ಪದ್ಮನಾಭ ನರಿಂಗಾನ ನಿಧನ

Padmanabha Naringana
Published on



ಹಿರಿಯ ಕಾಂಗ್ರೆಸ್ ಮುಖಂಡ, ಜಿಲ್ಲಾ ಕಾಂಗ್ರೆಸ್ ಉಪಾಧ್ಯಕ್ಷ ಪದ್ಮನಾಭ ನರಿಂಗಾನ ಅವರ ನಿಧನಕ್ಕೆ ದ.ಕ.ಜಿಲ್ಲಾ
ಕಾಂಗ್ರೆಸ್ ಸಮಿತಿ ತೀವ್ರ ಸಂತಾಪ ಸೂಚಿಸಿದೆ.
ಪದ್ಮನಾಭ ನರಿಂಗಾನ ಅವರು 20 ಅಂಶದ ಕಾರ್ಯಕ್ರಮದ ಸದಸ್ಯರಾಗಿ, ಜಿಲ್ಲಾ ಕಾಂಗ್ರೆಸ್ ಎಸ್ಸಿ-ಎಸ್ಟಿ
ಅಧ್ಯಕ್ಷರಾಗಿ, ಅಹಿಂದ ಜಿಲ್ಲಾಧ್ಯಕ್ಷರಾಗಿ, ನರಿಂಗಾನ ಗ್ರಾಮ ಪಂಚಾಯತ್ ಮಾಜಿ ಉಪಾಧ್ಯಕ್ಷರಾಗಿ, ಗ್ರಾಮ
ಪಂಚಾಯತ್ ಸದಸ್ಯರಾಗಿ, ಕೈರಂಗಳ ಸಹಕಾರಿ ಬ್ಯಾಂಕ್ ನಿರ್ದೇಶಕರಾಗಿ, ಸ್ಥಳೀಯ ದೇವಸ್ಥಾನ, ದೈವಸ್ಥಾನದ
ಆಡಳಿತ ಮಂಡಳಿ ಸದಸ್ಯರಾಗಿ, ನರಿಂಗಾನ ಕಂಬಳ ಸಮಿತಿ ಗೌರವ ಸಲಹೆಗಾರರಾಗಿ ಸೇವೆ ಸಲ್ಲಿಸಿದ್ದಾರೆ. ಸಾಮಾಜಿಕ
ಕ್ಷೇತ್ರದ ಸೇವೆಗಾಗಿ ಈ ಬಾರಿಯ ದಕ್ಷಿಣ ಕನ್ನಡ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತರಾಗಿದ್ದರು.
ಮೃತರು ಪತ್ನಿ, ಇಬ್ಬರು ಪುತ್ರಿಯರು, ಪುತ್ರ, ಮೊಮ್ಮಕ್ಕಳನ್ನು ಅಗಲಿದ್ದಾರೆ.
ಅಂತಿಮ ದರ್ಶನ: ಫೆ 8. ರಂದು ಬೆಳಿಗ್ಗೆ 10 ಗಂಟೆಗೆ ನರಿಂಗಾನದ ಸ್ವಗೃಹದಲ್ಲಿ ಸಾರ್ವಜನಿಕ ದರ್ಶದ ಬಳಿಕ
ಅಂತ್ಯಕ್ರಿಯೆ ನಡೆಯಲಿದೆ ಎಂದು ಕುಟುಂಬಸ್ಥರು ತಿಳಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net