ಬ್ರೖೆಟ್ ಬಿಜಿನೆಸ್ ಸ್ಕೂಲ್​ನಲ್ಲಿ ಚಿತ್ರಕಲೆ ಸ್ಪರ್ಧೆ

New bright new
Published on

ಹುಬ್ಬಳ್ಳಿ : ವಿಶ್ವ ಪರಿಸರ ದಿನದ ಅಂಗವಾಗಿ ಇಲ್ಲಿನ ಗೋಕುಲ ರಸ್ತೆಯ ಬ್ರೖೆಟ್ ಬಿಜಿನೆಸ್ ಸ್ಕೂಲ್​ನಲ್ಲಿ ಇತ್ತೀಚೆಗೆ ಟೀ ಶರ್ಟ್ ಮೇಲೆ ಚಿತ್ರ ಬಿಡಿಸುವ ಸ್ಪರ್ಧೆ ಆಯೋಜಿಸಲಾಗಿತ್ತು.

ಉದ್ಘಾಟಿಸಿ ಮಾತನಾಡಿದ ಬ್ರೖೆಟ್ ಬಿಜಿನೆಸ್ ಸ್ಕೂಲ್ ನಿರ್ದೇಶಕ ಡಾ. ಪ್ರಸಾದ ರೂಡಗಿ, ಪರಿಸರ ಸಂರಕ್ಷಣೆಯ ಮಹತ್ವ ವಿವರಿಸಿದರು.

100 ಕ್ಕೂ ಹೆಚ್ಚು ವಿದ್ಯಾರ್ಥಿಗಳು ಸ್ಪರ್ಧೆಯಲ್ಲಿ ಭಾಗವಹಿಸಿದ್ದರು. ಪರಿಸರ ಮಾಲಿನ್ಯ, ಹವಾಮಾನ ಬದಲಾವಣೆ, ಅರಣ್ಯನಾಶ, ವಿವಿಧ ಪರಿಸರ ಕಾಳಜಿಗಳನ್ನು ಚಿತ್ರಿಸಲು ತಮ್ಮ ಕಲಾತ್ಮಕ ಕೌಶಲಗಳನ್ನು ಬಳಸಿದರು.

ವಿದ್ಯಾರ್ಥಿಗಳು, ಶಿಕ್ಷಕರು ಹಾಗೂ ಶಿಕ್ಷಕೇತರ ಸಿಬ್ಬಂದಿ ಉಪಸ್ಥಿತರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net