

ವಿಜಯವಾಣಿ ಸುದ್ದಿಜಾಲ ಧಾರವಾಡ
ನಗರದ ಶಾಂತೇಶ ಎಜುಕೇಶನ್ ಸೊಸೈಟಿಯ ಶ್ರೀಮತಿ ವಿದ್ಯಾ ಪಿ. ಹಂಚಿನಮನಿ ಅಂತಾರಾಷ್ಟ್ರೀಯ ಶಾಲೆಯಲ್ಲಿ ಎಲ್ಕೆಜಿಯಿಂದ 8ನೇತರಗತಿ ವರೆಗಿನ ಮಕ್ಕಳಿಗೆ ಶನಿವಾರ ಜಿಲ್ಲಾಮಟ್ಟದ ಚಿತ್ರಕಲಾ ಸ್ಪರ್ಧೆ ಆಯೋಜಿಸಲಾಗಿತ್ತು.
ಶಿಕ್ಷಣ ಸಂಯೋಜಕ ಶ್ರೀನಿವಾಸ ಸವಣೂರ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು. ಪೇಂಟಿಂಗ್ ವಿಷಯ ಕುರಿತು ಆಕಾಶವಾಣಿ ನಿವೃತ್ತ ನಿರ್ದೇಶಕ ಸಿ.ಯು. ಬೆಳ್ಳಕ್ಕಿ ಪಾಲಕರೊಂದಿಗೆ ಸಂವಾದ ನಡೆಸಿದರು.
4 ವಿಭಾಗಗಳಲ್ಲಿ ಒಟ್ಟು 1278 ಮಕ್ಕಳು ಸ್ಪರ್ಧೆಯಲ್ಲಿ ಪಾಲ್ಗೊಂಡಿದ್ದರು. ಯುವ ಚಿತ್ರ ಕಲಾವಿದ ಮಹೇಶ ಉಮ್ತಾರ, ಸಂತೋಷ ನಿರ್ಣಾಯಕರಾಗಿ ಆಗಮಿಸಿದ್ದರು. ಶಾಂತೇಶ ಎಜುಕೇಶನ್ ಸೊಸೈಟಿ ಅಧ್ಯಕ್ಷ ಪ್ರೊ. ಪ್ರಹ್ಲಾದ್ ಹಂಚಿನಮನಿ, ಕಾರ್ಯದರ್ಶಿ ಮನೋಜ ಹಂಚಿನಮನಿ, ಸಹಕಾರ್ಯದರ್ಶಿ ವರ್ಷಾ ಹಂಚಿನಮನಿ ಇತರರು ಇದ್ದರು.
ವಿದ್ವಾನ್ ನವೀನ್ ಭಟ್ ಪ್ರಾಸ್ತಾವಿಕವಾಗಿ ಮಾತನಾಡಿದರು. ಶೈಲಜಾ ಹಾಗೂ ವಾಣಿ ಕುಲಕರ್ಣಿ ನಿರೂಪಿಸಿದರು.