಪಿ ಪಡುಕುತ್ಯಾರು ಆನೆಗುಂದಿ ಸರಸ್ವತೀ ಪೀಠ ಶ್ರೀ ನಾಗ ಧಮೇರ್ಂದ್ರ ವೇದ ಸಂಜೀವಿನಿ ಪಾಠಶಾಲೆಯ ಮೌನೇಶ ಶರ್ಮ ಬಾಳಿಲ ಧಾರ್ಮಿಕ ಉಪನ್ಯಾಸ ನೀಡಿದರು. ಶ್ರೀ ಅನ್ನಪೂರ್ಣಾ ಪಾಕಶಾಲೆಯನ್ನು ಮಾಜಿ ಸಂಸದರು ಉದ್ಘಾಟಿಸಿದರು.

ಸವಣೂರು ಪ್ರಾ.ಕೃ.ಪ.ಸ.ಸಂಘದ ಅಧ್ಯಕ್ಷ ತಾರಾನಾಥ ಕಾಯರ್ಗ, ಸವಣೂರು ಗ್ರಾ.ಪಂ. ಅಧ್ಯಕ್ಷೆ ಸುಂದರಿ ಬಿ.ಎಸ್., ಕಡಬ ತಾಲೂಕು ಕೃಷಿಕ ಸಮಾಜದ ಅಧ್ಯಕ್ಷ ರಾಕೇಶ್ ರೈ ಕೆಡೆಂಜಿ, ಎಪಿಎಂಸಿ ಮಾಜಿ ಅಧ್ಯಕ್ಷ ದಿನೇಶ್ ಮೆದು, ಸವಣೂರು ಗ್ರಾ.ಪಂ. ಮಾಜಿ ಸದಸ್ಯ ಸುಧೀರ್ ಕುವಾರ್ ರೈ ಕುಂಜಾಡಿ, ಕೊಳ್ತಿಗೆ ಪ್ರಾ.ಕೃ.ಪ.ಸ. ಸಂಘದ ಉಪಾಧ್ಯಕ್ಷ ಜನಾರ್ದನ ಗೌಡ ಪಿ., ಸವಣೂರು ಗ್ರಾ.ಪಂ. ಸದಸ್ಯರಾದ ತೀರ್ಥರಾಮ ಕೆಡೆಂಜಿ, ವಿನೋದಾ ರೈ ಚೆನ್ನಾವರ, ಹರಿಕಲಾ ರೈ ಕುಂಜಾಡಿ, ಮಹಿಳಾ ವಿ.ಸೌ.ಸಹಕಾರಿ ಉಪಾಧ್ಯಕ್ಷೆ ಇಂದಿರಾ ಬಿ.ಕೆ., ಶ್ರೀ ದುರ್ಗಾ ಭಜನಾ ಮಂಡಳಿ ಅಧ್ಯಕ್ಷ ಸತೀಶ್ ಅಂಗಡಿಮೂಲೆ ಉಪಸ್ಥಿತರಿದ್ದರು.

ಶನಿವಾರ ಕೇಶವ ಕಲ್ಲೂರಾಯ ಬಂಬಿಲ ನೇತತ್ವದಲ್ಲಿ ಭಗವದ್ಗೀತಾ ಪಾರಾಯಣ, ಬಳಿಕ ಅರ್ಧ ಏಕಾಹ ಭಜನೆ, ಗಣಪತಿಹೋಮ ನಡೆಯಿತು. ಅರ್ಧ ಏಕಾಹ ಭಜನೆಗೆ ಹಿರಿಯರಾದ ಪುಟ್ಟಣ್ಣ ಗೌಡ ಅಂಗಡಿಮೂಲೆ ಚಾಲನೆ ನೀಡಿದರು. ಸಂಜೆ ಸಾರ್ವಜನಿಕ ಶ್ರೀ ಶನೈಶ್ಚರ ಪೂಜೆ, ಭಜನಾ ಮಂಗಳೋತ್ಸವ, ಮಹಾಪೂಜೆ ನಡೆಯಿತು. ಭಜನಾ ಮಂಡಳಿ ಗೌರವಾಧ್ಯಕ್ಷ ಗಿರಿಶಂಕರ ಸುಲಾಯ ಸ್ವಾಗತಿಸಿದರು. ಕಾರ್ಯದರ್ಶಿ ಹೊನ್ನಪ್ಪ ಗೌಡ ಬಿ.ಜೆ. ವಂದಿಸಿದರು. ವಾಣಿಶ್ರೀ ಎ.ಎಲ್. ನಿರೂಪಿಸಿದರು.

ಸಾಧಕರಿಗೆ ಸನ್ಮಾನ

ಮಾಜಿ ಸಂಸದರು, ಶಾಸಕಿ ಭಾಗೀರಥಿ ಮುರುಳ್ಯ, ಕೊಳ್ತಿಗೆ ಪ್ರಾ.ಕ.ಪ.ಸ.ಸಂಘದ ನೂತನ ಅಧ್ಯಕ್ಷ ತೀರ್ಥಾನಂದ ದುಗ್ಗಳ, ಉಪಾಧ್ಯಕ್ಷ ಜನಾರ್ದನ ಗೌಡ ಪಿ., ಕಳೆದ ಶೈಕ್ಷಣಿಕ ಸಾಲಿನ ಎಸ್ಸೆಸ್ಸೆಲ್ಸಿ, ಪಿಯುಸಿ ಪರೀಕ್ಷೆಯಲ್ಲಿ ವಿಶಿಷ್ಟ ಶ್ರೇಣಿಯಲ್ಲಿ ತೇರ್ಗಡೆಯಾದ ವಿದ್ಯಾರ್ಥಿಗಳನ್ನು, ಸವಣೂರು ವಿದ್ಯಾರಶ್ಮಿ ಸಮೂಹ ಶಿಕ್ಷಣ ಸಂಸ್ಥೆಗಳ ಸಂಚಾಲಕ ಸವಣೂರು ಕೆ.ಸೀತಾರಾಮ ರೈ, ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಕಡಬ ತಾಲೂಕು ಯೋಜನಾಧಿಕಾರಿ ಮೇದಪ್ಪ ಗೌಡ ನಾವೂರು, ಕಡಬ ತಾಲೂಕು ಜನಜಾಗೃತಿ ವೇದಿಕೆಯ ಅಧ್ಯಕ್ಷ ಮಹೇಶ್ ಕೆ.ಸವಣೂರು ಅವರನ್ನು ಸನ್ಮಾನಿಸಲಾಯಿತು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net