

ಮೈಸೂರು: ನಗರದ ಮಾನಸಗಂಗೋತ್ರಿಯ ಮಾನವಿಕ ಸಭಾಂಗಣದಲ್ಲಿ ಶನಿವಾರ ಆಯೋಜಿಸಿದ್ದ ಸಮಾರಂಭದಲ್ಲಿ ಪದ್ಮಪಾಣಿ ಲಲಿತಕಲಾ ಅಕಾಡೆಮಿ ಲೋಕಾರ್ಪಣೆಗೊಂಡಿತು.
ಪದ್ಮಪಾಣಿ ಲಲಿತಕಲಾ ಅಕಾಡೆಮಿ ಗೌರವಾಧ್ಯಕ್ಷ ಸೋಸಲೆ ಗಂಗಾಧರ್ ಮಾತನಾಡಿ, ಸಾಂಸ್ಕೃತಿಕತೆಯ ಮಾರ್ಗದಲ್ಲಿ ಜನರನ್ನು ವರ್ತಮಾನದಲ್ಲಿ ಜಾಗೃತಗೊಳಿಸಲು ಹಾಗೂ ಭವಿಷತ್ ಕಾಲಕ್ಕೆ ಅಣಿಗೊಳಿಸುವ ಉದ್ದೇಶದಿಂದ ಅಕಾಡೆಮಿಯನ್ನು ಸ್ಥಾಪಿಸಲಾಗಿದೆ ಎಂದು ಹೇಳಿದರು.
ಜಿಲ್ಲಾ ಉಸ್ತುವಾರಿ ಸಚಿವ ಡಾ.ಎಚ್.ಸಿ. ಮಹದೇವಪ್ಪ ಅಕಾಡೆಮಿಯ ಲೋಗೊ ಬಿಡುಗಡೆ ಮಾಡುವ ಮೂಲಕ ಅಕಾಡೆಮಿಯನ್ನು ಉದ್ಘಾಟಿಸಿದರು. ವೇದಿಕೆಯಲ್ಲಿ ಮೈಸೂರು ವಿಶ್ವವಿದ್ಯಾಲಯದ ಲಲಿತಕಲಾ ಕಾಲೇಜಿನ ನಿವೃತ್ತ ಪ್ರಾಂಶುಪಾಲೆ ಸುಮಿತ್ರಾ ಬಾಯಿ, ಮಾಜಿ ಮೇಯರ್ ಪುರುಷೋತ್ತಮ್, ಸಮಾಜ ಸೇವಕ ಅಹಿಂದ ಜವರಪ್ಪ, ಸುಗಮ ಸಂಗೀತ ಪರಿಷತ್ ಅಧ್ಯಕ್ಷ ನಾಗರಾಜು ವಿ.ಭೈರಿ, ಕರ್ನಾಟಕ ಜಾನಪದ ಅಕಾಡೆಮಿ ಸದಸ್ಯ ಮೈಸೂರು ಗುರುರಾಜ್, ಜಾನಪದ ವಿದ್ವಾಂಸ ಪ್ರೊ. ಮೈಸೂರು ಕೃಷ್ಣಮೂರ್ತಿ, ಹಿರಿಯ ಸಂಗೀತ ವಿದ್ವಾಂಸ ಪಂಡಿತ್ ವೀರಭದ್ರಯ್ಯ ಹಿರೇಮಠ್, ಪದ್ಮಪಾಣಿ ಲಲಿತಕಲಾ ಅಕಾಡೆಮಿ ಅಧ್ಯಕ್ಷ ಡಾ. ಶಿವಕುಮಾರ್, ಉಪಾಧ್ಯಕ್ಷ ಸೋಸಲೆ ಸಿದ್ದರಾಜು ಇದ್ದರು.