ವಾಲಿಬಾಲ್‌ನಲ್ಲಿ ಪಡುಕುಡೂರು ಶಾಲೆ ಪ್ರಥಮ

vollyball
ಜಿಲ್ಲಾಮಟ್ಟಕ್ಕೆ ಆಯ್ಕೆಯಾದ ಪಡುಕುಡೂರು ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಬಾಲಕಿಯರ ತಂಡ
Published on

ಹೆಬ್ರಿ: ಉಡುಪಿ ಜಿಪಂ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ, ಕ್ಷೇತ್ರ ಶಿಕ್ಷಣಾಧಿಕಾರಿ ಕಚೇರಿ ಕಾರ್ಕಳ, ಬಸ್ರಿ ಬೈಲೂರು ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಸಹಯೋಗದಲ್ಲಿ ಬುಧವಾರ ಪ್ರಾಥಮಿಕ ಶಾಲಾ ಮಕ್ಕಳ ತಾಲೂಕು ಮಟ್ಟದ ವಾಲಿಬಾಲ್ ಪಂದ್ಯಾಟದಲ್ಲಿ ಪಡುಕುಡೂರು ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಬಾಲಕಿಯರ ತಂಡ ಪ್ರಥಮ ಸ್ಥಾನ ಗಳಿಸಿ ಜಿಲ್ಲಾಮಟ್ಟಕ್ಕೆ ಆಯ್ಕೆಯಾಗಿದೆ.

ವಿದ್ಯಾರ್ಥಿಗಳ ಸಾಧನೆಗೆ ಮುಖ್ಯ ಶಿಕ್ಷಕ ಹರೀಶ್ ಪೂಜಾರಿ ಎಸ್., ಶಾಲಾಭಿವೃದ್ಧಿ ಸಮಿತಿ ಅಧ್ಯಕ್ಷ ರವಿ ಶೆಟ್ಟಿ, ಸದಸ್ಯರು, ಶಿಕ್ಷಕರು, ಹಳೇ ವಿದ್ಯಾರ್ಥಿ ಸಂಘ ಅಧ್ಯಕ್ಷ ಪ್ರಸನ್ನ ಶೆಟ್ಟಿ ಜಯಲೀಲ, ಗೌರವಾಧ್ಯಕ್ಷ ಪಡುಪರ್ಕಳ ಹರೀಶ ಶೆಟ್ಟಿ, ಪಡುಕುಡೂರಿನ ಪ್ರಮುಖರು ಅಭಿನಂದನೆ ಸಲ್ಲಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net