ಮಾ.19ರಂದು ಪ್ರಶಸ್ತಿ ಪ್ರದಾನ ಸಮಾರಂಭ: ಪ್ರತಿಷ್ಠಾನದ ಅಧ್ಯಕ್ಷ ಬಿ.ಎಂ.ನಂಜೇಗೌಡ ಮಾಹಿತಿ

Padma G. Made Gowda Foundation Press Conference Mandya
Published on

ಮಂಡ್ಯ: ಪದ್ಮಾ ಜಿ.ಮಾದೇಗೌಡ ಪ್ರತಿಷ್ಠಾನದ ವತಿಯಿಂದ 11ನೇ ವರ್ಷದ ಪದ್ಮಾ ಜಿ.ಮಾದೇಗೌಡ ಮಹಿಳಾ ಸೇವಾ ಪ್ರಶಸ್ತಿ ಪ್ರದಾನ ಸಮಾರಂಭ ಮತ್ತು ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆ ಕಾರ್ಯಕ್ರಮವನ್ನು ಮಾ.19ರಂದು ಬೆಳಗ್ಗೆ 10.30ಕ್ಕೆ ಮದ್ದೂರು ತಾಲೂಕಿನ ಕೆ.ಎಂ.ದೊಡ್ಡಿ ಭಾರತಿ ಕಾಲೇಜು ಆವರಣದ ಕುವೆಂಪು ಸಭಾಂಗಣದಲ್ಲಿ ಆಯೋಜಿಸಲಾಗಿದೆ ಎಂದು ಪ್ರತಿಷ್ಠಾನದ ಅಧ್ಯಕ್ಷ ಬಿ.ಎಂ.ನಂಜೇಗೌಡ ತಿಳಿಸಿದರು.

ಜಲಸಾರಿಗೆ ನಿಗಮದ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಜಯರಾಂ ರಾಯಪುರ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಜಿಪಂ ಸಿಇಒ ಕೆ.ಆರ್.ನಂದಿನಿ ಅವರಿಗೆ ಪ್ರಶಸ್ತಿ ಪ್ರದಾನ ಮಾಡಲಿದ್ದಾರೆ. ಮೈಸೂರಿನ ಶಾರದಾ ಪ್ರಥಮ ದರ್ಜೆ ಕಾಲೇಜಿನ ಪ್ರಾಂಶುಪಾಲೆ ಡಾ.ಅನುಸೂಯ ಹೊಂಬಾಳೆ ಪ್ರಧಾನ ಭಾಷಣ ಮಾಡಲಿದ್ದು, ಲಿಡ್ಕರ್ ಸಂಸ್ಥೆಯ ವ್ಯವಸ್ಥಾಪಕ ನಿರ್ದೇಶಕಿ ಡಾ.ವಸುಂದರಾ ಮುಖ್ಯ ಅತಿಥಿಗಳಾಗಿ ಭಾಗವಹಿಸುವರು. ಪದ್ಮಾ ಜಿ.ಮಾದೇಗೌಡ, ವಿಧಾನ ಪರಿಷತ್ ಸದಸ್ಯ ಮಧು ಜಿ.ಮಾದೇಗೌಡ, ಬಿಇಟಿ ಸಿಇಒ ಆಶಯ್ ಉಪಸ್ಥಿತರಿರಲಿದ್ದಾರೆ ಎಂದು ಸುದ್ದಿಗೋಷ್ಠಿಯಲ್ಲಿ ವಿವರಿಸಿದರು.

ಭಾರತಿ ಕಾಲೇಜಿನ ಸಹಾಯಕ ಪ್ರಾಧ್ಯಾಪಕಿ ಎಂ.ಮಮತಾ, ಪ್ರತಿಮಾ, ಟಿ.ರಶ್ಮಿ ಡಾ.ಛಾಯಾ, ಡಾ.ಎಸ್.ಸಹನಾ ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net