ಉಚ್ಚಿಲ ದಸರಾ ಮಹೋತ್ಸವ; ಚಿತ್ರ ಬಿಡಿಸುವ ಸ್ಪರ್ಧೆ

Published on

ಮಹಾಲಕ್ಷ್ಮೀ ಕೋ-ಆಪ್​ ಬ್ಯಾಂಕ್​ ಅಧ್ಯಕ್ಷ ಯಶ್​ಪಾಲ್​ ಸುವರ್ಣ ಮಾಹಿತಿ

ಅ.5ರಂದು ಉಚ್ಚಿಲ ಮೊಗವೀರ ಭವನದಲ್ಲಿ ಆಯೋಜನೆ

ಉಡುಪಿ: ಉಚ್ಚಿಲ ದಸರಾ ಮಹೋತ್ಸವದ ನಿಮಿತ್ತ ಮಹಾಲಕ್ಷ್ಮೀ ಕೋ-ಆಪರೇಟಿವ್​ ಬ್ಯಾಂಕ್​ ವತಿಯಿಂದ ಉಚ್ಚಿಲ ಶ್ರೀಮಹಾಲಕ್ಷ್ಮೀ ದೇವಸ್ಥಾನದ ಸಹಯೋಗದೊಂದಿಗೆ ಅ.5ರಂದು ಮಧ್ಯಾಹ್ನ 2 ಗಂಟೆಗೆ ಉಚ್ಚಿಲ ಮೊಗವೀರ ಭವನದಲ್ಲಿ ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲಾ ಮಟ್ಟದ ಚಿತ್ರ ಬಿಡಿಸುವ ಸ್ಪರ್ಧೆ ಆಯೋಜಿಸಿದ್ದಾಗಿ ಬ್ಯಾಂಕ್​ನ ಅಧ್ಯಕ್ಷ, ಉಡುಪಿ ಶಾಸಕ ಯಶ್​ಪಾಲ್​ ಸುವರ್ಣ ತಿಳಿಸಿದ್ದಾರೆ.

ಸ್ಪರ್ಧೆಯಲ್ಲಿ ನಾಡಹಬ್ಬ ದಸರಾವನ್ನು ಚಿತ್ರ ರಚನೆಯ ವಿಷಯವಾಗಿ ಆಯ್ಕೆ ಮಾಡಿದ್ದು, ಈ ವಿಷಯಕ್ಕೆ ಸಂಬಂಧಿಸಿದ ಚಿತ್ರವನ್ನೇ ಬಿಡಿಸಬೇಕು.

UDP-20-2-Mahalaxmi
ಯಶ್​ಪಾಲ್​ ಸುವರ್ಣ. ಶಾಸಕ

ಐದು ವಿಭಾಗಗಳಲ್ಲಿ ಸ್ಪರ್ಧೆ

ಒಟ್ಟು ಐದು ವಿಭಾಗಗಳಲ್ಲಿ ಸ್ಪರ್ಧೆ ಆಯೋಜಿಸಲಾಗಿದೆ. ಕಿರಿಯರ ವಿಭಾಗ (1ರಿಂದ 4ನೇ ತರಗತಿ), ಪ್ರಾಥಮಿಕ ವಿಭಾಗ (5ರಿಂದ 7ನೇ ತರಗತಿ), ಹೈಸ್ಕೂಲ್​ ವಿಭಾಗ (8ರಿಂದ 10ನೇ ತರಗತಿ), ಕಾಲೇಜು ವಿಭಾಗ (ಪದವಿ ಪೂರ್ವ ಮತ್ತು ಪದವಿ ತರಗತಿ) ಹಾಗೂ ಸಾರ್ವಜನಿಕ ವಿಭಾಗದಲ್ಲಿ ಮುಕ್ತ ಅವಕಾಶ ಕಲ್ಪಿಸಲಾಗಿದೆ.

ವಿಜೇತರಿಗೆ ನಗದು ಬಹುಮಾನ

ಡ್ರಾಯಿಂಗ್​ ಶೀಟ್​ ಸ್ಥಳದಲ್ಲೇ ಒದಗಿಸಲಿದ್ದು, ಉಳಿದ ಪರಿಕರಗಳನ್ನು ಸ್ಪರ್ಧಾಳುಗಳೇ ತರತಕ್ಕದ್ದು. ಪ್ರತಿ ವಿಭಾಗದಲ್ಲಿ ಪ್ರಥಮ, ದ್ವಿತೀಯ, ತೃತೀಯ ಹಾಗೂ 3 ಸಮಾಧಾನಕರ ಪ್ರಶಸ್ತಿಯಿದೆ. ವಿಜೇತರಿಗೆ ನಗದು ಬಹುಮಾನ, ಸ್ಮರಣಿಕೆ, ಪ್ರಶಸ್ತಿ ಪ್ರಮಾಣಪತ್ರ ನೀಡಲಾಗುವುದು. ಸ್ಪರ್ಧೆಯಲ್ಲಿ ಭಾಗವಹಿಸುವ ಎಲ್ಲರಿಗೂ ಪ್ರಮಾಣಪತ್ರ ಹಾಗೂ ಸ್ಮರಣಿಕೆ ನೀಡಿ ಪುರಸ್ಕರಿಸಲಾಗುವುದು ಎಂದು ಯಶ್​ಪಾಲ್​ ಸುವರ್ಣ ತಿಳಿಸಿದ್ದಾರೆ

ಆನ್​ಲೈನ್​ ನೋಂದಣಿಗೂ ಅವಕಾಶ

ಚಿತ್ರ ಬಿಡಿಸುವ ಸ್ಪರ್ಧೆಯಲ್ಲಿ ಭಾಗವಹಿಸುವವರಿಗೆ ಆನ್​ಲೈನ್​ ಮೂಲಕವೂ ಹೆಸರು ನೋಂದಣಿಗೆ ಅವಕಾಶವಿದೆ. ಸ್ಫರ್ಧೆಯ ವಿವರಗಳು ಹಾಗೂ ನೋಂದಣಿಗಾಗಿ ಮಹಾಲಕ್ಷ್ಮೀ ಬ್ಯಾಂಕ್​ನ ವೆಬ್​ಸೈಟ್​ www.mahalakshmicoopbank.com ಹಾಗೂ ಮಾಹಿತಿಗಾಗಿ ಮೊ.ಸಂ. 9972120332, 9845016830 ಸಂಪರ್ಕಿಸಬಹುದು. ಸಾರ್ವಜನಿಕರೂ ಸಹ ಈ ಸ್ಪರ್ಧೆಯಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಕಾರ್ಯಕ್ರಮ ಯಶಸ್ವಿಗೊಳಿಸುವಂತೆ ಯಶ್​ಪಾಲ್​ ಸುವರ್ಣ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net