ಪದ್ಮಾವತಿ ಜ್ಞಾನ ವಿಕಾಸ ಕೇಂದ್ರ ವಾರ್ಷಿಕೋತ್ಸವ

BNK shss
ತ್ರಿಪುರದಲ್ಲಿ ಪದ್ಮಾವತಿ ಜ್ಞಾನ ವಿಕಾಸ ಕೇಂದ್ರದ ವಾರ್ಷಿಕೋತ್ಸವವನ್ನು ತಾಲೂಕು ಕಸಾಪ ಅಧ್ಯಕ್ಷೆ ಭಾಗ್ಯಮ್ಮ ದೀಪ ಬೆಳಗಿಸುವುದರ ಮೂಲಕ ಉದ್ಘಾಟಿಸಿದರು. ಶಿವಾನಂದ್ ಇತರರಿದ್ದರು.
Published on

ಬಣಕಲ್: ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಿಂದ ಬಣಕಲ್ ವಲಯದ ತ್ರಿಪುರ ಕಾರ್ಯಕ್ಷೇತ್ರದಲ್ಲಿ ಮಹಿಳಾ ಜ್ಞಾನ ವಿಕಾಸ ಕಾರ್ಯಕ್ರಮದಡಿ ಪದ್ಮಾವತಿ ಜ್ಞಾನ ವಿಕಾಸ ಕೇಂದ್ರದ ವಾರ್ಷಿಕೋತ್ಸವ ಆಯೋಜಿಸಲಾಗಿತ್ತು.

ತಾಲೂಕು ಯೋಜನಾಧಿಕಾರಿ ಶಿವಾನಂದ್, ಕಸಾಪ ಅಧ್ಯಕ್ಷೆ ಭಾಗ್ಯಮ್ಮ, ಒಕ್ಕೂಟದ ಪದಾಧಿಕಾರಿಗಳು ದೀಪ ಬೆಳಗಿಸುವ ಮೂಲಕ ಉದ್ಘಾಟಿಸಿದರು. ಜ್ಞಾನ ವಿಕಾಸ ಕಾರ್ಯಕ್ರಮದಲ್ಲಿ ಸಿಗುವ ಸೌಲಭ್ಯಗಳ ಕುರಿತು ಶಿವಾನಂದ್ ಮಾಹಿತಿ ನೀಡಿದರು. ಕಾರ್ಯಕ್ರಮದ ಅಂಗವಾಗಿ ಆಟೋಟ ಸ್ಪರ್ಧೆ ಮತ್ತು ಸಾಂಸ್ಕೃತಿಕ ಕಾರ್ಯಕ್ರಮ ನಡೆಸಿ ವಿಜೇತರಿಗೆ ಬಹುಮಾನ ವಿತರಿಸಲಾಯಿತು. ಕೇಂದ್ರದ ಸದಸ್ಯರು, ವಲಯದ ಮೇಲ್ವಿಚಾರಕರು ಇತರರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net