ಯಾದಗಿರಿ : 2026ನೇ ಸಾಲಿನ ಪದ್ಮ ಪ್ರಶಸ್ತಿಗೆ ನಾಮ ನಿರ್ದೇಶನಕ್ಕೆ ಅರ್ಜಿ ಆಹ್ವಾನಿಸಲಾಗಿದೆ ಎಂದು ಯಾದಗಿರಿ ಜಿಲ್ಲಾಧಿಕಾರಿ ಡಾ.ಸುಶೀಲಾ.ಬಿ ಅವರು ತಿಳಿಸಿದ್ದಾರೆ.
ಪದ್ಮ ಪ್ರಶಸ್ತಿಗೆ ನಾಮ ನಿರ್ದೇಶನಗಳನ್ನು ಸಲ್ಲಿಸಲು ಬಯಸುವವರು ಈಗಾಗಲೇ 2025ರ ಮಾರ್ಚ್ 15 ರಿಂದ ಪ್ರಾರಂಭಗೊAಡಿದ್ದು, ರಾಷ್ಟಿçÃಯ ಪುರಸ್ಕಾರ ವೆಬ್‌ಸೈಟ್ awards.gov.in ನಲ್ಲಿ 2025ರ ಜುಲೈ 31ರ ಒಳಗೆ ಅರ್ಜಿಸಲ್ಲಿಸಬೇಕು, ಪ್ರತಿಯೊಂದು ನಾಮ ನಿರ್ದೇಶನಗಳು ಮತ್ತು ಶಿಫಾರಸ್ಸುಗಳನ್ನು ಆನ್‌ಲೈನ್ ಮೂಲಕ ಸಲ್ಲಿಸಲ್ಲಿಸಬೇಕು.
2026ರ ಪದ್ಮ ಪ್ರಶಸ್ತಿಗಳ ಕುರಿತು ಸಂಕ್ಷಿಪ್ತ ಮಾಹಿತಿ ಪದ್ಮವಿಭೂಷಣ. ಪದ್ಮಭೂಷಣ ಮತ್ತು ಪದ್ಮಶ್ರೀ ಪ್ರಶಸ್ತಿಗಳು ದೇಶದ ಅತ್ಯುನ್ನತ ನಾಗರಿಕ ಪ್ರಶಸ್ತಿಗಳಲ್ಲಿ ಸೇರಿವೆ. 1954ರಲ್ಲಿ ಸ್ಥಾಪಿಸಲಾದ ಈ ಪ್ರಶಸ್ತಿಗಳನ್ನು ಪ್ರತಿ ವರ್ಷ ಗಣರಾಜ್ಯೋತ್ಸವದ ಸಂದರ್ಭದಲ್ಲಿ ಘೋಷಿಸಲಾಗುತ್ತದೆ. ಈ ಪ್ರಶಸ್ತಿಯು 'ವಿಶಿಷ್ಟ ಕಾರ್ಯವನ್ನು ಗುರುತಿಸಲು ಪ್ರಯತ್ನಿಸುತ್ತದೆ ಮತ್ತು ಕಲೆ, ಸಾಹಿತ್ಯ ಮತ್ತು ಶಿಕ್ಷಣ. ಕ್ರೀಡ, ಔಷಧ ಸಾಮಾಜಿಕ ಕಾರ್ಯ. ವಿಜ್ಞಾನ ಮತ್ತು ಎಂಜಿನಿಯರಿAಗ್, ಸಾರ್ವಜನಿಕ ವ್ಯವಹಾರಗಳು, ನಾಗರಿಕ ಸೇವೆ, ವ್ಯಾಪಾರ ಮತ್ತು ಕೈಗಾರಿಕೆ ಮುಂತಾದ ಎಲ್ಲಾ ಕ್ಷೇತ್ರಗಳು, ವಿಭಾಗಗಳಲ್ಲಿ ವಿಶಿಷ್ಟ ಮತ್ತು ಅಸಾಧಾರಣ ಸಾಧನೆಗಳು, ಸೇವೆಗಾಗಿ ನೀಡಲಾಗುತ್ತದೆ. ಜನಾಂಗ, ಉದ್ಯೋಗ, ಸ್ನಾನ ಅಥವಾ ಲಿಂಗದ ಭೇದವಿಲ್ಲದೆ ಎಲ್ಲಾ ವ್ಯಕ್ತಿಗಳು ಈ ಪ್ರಶಸ್ತಿಗಳಿಗೆ ಅರ್ಹರಿರುತ್ತಾರೆ. 2026ನೇ ಸಾಲಿನ ಪದ್ಮ ಪ್ರಶಸ್ತಿಗೆ ಆನ್‌ಲೈನ್‌ನಲ್ಲಿ ನಾಮ ನಿರ್ದೇಶನವನ್ನು ಸಲ್ಲಿಸಲು 2025ರ ಜುಲೈ 31ರ ಒಳಗೆ ಅರ್ಜಿಸಲ್ಲಿಸಬೇಕು, ನಂತರ ಯಾವುದೇ ಕಾರಣಕ್ಕೂ ದಿನಾಂಕವನ್ನು ವಿಸ್ತರಿಸಲಾಗುವುದಿಲ್ಲ ಎಂದು ಸರ್ಕಾರದ ಪತ್ರದಲ್ಲಿ ತಿಳಿಸಲಾಗಿರುತ್ತದೆ. ಹಾಗೂ 2026ನೇ ಸಾಲಿನ ಪದ್ಮ ಪ್ರಶಸ್ತಿಗೆ ನಾಮನಿರ್ದೇಶನ, ಶಿಫಾರಸ್ಸುಗಳನ್ನು ಸಲ್ಲಿಸುವವರು 2025ರ ಜುಲೈ 31ರ ಒಳಗೆ ಪ್ರಕಟಿಸಲಾಗಿರುವ ಅರ್ಜಿ ಪ್ರಪತ್ರ ನಮೂನೆಯಲ್ಲಿ ಭರ್ತಿಮಾಡಿ ಆನ್‌ಲೈನ್ ಮುಖಾಂತರ ಸಲ್ಲಿಸಬೇಕು ಎಂದು ತಿಳಿಸಿದ್ದಾರೆ